ತುಮಕೂರು | ಮಾ.1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ; ಸಕಲ ಸಿದ್ದತೆಯಿಂದ ಸಜ್ಜು

Date:

Advertisements

ಮಾರ್ಚ್‌ 1ರಿಂದ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ತುಮಕೂರು ಜಿಲ್ಲೆಯಲ್ಲಿ 26,235 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಾಧರ್ ತಿಳಿಸಿದ್ದಾರೆ.

“ಜಿಲ್ಲೆಯಲ್ಲಿ ತುಮಕೂರು ವಿಭಾಗ ಮತ್ತು ಮಧುಗಿರಿ ವಿಭಾಗ ಎಂದು ವಿಂಗಡಿಸಲಾಗಿದ್ದು, ತುಮಕೂರು ವಿಭಾಗದ ವ್ಯಾಪ್ತಿಗೆ 6 ತಾಲೂಕು ಹಾಗೂ ಮಧುಗಿರಿ ವಿಭಾಗದ ವ್ಯಾಪ್ತಿಗೆ 4 ತಾಲೂಕುಗಳು ಒಳಪಡಲಿದ್ದು, ತುಮಕೂರು ವಿಭಾಗದಲ್ಲಿ 25 ಪರೀಕ್ಷಾ ಕೇಂದ್ರಗಳು ಹಾಗೂ ಮಧುಗಿರಿ ವಿಭಾಗದಲ್ಲಿ 10 ಪರೀಕ್ಷಾ ಕೇಂದ್ರಗಳು ಸೇರಿ ಒಟ್ಟು 35 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ” ಎಂದು ತಿಳಿಸಿದ್ದಾರೆ.

“ಜಿಲ್ಲೆಯ ತುಮಕೂರು ತಾಲೂಕಿನಲ್ಲಿ 12, ಕೊರಟಗೆರೆ ತಾಲೂಕಿನಲ್ಲಿ 1, ಗುಬ್ಬಿ, ಚಿಕ್ಕನಾಯಕನಹಳ್ಳಿ, ತುರುವೇಕೆರೆ, ಮಧುಗಿರಿ ತಾಲೂಕಿನಲ್ಲಿ ತಲಾ 2, ಕುಣಿಗಲ್, ತಿಪಟೂರು, ಪಾವಗಡ ತಾಲೂಕಿನಲ್ಲಿ ತಲಾ 3, ಸಿರಾ ತಾಲೂಕಿನಲ್ಲಿ 4 ಸೇರಿ ಒಟ್ಟು 35 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಯಾವುದೇ ರೀತಿಯ ಭಯ, ಆತಂಕಕ್ಕೆ ಒಳಗಾಗದಂತೆ ಸುಲಲಿತವಾಗಿ ಪರೀಕ್ಷೆ ಬರೆಯಬೇಕು” ಎಂದು ಸಲಹೆ ನೀಡಿದ್ದಾರೆ.

Advertisements

“ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಜಿಲ್ಲಾಧಿಕಾರಿಯವರು ಈಗಾಗಲೇ ಪರೀಕ್ಷಾ ಕೇಂದ್ರಗಳ ಸುತ್ತ 144ರ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು ಜಿಲ್ಲೆಯಲ್ಲೇ ಮೆಗಾ ಟೆಕ್ಸ್‌ಟೈಲ್ಸ್‌ ಪಾರ್ಕ್ ನಿರ್ಮಾಣಕ್ಕೆ ಆಗ್ರಹ

“ಮಾರ್ಚ್ 1 ರಂದು ಕನ್ನಡ ಮತ್ತು ಅರೇಬಿಕ್, ಮಾ.4 ರಂದು ಗಣಿತ, ಶಿಕ್ಷಣ ಶಾಸ್ತ್ರ, ಮಾ.5ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಮಾ.6ರಂದು ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‌ನೆಸ್, ಮಾ.7 ರಂದು ಇತಿಹಾಸ, ಭೌತಶಾಸ್ತ್ರ, ಮಾ.9ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹವಿಜ್ಞಾನ, ಮಾ.11ರಂದು ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಮಾ.13ರಂದು ಇಂಗ್ಲೀಷ್, ಮಾ.15ರಂದು ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲಗಣಿತ, ಮಾ.16ರಂದು ಅರ್ಥಶಾಸ್ತ್ರ, ಮಾ.18ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ, ಮಾ.20ರಂದು ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ ಹಾಗೂ ಗಣಕ ವಿಜ್ಞಾನ, ಮಾ.21ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕ್ರೃತ, ಫ್ರೆಂಚ್, ಮಾ.22ರಂದು ಹಿಂದಿ ಪರೀಕ್ಷೆ ನಡೆಯಲಿದೆ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X