ತುಮಕೂರು | ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಗೃಹ ಸಚಿವ ಪರಮೇಶ್ವರ್ ಚಾಲನೆ

Date:

ಕ್ರೀಡೆ ಮನುಷ್ಯನಿಗೆ ಶಿಸ್ತು, ಆರೋಗ್ಯದ ಜತೆಗೆ ಜೀವನದಲ್ಲಿ ಪಾಠ ಕಲಿಸುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್  ಅಭಿಪ್ರಾಯಪಟ್ಟರು

- Advertisement -

ನಗರದ ಡಿಎಆರ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಏರ್ಪಡಿಸಲಾಗಿರುವ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ಬಲೂನ್ ಹಾಗೂ ಪಾರಿವಾಳಗಳನ್ನು ಹಾರಿ ಬಿಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಕ್ರೀಡೆ ಮನುಷ್ಯನ ಜೀವನದಲ್ಲಿ ಬಹಳ ಉಪಯುಕ್ತವಾಗಿದ್ದು, ಶಿಸ್ತು ಕಲಿಸುವುದು ಮಾತ್ರಲ್ಲ ಜೀವನದಲ್ಲಿ ಅನೇಕ ಪಾಠವನ್ನು ಕಲಿಸುತ್ತದೆ ಎಂದು  ಹೇಳಿದರು. 

ಕ್ರೀಡೆಯಲ್ಲಿ ಸೋಲು-ಗೆಲುವು ಸಾಮಾನ್ಯ. ಗೆಲುವನ್ನು ಎಷ್ಟು ಸಂತೋಷದಿಂದ ಸ್ವೀಕರಿಸುತ್ತೇವೋ, ಅಷ್ಟೇ ಸಂತೋಷದಿಂದ ಸೋಲನ್ನು ಸ್ವೀಕರಿಸುವ ಮನೋಭಾವ ಹೊಂದಿರಬೇಕು. ಸೋಲು ಗೆಲುವಿನ ದಾರಿ ಎಂಬುದನ್ನು ಯಾರೂ ಮರೆಯಬಾರದು. ಕ್ರೀಡೆಯಂತೆಯೇ ಜೀವನದಲ್ಲೂ ಅನೇಕ ಬಾರಿ ಸೋಲುಗಳನ್ನು ಅನುಭವಿಸುತ್ತೇವೆ ಎಂದರು.

ಕ್ರೀಡೆಯಲ್ಲಿ ಸೋಲು ಅನುಭವಿಸಿದಾಗ ನಿರಾಶರಾಗದೆ ಮತ್ತೊಮ್ಮೆ ಗೆಲ್ಲಬೇಕು ಎಂಬ ಹುಮ್ಮಸ್ಸಿನಿಂದ ಕ್ರೀಡೆಯಲ್ಲಿ ಭಾಗವಹಿಸಲು ಅವಕಾಶ ಇದೆ. ಇದನ್ನು ಪ್ರತಿಯೊಬ್ಬರೂ ಸದುಪಯೋಗಪಡಿಸಿಕೊಳ್ಳಬೇಕು ಎಂದು  ಸಲಹೆ ನೀಡಿದರು

ಮನುಷ್ಯನಿಗೆ ಮಾನಸಿಕವಾಗಿ ಶಾಂತಿ, ಸಮಾಧಾನವನ್ನು ಕ್ರೀಡೆ ತಂದು ಕೊಡುತ್ತದೆ. ಅಲ್ಲದೆ ಮನಸ್ಸು ಸಹ ಶುದ್ಧವಾಗುತ್ತದೆ. ಇದರೊಂದಿಗೆ ಶಾರೀರಿಕವಾಗಿಯೂ ಸದೃಢರಾಗಬಹುದು ಎಂದು ತಿಳಿಸಿದರು.

ಪೊಲೀಸ್ ಇಲಾಖೆ ಶಿಸ್ತು ಕಾಪಾಡುವ ಇಲಾಖೆ. ಸದಾ ಒತ್ತಡದಲ್ಲಿ ಸೇವೆ ಸಲ್ಲಿಸುವ ಪೊಲೀಸರು ವರ್ಷಕ್ಕೊಮ್ಮೆ ಆಯೋಜಿಸುವ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿ ಒತ್ತಡ ನಿವಾರಿಸಿಕೊಳ್ಳಲು ಮುಂದಾಗಬೇಕು. ಇದರೊಂದಿಗೆ ಕ್ರೀಡೆಗೆ ಹೆಚ್ಚಿನ ಮಹತ್ವ ನೀಡಬೇಕು ಎಂದರು.

ಕರ್ನಾಟಕದ ಪೊಲೀಸರು ರಾಜ್ಯ, ರಾಷ್ಟç ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಮೂಲಕ ದೇಶಕ್ಕೆ ಕೀರ್ತಿ ತಂದಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ. 3 ರಷ್ಟು ಮೀಸಲಾತಿ ನೀಡಲಾಗಿದೆ. ಹಾಗೆಯೇ ಈ ಮೀಸಲಾತಿಯನ್ನು ಎಲ್ಲಾ ಇಲಾಖೆಗಳಿಗೂ ವಿಸ್ತರಣೆ ಮಾಡಲಾಗಿದೆ. ಬೇರೆ ಇಲಾಖೆಗಳ ನೇಮಕಾತಿ ಸಂದರ್ಭದಲ್ಲಿ ಶೇ. 2 ರಷ್ಟು ಮೀಸಲಾತಿ ನಿಗದಿಗೊಳಿಸಲಾಗಿದೆ. ಪೊಲೀಸ್‌ಗೆ ಮಾತ್ರ ಶೇ. 3 ರಷ್ಟು ಮೀಸಲಾತಿ ನಿಗದಿಪಡಿಸಲಾಗಿದೆ. ಹಾಗೆಯೇ ಭಾರತೀಯ ಸೇನೆಯಲ್ಲೂ ಸಹ ಕ್ರೀಡಾಪಟುಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದರು. 

ತುಮಕೂರಿನ ತಿಲಕ್‌ಪಾರ್ಕ್ ಪೊಲೀಸ್ ಠಾಣೆಯ ಗುರುಪ್ರಸಾದ್ ಅವರು ಅಂತಾರಾಷ್ಟ್ರೀಯ ಮಟ್ಟದ ಅಥ್ಲೆಟಿಕ್‌ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿ ದೇಶ ಮತ್ತು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಮನಸ್ಸು, ಸಂಕಲ್ಪ, ಸಾಧನೆ ಮಾಡುವ ಧೈರ್ಯ, ಛಲ ಇದ್ದೆ ಇಂತಹ ಸಾಧನೆಗಳು ಸಾಧ್ಯವಾಗುತ್ತದೆ. ಪ್ರತಿಭೆ ಇರುವವರು ಹೆಚ್ಚು ಹೆಚ್ಚು ಅಭ್ಯಾಸ ಮಾಡುವ ಮೂಲಕ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ದೇಶಕ್ಕೆ ಕೀರ್ತಿ ತಂದಿರುವ ತಿಲಕ್‌ಪಾರ್ಕ್ ಪೊಲೀಸ್ ಠಾಣೆಯ ಗುರುಪ್ರಸಾದ್ ರವರನ್ನು ಸಚಿವರು ಅಭಿನಂದಿಸಿದರು.

ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಕುಣಿಗಲ್, ತಿಪಟೂರು, ಮಧುಗಿರಿ, ತುಮಕೂರು, ಸಿರಾ ಉಪವಿಭಾಗದ ಪೊಲೀಸರಿಂದ ಆಕರ್ಷಕ ಪಥಸಂಚಲನ ನಡೆಯಿತು.

ಪ್ರಾಸ್ತಾವಿಕ ನುಡಿಗಳನ್ನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ. ಸದಾ ಕಾಲ ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸರಿಗೆ ವರ್ಷಕ್ಕೊಮ್ಮೆ ಕ್ರೀಡಾಕೂಟದ ಅವಶ್ಯವಿದೆ. ಹೀಗಾಗಿ ಪ್ರತಿ ವರ್ಷವೂ ಕ್ರೀಡಾಕೂಟವನ್ನು ನಡೆಸಲಾಗುತ್ತಿದೆ ಎಂದರು.

ಪೊಲೀಸರ ದೈಹಿಕ-ಮಾನಸಿಕ ಆರೋಗ್ಯ ಸುಧಾಕರಣೆಗೆ ಕ್ರೀಡೆ ಸಹಕಾರಿ. ವರ್ಷಕ್ಕೊಮ್ಮೆ ನಡೆಯುವ ಕ್ರೀಡಾಕೂಟದಲ್ಲಿ ಪೊಲೀಸರಲ್ಲಿ ಹೊಸ ಹುಮ್ಮಸ್ಸು ಮೂಡುತ್ತದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಜಿಲ್ಲಾಧಿಕಾರಿ ಶುಭಕಲ್ಯಾಣ್, 12ನೇ ಕೆಎಸ್‌ಆರ್‌ಪಿ ಬೆಟಾಲಿಯನ್ ಮುಖ್ಯಸ್ಥರಾದ ಹಂಜಾ ಹುಸೇನ್, ಅಡಿಷನಲ್ ಎಸ್ಪಿ ಪುರುಷೋತ್ತಮ್, ಜಿಲ್ಲೆಯ ಡಿವೈಎಸ್ಪಿಗಳು, ಸರ್ಕಲ್ ಇನ್ಸ್ಪೆಕ್ಟರ್‌ಗಳು ಸೇರಿದಂತೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೇನಾ ನೇಮಕಾತಿ ಆಯ್ಕೆ ಪ್ರಕ್ರಿಯೆ ಕುರಿತು ಅರಿವು; ಪೂರ್ವಭಾವಿ ಪರೀಕ್ಷೆ

ಭಾರತೀಯ ಸೇನೆಯ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮುಂದಿನ ಹಂತದ ನೇಮಕಾತಿ...

ವಿಜಯಪುರ | ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ನೀಡಿ: ಎಸ್.ಎಂ ಪಾಟೀಲ ಗಣಿಹಾರ

ಮುಂಬರುವ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ...

ತುಮಕೂರು | ಪತ್ರಿಕೋದ್ಯಮದಲ್ಲಿ ಸತ್ಯನಿಷ್ಠೆಯೇ ಅಡಿಪಾಯ: ಕಾವ್ಯ ಎನ್

 ಪತ್ರಿಕೋದ್ಯಮದಲ್ಲಿ ಯಶಸ್ಸು ಸಾಧಿಸಲು ಭಾಷೆಯ ಮೇಲಿನ ಹಿಡಿತ, ಪರಿಣಾಮಕಾರಿ ಬರವಣಿಗೆ ಹಾಗೂ...

ವಿಜಯಪುರ | ರೈತರಿಗೆ ಎಕರೆಗೆ ರೂ.25 ಸಾವಿರ ಪರಿಹಾರ ನೀಡಿ: ಭೀಮ್ ರಾಜ್ಯ ದಲಿತ ಸೇವಾ ಸಮಿತಿ ಆಗ್ರಹ

ಮಳೆ ಕೊರತೆಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪ್ರತಿ ಎಕರೆಗೆ ಕನಿಷ್ಠ...