ತುಮಕೂರಿನ ಸಿದ್ಧಗಂಗಾ ಮಠದ ಸಮೀಪದ ಬಂಡೆಪಾಳ್ಯದ ಬಳಿ ಸೋಮವಾರ (ಮಾ.3) 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು ಮಹಿಳಾ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿಯ ಹೇಳಿಕೆ ಪಡೆದಿರುವ ತುಮಕೂರು ಪೊಲೀಸರು ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಬಾಲಕಿಯು ತನ್ನ ಸ್ನೇಹಿತನ ಜೊತೆಗೆ ಸಿದ್ಧಗಂಗಾ ಮಠದ ಜಾತ್ರೆಗೆ ಹೋಗುತ್ತಿದ್ದಳು. ಈ ವೇಳೆ ದಣಿದು ದಾರಿ ಮಧ್ಯದ ಮರದ ಕೆಳಗಡೆ ಕುಳಿತಿದ್ದ ವೇಳೆ, ಆರೋಪಿಗಳು ಇದನ್ನು ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಅರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ನಂತರ ಬಾಲಕಿಯನ್ನು ಬೈಕ್‌ನಲ್ಲಿ ಮನೆಗೆ ಕರೆದುಕೊಂಡು ಹೋಗಿ ಇಬ್ಬರು ಅತ್ಯಾಚಾರವೆಸಗಿದ್ದಾರೆ.
ನಂತರ ಬಾಲಕಿಯನ್ನು ಮತ್ತೇ ಮಠದ ಹತ್ತಿರ ಕರೆತಂದು ಬಿಟ್ಟು ಹೋಗಿದ್ದಾರೆ. ಬಾಲಕಿಯ ಸ್ನೇಹಿತ ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
