ತುಮಕೂರು | ಹೇಮಾವತಿ ಕೆನಾಲ್ ವಿವಾದ : ಸಿಎಂ  ಬಳಿ ನಿಯೋಗ ಕರೆದುಕೊಂಡು ಹೋಗುವಂತೆ ರಾಜ್ಯ ರೈತ ಸಂಘ ಒತ್ತಾಯ

Date:

Advertisements

ಅವೈಜ್ಞಾನಿಕ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ನಡೆಯುತ್ತಿರುವ ಸಂಕಾಪುರ ಗ್ರಾಮಕ್ಕೆ ಸ್ಥಳ ಪರಿಶೀಲನೆಗಾಗಿ ಜೂನ್.11 ರಂದು ತುಮಕೂರು ಲೋಕಸಭಾ ಸದಸ್ಯ ಹಾಗೂ ಕೇಂದ್ರ ಜಲ ಶಕ್ತಿ ಮತ್ತು ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಆಗಮಿಸುತ್ತಿರುವುದನ್ನು ಕರ್ನಾಟಕ ರಾಜ್ಯ ರೈತ ಸಂಘ ಸ್ವಾಗತಿಸುತ್ತದೆ.ಕಾಮಗಾರಿಯನ್ನು ಶಾಶ್ವತವಾಗಿ ರದ್ದು ಮಾಡಲು ಮುಖ್ಯಮಂತ್ರಿಗಳು,ಜಲಸಂಪನ್ಮೂಲ ಸಚಿವರ ಬಳಿ ಜಿಲ್ಲೆಯ ಜನಪ್ರತಿನಿಧಿಗಳು, ರೈತರು, ಹೋರಾಟಗಾರರನ್ನು ನಿಯೋಗ ಕರೆದುಕೊಂಡು ಹೋಗುವಂತೆ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಾಗೂ ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಅವೈಜ್ಞಾನಿಕ ಲಿಂಕ್ ಕೆನಾಲ್ ಯೋಜನೆಯನ್ನು ವಿರೋಧಿಸಿ ಕಳೆದ ಒಂದು ವರ್ಷದಿಂದ ಪ್ರತಿಭಟನೆಗಳು ನಡೆಯುತ್ತಲೇ ಬಂದಿವೆ. ಜನರ ವಿರೋಧದ ನಡುವೆಯೂ ತಾಂತ್ರಿಕ ಸಮಿತಿಯ ವರದಿಯನ್ನು ಮುಚ್ಚಿಟ್ಟು ಪೊಲೀಸ್ ಸರ್ಪಗಾವಲಿನಲ್ಲಿ ಕಾಮಗಾರಿ ನಡೆಸಲು ಮುಂದಾದ ಪರಿಣಾಮ, ಮೇ 31ರಂದು ನಡೆದ ಬೃಹತ್ ಪ್ರತಿಭಟನೆಯ ಭಾಗವಾಗಿ ಕಾಮಗಾರಿ ಸ್ಥಗಿತ ಮಾಡಲಾಗಿದೆ.ಆದರೆ ಪ್ರತಿಭಟನೆಯಲ್ಲಿ ಪಾಲ್ಗೊಂಡ ಸ್ವಾಮೀಜಿಗಳು,ಶಾಸಕರು ಸೇರಿದಂತೆ ಸುಮಾರು 41 ಜನ ಮೇಲೆ 13ಕ್ಕೂ ಹೆಚ್ಚು ದೂರುಗಳನ್ನು ದಾಖಲಿಸಲಾಗಿದೆ.

ಹೇಮಾವತಿ ಲಿಂಕ್ ಕೆನಾಲ್‌ನಿಂದ ತುಮಕೂರು ಜಿಲ್ಲೆಯ ಸುಮಾರು 7ಕ್ಕೂ ಹೆಚ್ಚು ತಾಲೂಕುಗಳಲ್ಲಿ ನೀರಿನ ಕೊರತೆ ಉಂಟಾಗಲಿದೆ. ಹಲವು ಬಾರಿ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಸಚಿವರ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ. ಅಲ್ಲದೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಲ ಸಂಪನ್ಮೂಲ ಸಚಿವರುಗಳು ಕಾಮಗಾರಿಯನ್ನು ಆರಂಭಿಸುವುದಾಗಿ ಮಾತನಾಡುತಿದ್ದಾರೆ.ಇದು ಈ ಭಾಗದ ಜನರನ್ನು ಮತ್ತಷ್ಟು ಆಂತಕಕ್ಕೆ ದೂಡಿದೆ.ಅಲ್ಲದೆ ಎಂತಹ ಹೋರಾಟಕ್ಕೂ ಸಿದ್ದರಾಗಬೇಕಾದ ಅನಿವಾರ್ಯತೆಯನ್ನು ಸೃಷ್ಟಿಸಿದೆ.

Advertisements

ಕೇಂದ್ರದ ಜಲಶಕ್ತಿ ಮತ್ತು ರೈಲ್ವೆ ರಾಜ್ಯ ಸಚಿವರಾದ ವಿ.ಸೋಮಣ್ಣನವರು ಜಿಲ್ಲೆಯ ಹಿತದೃಷ್ಟಿಯಿಂದ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು, ರೈತ ಹೋರಾಟಗಾರರ ನಿಯೋಗವನ್ನು ಮುಖ್ಯಮಂತ್ರಿಗಳು, ಜಲಸಂಪನ್ಮೂಲ ಸಚಿವರ ಬಳಿ ನಿಯೋಗ ತೆಗೆದುಕೊಂಡು ಹೋಗಿ, ಈ ಯೋಜನೆಯಿಂದ ಜಿಲ್ಲೆಯ ನೀರಾವರಿಯ ಮೇಲಾಗುವ ಅಪಾಯವನ್ನು ಮನದಟ್ಟು ಮಾಡಿಕೊಟ್ಟು, ಈ ಅನಗತ್ಯ ಮತ್ತು ಅವೈಜ್ಞಾನಿಕ ಯೋಜನೆಯನ್ನು ಕೈಬಿಡುವಂತೆ ಒತ್ತಾಯ ತರಬೇಕೆಂದು ಎ.ಗೋವಿಂದರಾಜು ಒತ್ತಾಯಿಸಿದ್ದಾರೆ.

ಕುಣಿಗಲ್ ತಾಲೂಕಿಗೆ ಹಂಚಿಕೆಯಾಗಿರುವ 3.3 ಟಿ.ಎಂ.ಸಿ ನೀರು ಹರಿಸಲು ತುಮಕೂರು ಜಿಲ್ಲೆಯ ಯಾರ ವಿರೋಧವೂ ಇಲ್ಲ.ಆದರೆ ಆ ನೀರನ್ನು ಅವೈಜ್ಞಾನಿಕ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಬಿಟ್ಟು, ಮೂಲ ಯೋಜನೆಯಂತೆ ನಾಲೆಯ ಮೂಲಕ ತೆಗೆದುಕೊಂಡು ಹೋಗಲು ಯಾವ ಅಭ್ಯಂತರವೂ ಇಲ್ಲ.ಮೂಲ ನಾಲೆಯ ಆಗಲೀಕರಣ ಕಾರ್ಯ ಚಾಲ್ತಿಯಲ್ಲಿದ್ದು, ಉಳಿದ ನಾಲೆ ಆಗಲೀಕರಣ ಕಾಮಗಾರಿ ನಡೆಸಿ, ಕುಣಿಗಲ್ ಭಾಗದ ರೈತರ ಬೇಡಿಕೆಯಂತೆ ಅವರ ಪಾಲಿನ ನೀರು ತೆಗೆದುಕೊಂಡು ಹೋಗಲು ಅನುವು ಮಾಡಿಕೊಟ್ಟು, ಸಮಸ್ಯೆಗೆ ಸೂಕ್ತ ಪರಿಹಾರ ರೂಪಿಸಬೇಕೆಂದು ಎ.ಗೋವಿಂದರಾಜು ಒತ್ತಾಯಿಸಿದ್ದಾರೆ. 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X