ತುಮಕೂರು | ಬಗರ್ ಹುಕುಂ ಸಾಗುವಳಿದಾರರ ಮೇಲೆ ಅರಣ್ಯ ಇಲಾಖೆ ದಾಳಿ; ಕೆಪಿಆರ್‌ಎಸ್‌ ಖಂಡನೆ

Date:

Advertisements
  • ಬಗರ್ ಹುಕುಂ ಜಮೀನುಗಳನ್ನು ಬಲವಂತವಾಗಿ ಕಿತ್ತುಕೊಳ್ಳಲಾಗುತ್ತಿದೆ ಎಂದು ಆರೋಪ
  • ಬಗರ್‌ ಹುಕುಂ ಬಡಸಾಗುವಳಿದಾರರನ್ನು ಒಕ್ಕಲೆಬ್ಬಿಸಲು ಸರ್ಕಾರದಿಂದ ಹುನ್ನಾರ

ಬಗರ್ ಹುಕುಂ ಸಾಗುವಳಿ ಸಕ್ರಮ ಕೋರಿ ಅರ್ಜಿಗಳು ಇತ್ಯರ್ಥಕ್ಕೆ ಬಾಕಿ ಇರುವಾಗ ಅರಣ್ಯ ಇಲಾಖೆ ಸೇರಿದಂತೆ ಯಾರೂ ಕೂಡ ರೈತರ ಸಾಗುವಳಿ ಸ್ವಾಧೀನಕ್ಕೆ ಅಡ್ಡಿ ಮಾಡದಂತೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಿದರು.

“ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಚೇಳೂರು ಹೋಬಳಿಯ ಮಂಚಲದೊರೆ, ಅಂಕಸಂದ್ರ ಗ್ರಾಮ ಪಂಚಾಯತಿಯ 35 ಗ್ರಾಮಗಳ ಸುಮಾರು ಎರಡು ಸಾವಿರಕ್ಕಿಂತಲೂ ಅಧಿಕ ಬಡಸಾಗುವಳಿದಾರರು ಸಲ್ಲಿಸಿದ ಹಕ್ಕುಪತ್ರದ ಅರ್ಜಿಗಳನ್ನು ವಿಲೇವಾರಿ ಮಾಡಿಲ್ಲ. ಆದರೆ ಬಡಸಾಗುವಳಿದಾರರನ್ನು ಅರಣ್ಯ ಇಲಾಖೆ ಸಿಬ್ಬಂದಿ ಮೂಲಕ ಬೆದರಿಸಿ ಒಕ್ಕಲೆಬ್ಬಿಸುವ ಕುತಂತ್ರವನ್ನು ನಿಲ್ಲಿಸಬೇಕು” ಎಂದು ಕರ್ನಾಟಕ ಪ್ರಾಂತ ರೈತ ಸಂಘ ಆಗ್ರಹಿಸಿದೆ.

“ರೈತರ ಮೇಲಿನ ದೌರ್ಜನ್ಯ ನಡೆಸಿರುವ ಗುಬ್ಬಿ ಎಸಿಎಫ್ ಮಹೇಶ್, ರೇಂಜರ್ ದುಗ್ಗಯ್ಯ ಸೇರಿದಂತೆ ಅರಣ್ಯ ಇಲಾಖೆಯ ಎಲ್ಲ ಸಿಬ್ಬಂದಿಗಳನ್ನು ಕೆಲಸದಿಂದ ವಜಾ ಮಾಡಬೇಕು. ಒಕ್ಕಲೆಬ್ಬಿಸುವ ಕುತಂತ್ರಗಳನ್ನು ನಿಲ್ಲಿಸುವಂತೆ ರಾಜ್ಯ ಸರ್ಕಾರ ಕೂಡಲೇ ಕ್ರಮ ವಹಿಸಬೇಕು” ಎಂದು ರೈತ ಸಂಘ ಒತ್ತಾಯಿಸಿದೆ.

“ಬಡಸಾಗುವಳಿದಾರರನ್ನು ಒಕ್ಕಲೆಬ್ಬಿಸಲು ಅರಣ್ಯ ಇಲಾಖೆ ನಡೆಸಿರುವ ಮಾರಣಾಂತಿಕ ದಾಳಿಯಿಂದ ಗುಬ್ಬಿ ತಾಲೂಕು ರೈತ ಸಂಘದ ಅಧ್ಯಕ್ಷ ದೊಡ್ಡ ನಂಜಯ್ಯ ಅವರ ತಲೆಗೆ ತೀವ್ರ ಪೆಟ್ಟಾಗಿದ್ದು, ಸುಮಾರು 35 ಹೊಲಿಗೆಗಳನ್ನು ಹಾಕಲಾಗಿದೆ. ಅವರು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಪರಿಶಿಷ್ಟ ಸಮುದಾಯಕ್ಕೆ ಸೇರಿದ ಮಹಿಳೆಯರು ಸೇರಿದಂತೆ ಇತರರರಿಗೂ ಗಂಭೀರ ಗಾಯಗಳಾಗಿವೆ” ಎಂದು ಸಂಘವು ಅಸಮಾಧಾನ ವ್ಯಕ್ತಪಡಿಸಿದೆ.

ಸರ್ಕಾರಗಳು ಪಾರಂ 50, 53 ಮತ್ತು 57ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದವು. ಅದರಂತೆ ಚೇಳೂರು ಹೋಬಳಿಯ ರೈತರು ಅರ್ಜಿಗಳನ್ನು ಸಲ್ಲಿಸಿದ್ದರು. ಈಗ ಎಲ್ಲ ಅರ್ಜಿಗಳು ಪೆಂಡಿಂಗ್ ಇರುವಾಗಲೇ ಅರಣ್ಯ ಇಲಾಖೆಯ ಮೂಲಕ ರೈತರ ಬಗರ್ ಹುಕುಂ ಸಾಗುವಳಿಯ ಜಮೀನುಗಳನ್ನು ಬಲವಂತವಾಗಿ ಕಿತ್ತುಕೊಳ್ಳಲಾಗುತ್ತಿದೆ. ಇದಕ್ಕಾಗಿ ಅರಣ್ಯ ಇಲಾಖೆಯನ್ನು ದುರ್ಬಳಕೆ ಮಾಡಲಾಗುತ್ತಿದೆ” ಎಂದು ಆರೋಪಿಸಿದರು.

“ಗೂಂಡಾಗಳನ್ನು ಬಳಸಿ ಅರಣ್ಯ ಇಲಾಖೆ ನಡೆಸಿರುವ ದೌರ್ಜನ್ಯದಿಂದ ನೊಂದ ಎಲ್ಲ ರೈತರಿಗೆ ಕನಿಷ್ಠ ಒಂದು ಲಕ್ಷ ಪರಿಹಾರ ಘೋಷಿಸಬೇಕು” ಎಂದು ಸಂಘದ ಮುಖಂಡರು ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ಅರಣ್ಯ ಇಲಾಖೆ, ಪೊಲೀಸ್‌ ಅಧಿಕಾರಿಗಳಿಂದ ಹಲ್ಲೆ; ರೈತರಿಗೆ ಗಂಭೀರ ಗಾಯ

ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಜಿ ಸಿ ಬಯ್ಯಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಟಿ ಯಶವಂತ ಸೇರಿದಂತೆ ಇತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಡುಕೋಣ ದಾಳಿ ವ್ಯಕ್ತಿ ಗಂಭೀರ

ಕಾಡುಕೋಣ ದಾಳಿಯಿಂದ ವ್ಯಕ್ತಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೂರು...

ರಾಯಚೂರು | ರಕ್ತಹೀನತೆ, ತಾಯಿ ಶಿಶು ಮರಣ ನಿಯಂತ್ರಣಕ್ಕೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ,...

ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ...

Download Eedina App Android / iOS

X