ತುಮಕೂರು | ಹೇಮಾವತಿ ನಾಲೆಗೆ ನೀರು : ಕೃಷಿ ಚಟುವಟಿಕೆಗಳಿಗೆ ಬಳಸದಿರಲು ಜಿಲ್ಲಾಧಿಕಾರಿ ಸೂಚನೆ

Date:

ಹೇಮಾವತಿ ಜಲಾಶಯ ಯೋಜನೆಯ ಕುಡಿಯುವ ನೀರಿನ ಸಲಹಾ ಸಮಿತಿ ಸಭೆಯ ನಿರ್ಣಯದಂತೆ ಜನ-ಜಾನುವಾರುಗಳ ಕುಡಿಯುವ ನೀರಿನ ಬೇಡಿಕೆಗನುಗುಣವಾಗಿ ಹೇಮಾವತಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಕೆರೆ-ಕಟ್ಟೆಗಳಿಗೆ ನಿಗಧಿತ ಪ್ರಮಾಣದಲ್ಲಿ ನಿಯಮಿತವಾಗಿ ಜಲಾಶಯದಿಂದ ನಾಲೆಗಳ ಮೂಲಕ ನೀರನ್ನು ಹರಿಸಲಾಗುತ್ತಿದೆ. ಕುಡಿಯುವ ನೀರಿಗಾಗಿ ಮೀಸಲಿಟ್ಟಿರುವ ಪ್ರಮಾಣದಷ್ಟು ನೀರನ್ನು ಮಾತ್ರ ನಾಲೆ ಮೂಲಕ ಹರಿಸಲಾಗುತ್ತಿದ್ದು, ನಾಲೆಯ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಯಾವುದೇ ಕೃಷಿ ಚಟುವಟಿಕೆಗಳಿಗೆ ಹೇಮಾವತಿ ನೀರನ್ನು ಬಳಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದ್ದಾರೆ. 

- Advertisement -

 ಜಲಾಶಯದಿಂದ ನೀರನ್ನು ಹರಿಸುವ ಅವಧಿಯು ತಾತ್ಕಾಲಿಕವಾಗಿದ್ದು, ಹೇಮಾವತಿ ಜಲಾನಯನ ಹಾಗೂ ಯೋಜನಾ ವ್ಯಾಪ್ತಿಯ ಅಚ್ಚುಕಟ್ಟು ಪ್ರದೇಶದಲ್ಲಿ ಪೂರ್ವ ಮುಂಗಾರು ಮಳೆಯ ಸ್ಥಿತಿ-ಗತಿಗಳನ್ನು ಅವಲೋಕಿಸಿ ಜನ-ಜಾನುವಾರುಗಳ ಕುಡಿಯುವ ನೀರಿಗಾಗಿ ಕಾಲುವೆಗಳ ಮೂಲಕ ಕೆರೆ-ಕಟ್ಟೆಗಳಿಗೆ ನೀರು ಹರಿಸಲು ಅಗತ್ಯ ಕ್ರಮವಹಿಸಲಾಗುವುದು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಯೋಜನಾ ವ್ಯಾಪ್ತಿಯಲ್ಲಿ ಸಂಬಂಧಿಸಿದ ಅಧಿಕಾರಿಗಳು ನೀರು ಪೋಲಾಗದಂತೆ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು. ಹೇಮಾವತಿ ನಾಲಾ ಯೋಜನಾ ವ್ಯಾಪ್ತಿಯಲ್ಲಿರುವ ಸಾರ್ವಜನಿಕರು ಹಾಗೂ ರೈತರಿಗೆ ನೀರಿನ ಬಳಕೆ ಬಗ್ಗೆ ತಿಳುವಳಿಕೆ ನೀಡಬೇಕು. 

ಅಪಾಯಕಾರಿಯಾಗಿ ಹರಿಯುವ ನಾಲೆ/ಹಳ್ಳ/ಕೆರೆ ದಡದಲ್ಲಿ ಹಾಗೂ ಹರಿಯುವ ನೀರಿನಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನ-ಕರುಗಳನ್ನು ತೊಳೆಯುವುದು, ಫೋಟೋ ಸೆಲ್ಫಿಗಳನ್ನು ತೆಗೆಯುವುದು, ನಾಲಾ ವ್ಯಾಪ್ತಿಯ ಸೇತುವೆಗಳ ಮೇಲೆ ಸಂಚರಿಸುವುದು ಸೇರಿದಂತೆ ಇನ್ನಿತರೆ ಚಟುವಟಿಕೆಗಳು ನಡೆಯದಂತೆ ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  

ಪೋಷಕರು ತಮ್ಮ ಮಕ್ಕಳನ್ನು ಹರಿಯುವ ನಾಲಾ ನೀರು ಮತ್ತು ಕೆರೆ-ಕಟ್ಟೆಗಳಲ್ಲಿ ಈಜಲು ಬಿಡದಂತೆ ಜಾಗೃತಿವಹಿಸಬೇಕು. ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ನಾಲಾ ಯೋಜನಾ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರು ಹಾಗೂ ಅಚ್ಚುಕಟ್ಟುದಾರರು ಸುಗಮ ನೀರು ನಿರ್ವಹಣೆ ನಡೆಸುವ ನಿಟ್ಟಿನಲ್ಲಿ ನಿಯೋಜಿತ ಇಲಾಖಾಧಿಕಾರಿಗಳೊಂದಿಗೆ ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ. 

ನೀರಿನ ದುರ್ಬಳಕೆ ಕಂಡು ಬಂದಲ್ಲಿ ದೂ.ವಾ.ಸಂ. 0816-2213400/ 155304/ ಮೊ.ಸಂ.7304975519ನ್ನು ಸಂಪರ್ಕಿಸುವ ಮೂಲಕ ಜಿಲ್ಲಾಡಳಿತದ ಗಮನಕ್ಕೆ ತರಬೇಕೆಂದು ಅವರು ಮನವಿ ಮಾಡಿದ್ದಾರೆ. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ರಾಜ್ಯ ಜನಜಾಗೃತಿ ಧಮ್ಮ ಯಾತ್ರೆ ನಾಳೆ ಬಾಗಲಕೋಟೆಗೆ ಆಗಮನ

70ನೇ ಬೌದ್ಧ ಧಮ್ಮ ದೀಕ್ಷೆಯ ಪ್ರಯುಕ್ತ, ಸಂವಿಧಾನ ಆಧಾರಿತ ಪ್ರಬುದ್ಧ ಭಾರತ...

ಶಿಕಾರಿಪುರ | ಕವಿ, ಬರಹಗಾರರಿಂದ ಮನಸ್ಸು ಒಂದಾಗಿಸುವ ಕೆಲಸವಾಗಲಿ: ಡಾ. ಸರ್ಫ್ರಾಜ್ ಚಂದ್ರಗುತ್ತಿ

ಕವಿ ಹಾಗೂ ಬರಹಗಾರರು ತಮ್ಮ ಬರವಣಿಗೆ ಮೂಲಕ ಮನಸ್ಸುಗಳನ್ನು ಕೂಡಿಸುವ ಕೆಲಸ...

ರಾಯಚೂರು | ನಕಲಿ ವೈದ್ಯರ ಕ್ಲಿನಿಕ್‌ಗಳ ಮೇಲೆ ಆರೋಗ್ಯ ಇಲಾಖೆ ದಾಳಿ; ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ

ಜಿಲ್ಲೆಯಾದ್ಯಂತ ವಿವಿಧೆಡೆ ವೈದ್ಯಕೀಯ ಪದವಿ ಪಡೆಯದೆ ವೈದ್ಯ ವೃತ್ತಿ ನಡೆಸುತ್ತಿದ್ದರೆನ್ನಲಾದ ನಕಲಿ...