ತುಮಕೂರು | ಪರಿಸರದೊಂದಿಗಿನ ಸ್ನೇಹ ಎಂಥವರನ್ನೂ ಪುಳಕಿತಗೊಳಿಸುತ್ತದೆ: ಸಾಲುಮರದ ತಿಮ್ಮಕ್ಕ

Date:

Advertisements

ಪರಿಸರದೊಂದಿಗಿನ ಸ್ನೇಹ ಎಂಥವರನ್ನೂ ಪುಳಕಿತಗೊಳಿಸುತ್ತದೆ ಎಂದು ಪದ್ಮಶ್ರೀ, ನಾಡೋಜ ಸಾಲುಮರದ ತಿಮ್ಮಕ್ಕ ಹೇಳಿದರು.

ತುಮಕೂರು ತಾಲೂಕು ಶ್ರೀವೀರಭದ್ರೇಶ್ವರಸ್ವಾಮಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

“ಪರಿಸರ ಸಂರಕ್ಷಣೆಗೆ ನಾವು ಮುಂದಾಗದಿದ್ದರೆ, ನಮ್ಮ ಮಕ್ಕಳು ಶಾಪಕ್ಕೆ ಗುರಿಯಾಗಬೇಕಾಗುತ್ತದೆ. ಹಾಗಾಗಿ ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗೆ ಮುಂದಾಗಬೇಕಾಗದ ಅಗತ್ಯವಿದೆ. ನಾನಾಗಲಿ, ನನ್ನ ಪತಿಯಾಗಲಿ, ಪ್ರಶಸ್ತಿಯ ಆಸೆಯಿಂದ ಗಿಡಮರಗಳನ್ನು ನೆಡಲಿಲ್ಲ. ನಮಗೆ ಮತ್ತು ದಾರಿಹೋಕರ ನೆರಳಿಗೋಸ್ಕರ ರಸ್ತೆಯ ಇಕ್ಕೆಲಗಳಲ್ಲಿ ಆಲ, ಗೋಣಿ ಮರಗಳನ್ನು ನೆಟ್ಟು, ದೂರದಿಂದ ನೀರು ತಂದುಹಾಕಿ ಪೋಷಿಸಿದೆವು. ಇಂದಿಗೂ ಅವುಗಳನ್ನು ನೋಡಿದರೆ ಏನೋ ಸಂತೋಷವಾಗುತ್ತದೆ. ಮನಸ್ಸು ಉಲ್ಲಾಸಗೊಳ್ಳುತ್ತದೆ. ಹಾಗಾಗಿ ಪರಿಸರದೊಂದಿಗಿನ ಸ್ನೇಹ ಎಂಥವರನ್ನೂ ಪುಳಕಿತಗೊಳಿಸುತ್ತದೆ” ಎಂದು ಪದ್ಮಶ್ರೀ ಸಾಲುಮರದ ತಿಮ್ಮಕ್ಕ ನುಡಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಸೇವೆ ಮರೆತ ಶಿಕ್ಷಣ ಕ್ಷೇತ್ರ ಉದ್ಯಮವಾಗಿದೆ: ಕಸಾಪ ಜಿಲ್ಲಾಧ್ಯಕ್ಷ ಸಿದ್ಧಲಿಂಗಪ್ಪ

ನಮ್ಮ ಕಾಲದಲ್ಲಿ ಓದು, ಬರಹಕ್ಕೆ ಅಷ್ಟು ಪ್ರಾಮುಖ್ಯತೆ ಇರಲಿಲ್ಲ. ಅಲ್ಲದೆ ಹೆಣ್ಣು ಮಕ್ಕಳಿಗೆ ಓದು, ಬರಹ ಕಷ್ಟಾಸಾಧ್ಯವಾಗಿತ್ತು. ಇಂದು ಸರ್ಕಾರವೇ ಎಲ್ಲ ರೀತಿಯ ಸವಲತ್ತುಗಳನ್ನು ನೀಡಿ ಪ್ರೋತ್ಸಾಹ ನೀಡುತ್ತಿದೆ. ಇದರ ಲಾಭವನ್ನು ಪಡೆದುಕೊಂಡು ಉತ್ತಮ ಅಂಕಗಳೊಂದಿಗೆ ಒಳ್ಳೆಯ ಪ್ರಜೆಗಳಾಗಿ ಸಮಾಜಕ್ಕೆ, ತಂದೆ-ತಾಯಿಗಳಿಗೆ, ಓದಿದ ಶಾಲೆಗೆ ಕೀರ್ತಿ ತರಬೇಕು” ಎಂದು ಮಕ್ಕಳಿಗೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ರಾಜಣ್ಣ, ಎಸ್ ಗುರುಮೂರ್ತಿ, ಉದ್ಯಮಿ ಪ್ರಕಾಶ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X