ತುಮಕೂರು | ಕಂಪನಿಯಲ್ಲಿ ಅನ್ಯಾಯವಾಗುತ್ತಿದ್ದರೆ ಅದರ ವಿರುದ್ಧ ಧ್ವನಿ ಎತ್ತಬೇಕು : ನ್ಯಾ. ಬಿ.ವೀರಪ್ಪ

Date:

 ಉದ್ಯೋಗ ಮೇಳದಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಗೆ ತಕ್ಕ ಉದ್ಯೋಗ ಪಡೆದಿರುವ ಯುವಕರು, ಭವಿಷ್ಯದಲ್ಲಿ ಕಂಪನಿಯಲ್ಲಿ ಕಾರ್ಮಿಕರಿಗೆ ಅನ್ಯಾಯವಾಗುತ್ತಿರುವ ಸಂದರ್ಭ ಕಂಡು ಬಂದರೆ ಅದರ ವಿರುದ್ಧ ಧ್ವನಿ ಎತ್ತಬೇಕು ಎಂದು ಉಪಲೋಕಾಯುಕ್ತರು, ಗೌರವಾನ್ವಿತ ನ್ಯಾಯಮೂರ್ತಿ ಬಿ. ವೀರಪ್ಪ ಸಲಹೆ ನೀಡಿದರು.

- Advertisement -

ಶುಕ್ರವಾರ ವಿಶ್ವವಿದ್ಯಾನಿಲಯದಲ್ಲಿ ಹಮ್ಮಿಕೊಳ್ಳಲಾದ ಉದ್ಯೋಗ ಮೇಳದಲ್ಲಿ ನೇಮಕಾತಿ ಪತ್ರಗಳನ್ನು ವಿತರಿಸಿ ಮಾತನಾಡಿದ ಅವರು, ಒಂದೇ ದಿನದಲ್ಲಿ 1500ಕ್ಕೂ ಹೆಚ್ಚು ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ವೇದಿಕೆಯಾಗಿರುವುದು ಶ್ಲಾಘನೀಯ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಕಂಪನಿಯಲ್ಲಿ ಕೆಲಸಕ್ಕೆ ಸೇರಿದ ನಂತರ ನೈಜತೆ ಹಾಗೂ ಜವಾಬ್ದಾರಿಯಿಂದ ಕೆಲಸ ಮಾಡುವಂತೆ ಯುವಕರಿಗೆ ಸಂದೇಶ ನೀಡಿದರು. ಸಮಾಜಕ್ಕೆ ಸಹಾಯಕವಾಗುವಂತ ಕೆಲಸ ಮಾಡಬೇಕು. ಕೈ ಚಾಚಿ ಕೆಲಸ ಮಾಡುವ ಸಂಸ್ಕೃತಿ ನಮ್ಮಲ್ಲಿ ಇರಬಾರದು ಎಂದರು.

ಉದ್ಯೋಗ ಮೇಳದಂತಹ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡರೆ ಯುವಕರು ಉತ್ತಮ ಜೀವನವನ್ನು ರೂಪಿಸಿಕೊಳ್ಳಬಹುದು ಎಂದು ಹೇಳಿದ ಅವರು ವಿದ್ಯಾರ್ಥಿಗಳು ಮನಸ್ಸು ಮಾಡಿದರೆ ಐಎಎಸ್, ಐಪಿಎಸ್ ಸೇರಿದಂತೆ ಉನ್ನತ ಹುದ್ದೆಗಳನ್ನು ಅಲಂಕರಿಸಬಹುದು ಎಂದು ಪ್ರೇರಣಾದಾಯಕ ಸಂದೇಶ ನೀಡಿದರು.

ಎಲ್ಲಾ ಜಿಲ್ಲೆಗಳಲ್ಲೂ ಇಂತಹ ಉದ್ಯೋಗ ಮೇಳಗಳನ್ನು ಆಯೋಜಿಸಿ ಹೆಚ್ಚು ನಿರುದ್ಯೋಗಿಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಉಪಲೋಕಾಯುಕ್ತರು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಜಿಲ್ಲಾ ಉದ್ಯೋಗಾಧಿಕಾರಿ ಕಿಶೋರ್ ಸೇರಿದಂತೆ ಹಲವಾರು ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ‌| ಕಬ್ಬಿಗೆ ದರ ನಿಗದಿ ಆಗುವ ತನಕ ಕಾರ್ಖಾನೆ ಆರಂಭಿಸುವಂತಿಲ್ಲ: ರೈತರು ಆಗ್ರಹ

"ಕಬ್ಬಿಗೆ ದರ ನಿಗದಿ‌ ಆಗುವ ತನಕ ಕಾರ್ಖಾನೆಗಳನ್ನು ಆರಂಭಿಸಬಾರದು" ಎಂದು ರೈತ...

ಬೀಳಗಿ | ಕಬ್ಬಿಗೆ ರೂ.5,000 ದರ ಆಗ್ರಹಿಸಿ ಭಾರತೀಯ ಕಿಸಾನ್‌ ಸಂಘದ ಪ್ರತಿಭಟನೆ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ರೂ. 5,000 ದರ ನಿಗದಿಪಡಿಸುವುದು ಸೇರಿದಂತೆ...

ಕೋಲಾರ | ಕ್ರೀಡೆ ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ: ಮೈಲಾಂಡಹಳ್ಳಿ ಮುರಳಿ

ಕ್ರೀಡೆಯಲ್ಲಿ ಗ್ರಾಮೀಣ ಭಾಗದ ಯುವಕರಿಗೆ ಉತ್ತಮ ಅವಕಾಶಗಳು ದೊರೆಯಬೇಕು. ಕ್ರೀಡೆ ದೈಹಿಕ...

ಜಮಖಂಡಿ | ದಲಿತ ಸಾಹಿತ್ಯ ಶೋಷಣೆಯ ವಿರುದ್ಧದ ಧ್ವನಿ: ಪರಶುರಾಮ ಮಹಾರಾಜನವರ

ಅಸ್ಪೃಶ್ಯತೆ, ಸಾಮಾಜಿಕ ತಾರತಮ್ಯ ಹಾಗೂ ಶೋಷಣೆಯ ವ್ಯವಸ್ಥೆಯ ವಿರುದ್ಧ ಪ್ರಶ್ನೆ ಎತ್ತಿ,...