ತುಮಕೂರು | ʼಅಂತರ್ಯಾಮಿʼ ಸಿನಿಮಾ ಪೋಸ್ಟರ್ ಬಿಡುಗಡೆ ಮಾಡಿದ ಗೃಹಸಚಿವ ಪರಮೇಶ್ವರ್

Date:

ತುಮಕೂರು ನಗರದ ಶ್ರೀ ಸಿದ್ದಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ಹಳೆ ವಿದ್ಯಾರ್ಥಿ ಪ್ರಣವ್ ನಟನೆ ಮತ್ತು ನಿರ್ಮಾಣದ ʼಅಂತರ್ಯಾಮಿʼ ಚಿತ್ರದ ಪೋಸ್ಟರ್‌ನ್ನು ಗೃಹ ಸಚಿವ ಹಾಗೂ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಜಿ ಪರಮೇಶ್ವರ್ ಬಿಡುಗಡೆ ಮಾಡಿದರು.

- Advertisement -

ನಗರದ ಎಸ್‌ಎಸ್‌ಐಟಿ ಕ್ಯಾಂಪಸ್‌ನಲ್ಲಿ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, “ಇತ್ತೀಚಿನ ದಿನದಲ್ಲಿ ಸಾಮಾಜಿಕ ಮಾಧ್ಯಮಗಳ ಗೀಳು ಯುವ ಜನತೆಯನ್ನು ಅಪಾರವಾಗಿ ಕಾಡುತ್ತಿದೆ. ಚಿಕ್ಕ ಮಕ್ಕಳು ಇಂದು ಮೊಬೈಲ್ ವ್ಯಾಮೋಹಕ್ಕೆ ಬಿದ್ದು ತಮ್ಮ ಅಮೂಲ್ಯವಾದ ಬಾಲ್ಯದ ಜೀವನವನ್ನು ವ್ಯರ್ಥ ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ಮಕ್ಕಳು ಹಾಗೂ ಯುವಕರು ದಾರಿ ತಪ್ಪಿಸುವಂತಹ ಸಾಮಾಜಿಕ ಜಾಲತಾಣಗಳಿಂದ ಹೊರಬಂದು ತಮ್ಮ ಜೀವನವನ್ನು ಸುಂದರಾಗಿಸಿಕೊಳ್ಳಬೇಕು. ಈ ನೆಲಗಟ್ಟಿನಲ್ಲಿ ಸಿನಿಮಾವನ್ನು ನಿರ್ಮಾಣ ಮಾಡಲಾಗಿದೆ. ಈ ಸಿನಿಮಾ ಸಾಮಾಜಿಕ ಜಾಲತಾಣಗಳಿಂದ ಬಳಲುತ್ತಿರುವ ಪ್ರಸ್ತುತ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುತ್ತದೆ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

“ಅಂತರ್ಯಾಮಿ ಸಿನಿಮಾದ ನಾಯಕ ನಟ ನಮ್ಮ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ವಿದ್ಯಾರ್ಥಿ ಎಂಬುದು ಹೆಮ್ಮೆಯ ಸಂಗತಿ. ಜೊತೆಗೆ ಮತ್ತೋರ್ವ ಹಳೇ ವಿದ್ಯಾರ್ಥಿ ವಿನಯ್ ಕಾವ್ಯಕಾಂತಿ ಸಾಹಿತ್ಯ ಬರೆದಿದ್ದಾರೆ. ಈ ಸಿನಿಮಾದಲ್ಲಿ ಮಾಧ್ಯಮ ವಿದ್ಯಾರ್ಥಿಗಳು ಅಭಿನಯಿಸಿರುವುದು ಇನ್ನೂ ವಿಶೇಷ. ಈ ಚಿತ್ರ ಅಭೂತ ಪೂರ್ವ ಯಶಸ್ಸು ಕಾಣಲಿ” ಎಂದು ಶುಭ ಹಾರೈಸಿದರು. 

ಇದೇ ಸಂದರ್ಭದಲ್ಲಿ ಶ್ರೀ ಸಿದ್ದಾರ್ಥ ಮಾಧ್ಯಮ ಕೇಂದ್ರದ ನಿರ್ದೇಶಕ ಡಾ.ಬಿ.ಟಿ.ಮುದ್ದೇಶ್, ಸಿದ್ದಾರ್ಥ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ.ಬಿ.ಸಾಣಿಕೊಪ್ಪ, ಉಪ ಪ್ರಾಂಶುಪಾಲರಾದ ಡಾ.ಪ್ರಭಾಕರ್ ಮೊದಲಾದವರು ಹಾಜರಿದ್ದರು.

ಈ ಚಿತ್ರದಲ್ಲಿ ನಾಯಕ ನಟನಾಗಿ ಪ್ರಣವ್ ನಟಿಸಿದ್ದು, ನಾಯಕಿಯಾಗಿ ಮೋಹಿರಾ ಆಚಾರ್ಯ ಅಭಿನಯಿಸಿದ್ದಾರೆ. ಮಂಡ್ಯ ಸಿದ್ದು, ಕಾಮಿಡಿ ಕಿಲಾಡಿ ಖ್ಯಾತಿಯ ಉದಯ್, ರುದ್ರಮುನಿ ಪಂಡಿತ್, ರೇಣುಕಾಂಬ, ಶರತ್ ಘಾಟಿ, ಶ್ರೀ ಕೃಷ್ಣ ಮಂಜೀವಾ, ಬೇಬಿ ಹಾನ್ಸಿ, ಹೇಮ ಮಾಲಿನಿ, ಬಾಲಕೃಷ್ಣ ಬರಗೂರು, ವಸಂತ್, ಯೋಗೀಶ್ ಮುಂತಾದವರು ತಾರಾಗಣದಲ್ಲಿದ್ದಾರೆ. 

ಇದನ್ನೂ ಓದಿ: ತುಮಕೂರು | ರಾಜೇಂದ್ರ ಕೊಲೆ ಸಂಚು ಪ್ರಕರಣ; ಪ್ರಮುಖ ಆರೋಪಿ ಪೊಲೀಸರಿಗೆ ಶರಣು

ಈ ಚಿತ್ರಕ್ಕೆ ಎಸ್ ಬಾಲು ಛಾಯಾಗ್ರಹಣ ನಿರ್ವಹಿಸಿದರೆ, ದೇಸೀ ಮೋಹನ್ ಅವರ ಸಂಗೀತವಿದೆ. ಸಾಹಿತ್ಯವನ್ನು ವಿನಯ್ ಕಾವ್ಯಕಾಂತಿ ಬರೆದಿದ್ದಾರೆ. ನೃತ್ಯ ಸಂಯೋಜನೆಯನ್ನು ಬಾಲ ಮಾಸ್ಟರ್ ನಿರ್ವಹಿಸಿದರೆ, ಅರವಿಂದರಾಜ್ ಸಂಕಲನ ಮಾಡಿದ್ದಾರೆ. ಇನ್ನು ತಾಂತ್ರಿಕ ಸಲಹೆಯನ್ನು ಶ್ರೀಕಾಂತ್ ಶ್ರಾಪ್ ನೀಡಿದ್ದಾರೆ. ಎಂಜೆಎಸ್ಪಿಆರ್ ಯವರು ಪಿಆರ್‌ಓ ಕಾರ್ಯನಿರ್ವಹಿಸಿದ್ದರೆ, ರವಿಶಂಕರ್ ಅವರು ಸಹ ನಿದೇಶನ¸ಮಾಡಿದ್ದಾರೆ. ಸಹಾಯಕ ನಿರ್ದೇಶಕರಾಗಿ ವಸಂತ್, ನಾಗರಾಜ್ ಹೂಗಾರ್, ಗೌತಮ್ ವಿ. ಅರೆಯೂರು ಸಾಥ್ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...