ಗುಬ್ಬಿ | ದಲಿತರ ಸ್ಮಶಾನ ಭೂಮಿ ವ್ಯಾಪ್ತಿಯ ಅಳತೆ ಕಲ್ಲು ಕಿತ್ತೊಗೆದ ಕಿಡಿಗೇಡಿಗಳು

Date:

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಮಡೇನಹಳ್ಳಿ ಗ್ರಾಮಕ್ಕೆ ಸೇರಿದ ಗೋಮಾಳ ಜಮೀನಿನಲ್ಲಿ ತಾಲೂಕು ಆಡಳಿತ ವತಿಯಿಂದ ದಲಿತರ ಸ್ಮಶಾನ ಭೂಮಿಯನ್ನು ಗುರುತಿಸಿ ಹದ್ದು ಬಸ್ತು ಅಳತೆ ಮಾಡಿ, ಗಡಿಕಲ್ಲನ್ನು ಹಾಕಲಾಗಿತ್ತು. ಈ ಕಲ್ಲನ್ನು ಕಿಡಿಗೇಡಿಗಳು ಕಿತ್ತು ಹಾಕಿರುವ ಘಟನೆ ನಡೆದಿದೆ.

- Advertisement -

ಗುಬ್ಬಿ ತಾಲೂಕಿನ ಕಸಬ ಹೋಬಳಿ ಮಡೇನಹಳ್ಳಿ ಗ್ರಾಮದ ಸರ್ವೇ ನಂಬರ್ 55 ರಲ್ಲಿನ 12 ಎಕರೆ 31 ಗುಂಟೆ ಎಕರೆ ಪ್ರದೇಶದ ಗೋಮಾಳ ಜಮೀನಿನಲ್ಲಿ ಗುರುತಿಸಲಾಗಿದ್ದ 20 ಗುಂಟೆ ದಲಿತರ ಸ್ಮಶಾನ ಭೂಮಿ, 27 ಗುಂಟೆ ಸಾರ್ವಜನಿಕ ಸ್ಮಶಾನ ಭೂಮಿ ಗುರುತಿಸಿ ಹದ್ದುಬಸ್ತು ಅಳತೆ ಕಲ್ಲು ಎಲ್ಲ ಕಡೆ ನೆಡಲಾಗಿತ್ತು. ಕೆಲವು ದಿನಗಳಲ್ಲೇ ಗಡಿ ಕಲ್ಲುನ್ನ ಕಿಡಿಗೇಡಿಗಳು ಕಿತ್ತೊಗೆದಿದ್ದಾರೆ. ಈ ಬೆಳವಣಿಗೆಯ ವಿರುದ್ಧ ಮಡೇನಹಳ್ಳಿ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಪ್ಪಿತಸ್ಥರನ್ನು ಪತ್ತೆ ಹಚ್ಚಿ, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ಬಿಸಿಲಿಗೂ ಕುಗ್ಗದೆ ಕಬ್ಬಿಗೆ ₹5500 ಬೆಲೆಗಾಗಿ...

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು, ಸಕ್ಕರೆಗೆ ಪ್ರತಿ ಕೆ.ಜಿ.ಗೆ ₹60 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್‌ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ...

ಈ ದಿನ ಕವಿತೆ | ನನ್ನವ್ವನ ನೋಟ್ ಪುಸ್ತಕ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಗುಜರಾತಿನ ಕವಿ, ಕಲಾವಿದರಾದ ಜಯಂತ್ ಪರ್ಮಾರ್ ಅವರ ಒಂದು ಉರ್ದು ಕವನದ ಇಂಗ್ಲಿಷ್ ಅನುವಾದವನ್ನು ಕನ್ನಡಕ್ಕೆ ತಂದಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ ಬೇವಿನ...

ಕಬ್ಬಿಗೆ ರೂ.5,500 ಬೆಂಬಲ ಬೆಲೆ ಆಗ್ರಹ: ಬಿರುಬಿಸಿಲಿಗೆ ಜಗ್ಗದೇ...

ಸೆಪ್ಟೆಂಬರ್ 29 ರಂದು ಹುಬ್ಬಳ್ಳಿಯಲ್ಲಿ ಲಕ್ಷಾಂತರ ರೈತರು ಪ್ರತಿಭಟನೆ ನಡೆಸಿದ್ದರು. ನಂತರ ಬಿಜೆಪಿ ಪಕ್ಷದ ಶಾಸಕರು ಮನವೊಲಿಸಿ ದೆಹಲಿಯಲ್ಲಿ ಸಭೆ ಮಾಡುವುದಾಗಿ ತಿಳಿಸಿದ್ದರು. ಆದರೆ ದೆಹಲಿಯಲ್ಲಿ ರೈತ ಮುಖಂಡರು ಮತ್ತು ಕೇಂದ್ರ ಸಚಿವರ...

ಅಳತೆ

ಸ್ಮಶಾನ ಭೂಮಿಗಾಗಿ ಹಲವು ವರ್ಷಗಳ ಬೇಡಿಕೆ ನಂತರ 12 ಎಕರೆ 31 ಗುಂಟೆ ಗೋಮಾಳ ಜಮೀನಿನಲ್ಲಿ ಒಟ್ಟಾರೆ 1 ಎಕರೆ 7 ಗುಂಟೆ ಜಮೀನನ್ನು ಎರಡು ಸ್ಮಶಾನಕ್ಕೆ ಮಂಜೂರಾಗಿ ಪಹಣಿ ಸೇರ್ಪಡೆ ಮಾಡಲಾಗಿತ್ತು. ನಂತರದ ಮತ್ತಷ್ಟು ದಿನಗಳು ಕಾದ ಗ್ರಾಮಸ್ಥರು ಸ್ಮಶಾನಕ್ಕಾಗಿ ಜಿಲ್ಲಾಧಿಕಾರಿಗಳ ಜನಸ್ಪಂದನ ಕಾರ್ಯಕ್ರಮದಲ್ಲಿ ಅಹವಾಲು ನೀಡಿದ ನಂತರ ಎಚ್ಚೆತ್ತ ತಾಲೂಕು ಆಡಳಿತ ಮತ್ತು ಸರ್ವೆ ಇಲಾಖೆ ಹದ್ದುಬಸ್ತು ಮಾಡಲು ಮುಂದಾಗಿ ಜಿ.ಹೊಸಹಳ್ಳಿ ಗ್ರಾಮ ಪಂಚಾಯಿತಿಗೆ ಹಸ್ತಾಂತರ ಮಾಡಿತ್ತು.

ಕೆಲ ದಿನಗಳ ಬಳಿಕ ಮತ್ತೊಮ್ಮೆ ಸರ್ಕಾರದ ವತಿಯಿಂದ ಸ್ಮಶಾನ ಭೂಮಿ ಜಿಪಿಎಸ್ ಮಾಡಿಸುವ ಜೊತೆಗೆ ತಾಲೂಕು ಆಡಳಿತ, ಸರ್ವೆ ಇಲಾಖೆ ಹಾಗೂ ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳ ಸಮ್ಮುಖದಲ್ಲಿ ಅಧಿಕೃತವಾಗಿ ಗಡಿ ಕಲ್ಲು ನೆಡುವ ಮೂಲಕ ಸ್ಮಶಾನ ಭೂಮಿ ಹದ್ದು ಬಸ್ತು ಮಾಡಲಾಗಿತ್ತು. ಆದರೆ ಇದನ್ನು ಸಹಿಸದ ಕೆಲ ಕಿಡಿಗೇಡಿಗಳು ಭಾನುವಾರ ರಾತ್ರಿ ಕಿತ್ತಿದ್ದಾರೆ.

ಸ್ಮಶಾನ ಭೂಮಿಗೆ ಅಳವಡಿಸಿದ್ದ ಗಡಿಕಲ್ಲು ಕಿತ್ತಿರುವುದು ಸರಿಯಲ್ಲ. ಜೊತೆಗೆ ಸರ್ವೆ ನಂಬರ್ 55ರಲ್ಲಿ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಮತ್ತು ಬಲಾಢ್ಯರಿಂದ ಸರ್ಕಾರಿ ಗೋಮಾಳ ಜಮೀನು ಅಕ್ರಮ ಒತ್ತುವರಿಯಾಗಿದ್ದು, ಈ ಕೂಡಲೇ ಕ್ರಮ ವಹಿಸಬೇಕು ಎಂದು ತಾಲೂಕು ಆಡಳಿತಕ್ಕೆ ಮನವಿ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಶಿರೂರು ಗುಡ್ಡ ದುರಂತ | 8 ಮೀಟರ್ ಅಡಿಯಲ್ಲಿ ಲೋಹದ ಸಾಧನ ಪತ್ತೆ; ಲಾರಿಯಾಗಿರುವ ಶಂಕೆ?

“ಗಡಿ ಕಲ್ಲು ಕಿತ್ತು ಹಾಕಿರುವ ಬಗ್ಗೆ ಮಡೇನಹಳ್ಳಿ ಗ್ರಾಮಸ್ಥರಿಂದ ದೂರು ಅರ್ಜಿ ಬಂದಿದ್ದು ಕೂಡಲೇ ಸ್ಮಶಾನ ಭೂಮಿಯ ಜಾಗಕ್ಕೆ ನಾಮಫಲಕ ಹಾಕಿಸುವ ಜೊತೆಗೆ ಮತ್ತೊಮ್ಮೆ ನೆಟ್ಟಿರುವ ಎಲ್ಲ ಗಡಿಕಲ್ಲುಗಳಿಗೆ ಗ್ರಾಮ ಪಂಚಾಯಿತಿ ವತಿಯಿಂದ ಬಣ್ಣ ಹಾಕಿಸಿ ಗುರುತಿಸಲಾಗುವುದು. ತದನಂತರವು ಇದೇ ರೀತಿಯ ಕೃತ್ಯ ಮುಂದುವರಿದರೆ ಕಾನೂನು ಕ್ರಮಕ್ಕೆ ಮುಂದಾಗಲಾಗುವುದು” ಎಂದು ಜಿ. ಹೊಸಹಳ್ಳಿ ಗ್ರಾಮ ಪಂಚಾಯಿತಿ
ಅಭಿವೃದ್ಧಿ ಅಧಿಕಾರಿ ಭಾನುಮತಿ ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಅ. 20ರವರೆಗೆ ಕಾಲಾವಕಾಶ ವಿಸ್ತರಣೆ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಪಡೆಯುತ್ತಿರುವ ಆದ್ಯತಾ...

ಗದಗ | ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ಆಯೋಜಿಸಲು ಜಿಲ್ಲಾಧಿಕಾರಿ ಸೂಚನೆ

"ಜಿಲ್ಲಾ ಮಟ್ಟದ ಮಾದರಿ ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ...

ಹುಬ್ಬಳ್ಳಿ | ಬೆಲೆ ಏರಿಕೆ, ಭ್ರಷ್ಟಾಚಾರ ಮಾತ್ರ ನಿರಂತರ ಜಾರಿಯಲ್ಲಿದೆ: ಸಿ.ಟಿ. ರವಿ ವಾಗ್ದಾಳಿ

"ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳು ಪಂಚರ್‌ ಆಗಿದ್ದು, ಬೆಲೆ ಏರಿಕೆ ಮತ್ತು...

ಕಾರವಾರ | ನೌಕಾಪಡೆಗೆ ಸ್ವದೇಶಿ ‘ಐಎನ್‌ಎಸ್ ಸಮರ್ಥಕ್’ ಸೇರ್ಪಡೆ

ಕಾರವಾರ: ಭಾರತೀಯ ನೌಕಾಪಡೆಯ ಸ್ವದೇಶಿ ನಿರ್ಮಿತ ಬಹು ಉದ್ದೇಶದ ನೌಕೆ ಐಎನ್‌ಎಸ್...