ತುಮಕೂರು | ಐದು ದಿನ ಭಾರಿ ಮಳೆ ಸಾಧ್ಯತೆ : ಆರೆಂಜ್ ಮತ್ತು ಯೆಲ್ಲೊ ಅಲರ್ಟ್ ಘೋಷಣೆ

Date:

ಭಾರತೀಯ ಹವಾಮಾನ ಇಲಾಖೆ ವರದಿಯಂತೆ ತುಮಕೂರು ಜಿಲ್ಲೆಯಲ್ಲಿ ಮುಂದಿನ 5 ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಮತ್ತು ಯೆಲ್ಲೊ ಅಲರ್ಟ್ ಘೋಷಿಸಲಾಗಿದ್ದು, ತುರ್ತು ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಅವರು ಸೂಚನೆ ನೀಡಿದರು.

- Advertisement -

ತುಮಕೂರು ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ಜನ, ಜಾನುವಾರುಗಳಿಗೆ ಜೀವ ಹಾನಿಯಾಗದಂತೆ ನದಿ, ಹಳ್ಳ ಕೆರೆ ದಡಗಳಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನ, ಕರುಗಳನ್ನು ಮೇಯಿಸುವುದು ಹಾಗೂ ಅಪಾಯವಿರುವ ಸೇತುವೆಗಳ ಮೇಲೆ ಸಂಚರಿಸುವುದು ಮತ್ತು ಇತರೆ ಚಟುವಟಿಕೆ ನಡೆಸದಂತೆ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ನದಿ ದಡಗಳಲ್ಲಿ ಅಪಾಯವಿರುವ ಸೇತುವೆಗಳಲ್ಲಿ ಫೋಟೋ, ಸೆಲ್ಪಿಗಳನ್ನು ತೆಗೆಯದಂತೆ ಯುವಕ, ಯುವತಿಯರಿಗೆ ಮತ್ತು ಸಾರ್ವಜನಿಕರಿಗೆ ತಿಳಿ ಹೇಳಬೇಕು. ಭಾರಿ ಮಳೆ ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಪ್ರತಿ ಗ್ರಾಮಗಳಲ್ಲಿ ಡಂಗೂರ ಸಾರಬೇಕು ಹಾಗೂ ಧ್ವನಿ ವರ್ಧಕದ ಮೂಲಕ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಮಳೆ ಬೆಂಗಳೂರು

ನಿರಂತರ ಮಳೆಯಿಂದ ಅಪಾಯವಿರುವ ಮನೆ, ಗೋಡೆ ಇತರೆ ಕಟ್ಟಡಗಳು ಕುಸಿದು ಸಾವು- ನೋವುಗಳು ಸಂಭವಿಸುವುದರಿಂದ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿರುವಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ರಾಜ್ಯ, ಜಿಲ್ಲಾಡಳಿತ, ತಾಲೂಕು ಆಡಳಿತದಿಂದ ನೀಡುವ ಹವಾಮಾನದ ಮುನ್ನೆಚ್ಚರಿಕೆಯನ್ನು ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಸಮಿತಿಗಳು ನೀಡುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಹೆಚ್ಚು ಪ್ರಚಾರ ಕೈಗೊಂಡು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ನಿರ್ದೇಶಿಸಿದರು.

ಕೆರೆ-ಕಟ್ಟೆ, ಏರಿ, ಬಂಡು, ಕೋಡಿಗಳಲ್ಲಿ ನೀರು ಸೋರಿಕೆ ಕಂಡು ಬಂದಲ್ಲಿ, ರಸ್ತೆಗಳ ಮೇಲೆ ಅಪಾಯಕಾರಿ ಮಟ್ಟದಲ್ಲಿ ನೀರು ಹರಿಯುತ್ತಿದ್ದಲ್ಲಿ/ ನಿಂತಿದ್ದಲ್ಲಿ ಮರಬಿದ್ದು ವಾಹನ ಸಂಚಾರ ಸ್ಥಗಿತವಾಗಿದ್ದಲ್ಲಿ, ವಿದ್ಯುತ್ ಮಾರ್ಗ/ಕಂಬ ಬಿದ್ದಿದ್ದಲ್ಲಿ ಮನೆಯೊಳಗೆ ನೀರು ನುಗ್ಗಿದರೆ. ಮನೆಗೋಡೆ/ ಮೇಲ್ಚಾವಣಿ ಬಿದ್ದರೆ, ಬೆಳೆ ನಷ್ಟ ಮತ್ತಿತರ ತುರ್ತು ಪರಿಸ್ಥಿತಿಯಲ್ಲಿ ಸಹಾಯವಾಣಿ ಸಂಖ್ಯೆ: 7304975519 ಅಥವಾ ದೂರವಾಣಿ ಸಂಖ್ಯೆ : 0816-2213400, 0816-155304 ಅಥವಾ ವಾಟ್ಸಪ್ ಸಂಖ್ಯೆ: 7304975519ನ್ನು ಸಂಪರ್ಕಿಸಬೇಕೆಂದು ಸಾರ್ವಜನಿಕರಿಗೆ ಮಾಹಿತಿ ನೀಡಬೇಕೆಂದು ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಚುಣಾವಣೆ ತಹಶೀಲ್ದಾರ್ ರೇಷ್ಮಾ, ತಹಶೀಲ್ದಾರಗಳಾದ ರಾಜೇಶ್ವರಿ, ವರದರಾಜು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಕಾಡುಪ್ರಾಣಿ ಹಾವಳಿಗೆ ಶಾಶ್ವತ ಪರಿಹಾರ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಯೋಜನೆ

ಮಲೆನಾಡಿನಲ್ಲಿ ಮಾನವ - ಪ್ರಾಣಿ ಸಂಘರ್ಷ ಹೆಚ್ಚಾಗಿದ್ದು, ನಿರಂತರವಾಗಿ ಕಾಡುತ್ತಿರುವ ಕಾಡುಪ್ರಾಣಿ...

ಕೋಲಾರ | ಡಿಸಿಸಿ ಬ್ಯಾಂಕ್ ಅಕ್ರಮಗಳ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ನೇಮಿಸಿ: ರೈತ ಸಂಘ ಒತ್ತಾಯ

ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾದ ನೂರಾರು...

ಚಿಕ್ಕಮಗಳೂರು | SIR ಪ್ರಕ್ರಿಯೆ: ಅಂತಿಮ ಪಟ್ಟಿಯಲ್ಲಿ 8,74,462 ಮತದಾರರು; ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು, ಪರಿಷ್ಕರಣೆಯ...

ತುಮಕೂರು | ನಕಲಿ ಔಷಧ, ಕಲಬೆರಕೆ ಆಹಾರದ ಜಾಲದ ಬಗ್ಗೆ ಎಚ್ಚರಿಕೆ ಇರಲಿ : ಮುರುಳೀಧರ ಹಾಲಪ್ಪ

ಆಹಾರ ಮತ್ತು ಔಷಧ ಎರಡಕ್ಕೂ ನೇರ ಸಂಬಂಧವಿದೆ. ಕಲಬೆರಕೆ ಆಹಾರ ಸೇವಿಸಿ...