ತುಮಕೂರು | ಜಿಲೆಟಿನ್ ಸ್ಪೋಟ : ವಿದ್ಯಾರ್ಥಿ ಮೋನಿಶ್‌ಗೆ ಧೈರ್ಯ ತುಂಬಿದ ಜಿಲ್ಲಾಧಿಕಾರಿ

Date:

ಜಿಲೆಟಿನ್ ಸ್ಪೋಟದಿಂದ ತುಮಕೂರು ನಗರದ ಗಂಗಾ ಆಸ್ಪತ್ರೆಗೆ ದಾಖಲಾಗಿದ್ದ ಜಿಲ್ಲೆಯ ಗುಬ್ಬಿ ತಾಲ್ಲೂಕು ಸಿಎಸ್ ಪುರ ಹೋಬಳಿ ಇಡಗೂರು ಗ್ರಾಮದ ಸರ್ಕಾರಿ ಹಿರಿಯ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಮೋನಿಶ್ ಗೌಡ ಅವರನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೋಮವಾರ ಸಂಜೆ ಭೇಟಿ ಮಾಡಿ ಧೈರ್ಯ ತುಂಬಿದರು.

- Advertisement -

ಶಾಲೆಯಲ್ಲಿ ದಸರಾ ರಜೆ ಹಿನ್ನೆಲೆ 10ನೇ ತರಗತಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಯುತ್ತಿದ್ದು, ಅಕ್ಟೋಬರ್ 9ರಂದು ವಿಶೇಷ ತರಗತಿಗೆಂದು ತೆರಳಿದ್ದ ಮೋನಿಶ್ ಗೌಡ ಅವರು ಶಾಲೆ ಸಮೀಪ ಕಲ್ಲಿನ ರಾಶಿ ಬಳಿಯಿದ್ದ ಜಿಲೆಟಿನ್ ಕಡ್ಡಿಯನ್ನು ಕುತೂಹಲದಿಂದ ತೆಗೆದುಕೊಂಡ ವೇಳೆ ಸ್ಫೋಟ ಸಂಭವಿಸಿದ್ದು, ಸ್ಪೋಟದಿಂದ ಮೋನಿಶ್ ಗೌಡನ ಬಲಗೈನ ಮೂರು ಬೆರಳುಗಳು ತುಂಡಾಗಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...
1000545460

ತುಮಕೂರು ನಗರದ ಗಂಗಾ ಆಸ್ಪತ್ರೆಗೆ ತೆರಳಿ ವಿದ್ಯಾರ್ಥಿ ಮತ್ತು ಆತನ ತಾಯಿ ನಳಿನ ಅವರಿಗೆ ಸಾಂತ್ವನ ಹೇಳಿದ ಜಿಲ್ಲಾಧಿಕಾರಿಗಳು ಚೆನ್ನಾಗಿ ಓದಿ ಉತ್ತಮ ಅಧಿಕಾರಿಯಾಗುವಂತೆ ವಿದ್ಯಾರ್ಥಿಗೆ ಕಿವಿ ಮಾತು ಹೇಳಿದರು.

ವಿದ್ಯಾರ್ಥಿಯ ಚಿಕಿತ್ಸಾ ವೆಚ್ಚವನ್ನು ಭರಿಸಲು ಕ್ರಮ ಕೈಗೊಳ್ಳಲಾಗುವುದೆಂದು ತಾಯಿ ನಳಿನ ಅವರಿಗೆ ಭರವಸೆ ನೀಡಿದರು.

1000545459

ಈ ಸಂದರ್ಭದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ತೇಜಸ್ವಿನಿ, ಕಾರ್ಯನಿರ್ವಾಹಕ ಅಧಿಕಾರಿ ಶಿವಪ್ರಕಾಶ್, ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್, ಇಡಗೂರು ಗ್ರಾಮ ಪಂಚಾಯತಿ ಪಿಡಿಓ ಕೆ. ಗುಣಶೀಲ, ಶಾಲೆಯ ಮುಖ್ಯೋಪಾಧ್ಯಾಯಿನಿ ಉಷಾ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯನನ್ನು ಕೇಂದ್ರವಾಗಿಟ್ಟುಕೊಂಡು ವೈಜ್ಞಾನಿಕವಾಗಿ ಚಿಂತಿಸಬೇಕು: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಉತ್ತರ ಕನ್ನಡ | AI, ಡಿಜಿಟಲ್ ತಂತ್ರಜ್ಞಾನ ಬಳಸಿ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು

ಕೃತಕ ಬುದ್ಧಿಮತ್ತೆ (AI) ಹಾಗೂ ಡಿಜಿಟಲ್ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಉತ್ತರ...