ತುಮಕೂರು | ಕೊಬ್ಬರಿ ಖರೀದಿ ಕೇಂದ್ರದಲ್ಲಿ ಹಗಲು ದರೋಡೆ, ರೈತರಿಗೆ ಮೋಸ: ಗೋವಿಂದರಾಜು ಆರೋಪ

Date:

ರೈತರ ಕೊಬ್ಬರಿ ಖರೀದಿ ನಫೆಡ್ ಕೇಂದ್ರದಲ್ಲಿ ಪ್ರತಿ ಕ್ವಿಂಟಲ್ ಕೊಬ್ಬರಿಗೆ ₹90 ಹಮಾಲಿ ಶುಲ್ಕ ಎಂಬುದಾಗಿ ಹಗಲು ದರೋಡೆ ಮಾಡಲಾಗುತ್ತಿದೆ. ಈ ಬಗ್ಗೆ ತಹಶೀಲ್ದಾರ್ ಹಾಗೂ ಎಪಿಎಂಸಿ ಕಾರ್ಯದರ್ಶಿ ಅವರ ಗಮನ ಸೆಳೆದರೂ ಈವರೆಗೂ ಇತ್ತ ಬಂದು ರೈತರಿಗಾದ ಅನ್ಯಾಯ ಕೇಳುತ್ತಿಲ್ಲ. ವಿಷಯ ತಿಳಿದು 24 ಗಂಟೆ ಕಳೆದರೂ ನಫೆಡ್ ಕೇಂದ್ರದ ಬಳಿ ಬಂದಿಲ್ಲ. ಸಮರ್ಪಕ ಉತ್ತರ ಸಿಗದಿದ್ದರೆ ತೀವ್ರ ಹೋರಾಟ ಮಾಡಲಾಗುವುದು ಎಂದು ರೈತ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಎ ಗೋವಿಂದರಾಜು ಎಚ್ಚರಿಕೆ ನೀಡಿದರು.

- Advertisement -

ಗುಬ್ಬಿ ಪಟ್ಟಣದ ಎಪಿಎಂಸಿ ಕಚೇರಿಯಲ್ಲಿ ಅಧಿಕಾರಿಗಳ ಆಗಮನವನ್ನು ನಿರೀಕ್ಷಿಸಿ ಕಾದು ಕುಳಿತ ರೈತ ಮುಖಂಡರ ಜತೆಗೆ ಹೇಳಿಕೆ ನೀಡಿದ ಅವರು, “ಫೆಡರೇಶನ್ ಮಾರ್ಗಸೂಚಿ ಪ್ರಕಾರ 1,500 ಕೆಜಿ ಕೊಬ್ಬರಿ ಖರೀದಿ ಮಾಡುವ ಬದಲು 36 ಕೆಜಿಯ ಒಂದು ಚೀಲದಂತೆ ಓರ್ವ ರೈತನಿಂದ 42 ಚೀಲ ಖರೀದಿಸಿ ಒಟ್ಟು 1,470 ಕೆಜಿ ಮಾತ್ರ ಖರೀದಿ ನಡೆದಿದೆ. ಉಳಿದ 30 ಕೆಜಿ ಲೆಕ್ಕ ಹಾಕಿದಾಗ ನೂರಾರು ಕ್ವಿಂಟಲ್ ಕೊಬ್ಬರಿ ಖರೀದಿಗೆ ವರ್ತಕರಿಗೆ ಅವಕಾಶ ನೀಡಿದ್ದಾರೆ. ಈ ಕೆಲಸದಲ್ಲಿ ಅಧಿಕಾರಿಗಳು ಸಂಪೂರ್ಣ ಶಾಮೀಲಾಗಿದ್ದಾರೆ” ಎಂದು ನೇರ ಆರೋಪ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಹಮಾಲಿ ಶುಲ್ಕ ಗುತ್ತಿಗೆ ಪಡೆದ ಏಜೆನ್ಸಿಗೆ ಫೆಡರೇಶನ್ ನಿಗದಿ ಮಾಡಿರುವ ₹12.36 ನೀಡಲಾಗುತ್ತಿದೆ. ಹೆಚ್ಚುವರಿ ರೈತರಿಂದ ವಸೂಲಿ ಮಾಡಿರುವುದು ರೈತರ ಅರಿವಿಗೆ ಬಂದಿಲ್ಲ. ಕ್ವಿಂಟಲ್‌ಗೆ ₹90ರಂತೆ ಜಿಲ್ಲೆಯಲ್ಲಿ 3.18 ಲಕ್ಷ ಕ್ವಿಂಟಲ್ ಕೊಬ್ಬರಿ ಖರೀದಿಯಾಗಿದ್ದು, ₹6.07 ಕೋಟಿಯಷ್ಟು ಹಮಾಲಿ ಹಣವೆಂದು ವಸೂಲಿ ಮಾಡಲಾಗಿದೆ. ಗುಬ್ಬಿ ತಾಲೂಕಿನಲ್ಲಿ ₹72.58 ಲಕ್ಷ ವಂಚನೆ ಮಾಡಿದ್ದಾರೆ” ಎಂದು ಕಿಡಿಕಾರಿದರು.

“ಹಮಾಲಿ ಕೂಲಿ ಜತೆಗೆ ರೈತನಿಂದ 250 ಗ್ರಾಂ ಕೊಬ್ಬರಿ ಕಡಿತವಾಗುತ್ತದೆ. ಇವೆಲ್ಲವೂ ಸೇರಿ ಕೋಟ್ಯಂತರ ರೂಪಾಯಿ ರೈತರ ಹಣ ಲೂಟಿ ಮಾಡಿದ್ದಾರೆ. ರಾಜ್ಯದಲ್ಲಿ ನಡೆದ ದೊಡ್ಡ ಹಗರಣವೇ ಇದಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘದ ತಾಲೂಕು ಅಧ್ಯಕ್ಷ ಕೆ ಎನ್ ವೆಂಕಟೇಗೌಡ ಮಾತನಾಡಿ, “ರೈತ ಸಂಘದ ಹಲವು ಸದಸ್ಯರು ಎರಡು ದಿನದ ಹಿಂದೆ ಈ ಹೆಚ್ಚುವರಿ ಹಣ ವಸೂಲಿ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಆದರೆ ಎಪಿಎಂಸಿ ಆವರಣದಲ್ಲಿ ಅಧಿಕಾರಿಗಳ ಉತ್ತರದ ನಿರೀಕ್ಷೆಯಲ್ಲಿ ಕಾದು ಬಸವಳಿದಿದ್ದಾರೆ. ರೈತರ ಸಮಸ್ಯೆ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಬೀದಿಗಿಳಿದು ಹೋರಾಟಕ್ಕೆ ಸಂಘ ಸಿದ್ಧವಿದೆ. ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರೈತರ ಪ್ರಶ್ನೆಗೆ ಸಮಂಜಸ ಉತ್ತರ ನೀಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಅಕ್ರಮವಾಗಿ ಬೋಟ್ ಧ್ವಂಸಗೊಳಿಸಿ, ಮಾಲೀಕನಿಗೆ ಜೀವ ಬೆದರಿಕೆ; ಎಸ್‌ಪಿಗೆ ದೂರು

ಈ ಸಂದರ್ಭದಲ್ಲಿ ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಸಿ ಜಿ ಲೋಕೇಶ್, ಯತೀಶ್, ಸತ್ತಿಗಪ್ಪ, ರವೀಶ್, ಕುಮಾರಸ್ವಾಮಿ, ಬಸವರಾಜು ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ತುಮಕೂರು ದಸರಾಕ್ಕೆ ತಾರಾ ಮೆರುಗು : 11 ದಿನ, ನೂರಾರು ಆಕರ್ಷಣೆ

ದೇವಿಯ ಆರಾಧನೆ, ತಾರೆಯರ ಕಲರವ, ಸಂಗೀತದ ರಸದೌತಣ, ನೃತ್ಯ ವೈಭವ, ಕ್ರೀಡಾ...