ತುಮಕೂರು | ಬೇವು ಲೇಪಿತ ಯೂರಿಯಾ ಅಕ್ರಮ ಸಾಗಣೆ; ಲಾರಿ ವಶ

Date:

ಬೇವು ಲೇಪಿತ ಯೂರಿಯಾ ರಸಗೊಬ್ಬರವನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಲಾರಿಯನ್ನು ತುಮಕೂರಿನ ವಾಣಿಜ್ಯ ತೆರಿಗೆ ಇಲಾಖೆಯಿಂದ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದೆ.

- Advertisement -

ತುಮಕೂರು ನಗರದ ಹೊರವಲಯದ ರಂಗಾಪುರ-ಅಂತರಸನಹಳ್ಳಿ ಸರ್ವೀಸ್ ರಸ್ತೆಯಲ್ಲಿ ಅಕ್ರಮವಾಗಿ ಬೇವು ಲೇಪಿತ ಯೂರಿಯಾವನ್ನು ಸಾಗಣೆ ಮಾಡುತ್ತಿದ್ದ ಲಾರಿಯ ಮೇಲೆ ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ಆಯುಕ್ತ ಟಿ ಆರ್ ಕೃಷ್ಣಕುಮಾರ್ ನಿರ್ದೇಶದನ ಮೇರೆಗೆ ದಾಳಿ ನಡೆಸಿದ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತ ನಾಗರಾಜು ಸಿ ಗಂಗನಗೌಡರ್, ಸಿಟಿಓ ನಾಗರಾಜು ಎಸ್, ಸಿಟಿಐ ಹರ್ಷಿತ ಅವರು ಲಾರಿಯನ್ನು ತಡೆದು ದಾಖಲಾತಿ ಪರಿಶೀಲಿಸಿದಾಗ ದಾಖಲಾತಿ ಪ್ರಕಾರ ಸರ್ಕಾದ ಕ್ಯಾ‌ಲ್ಸಿಯಂ ಕಾರ್ಬೊನೇಟ್ ಮತ್ತು ವಾಸ್ತವ ಸರ್ಕಾರದ ಬೇವು ಲೇಪಿತ ಯೂರಿಯಾ ರಸಗೊಬ್ಬರವನ್ನು ಗಂಗಾವತಿಯಿಂದ ತುಂಬಿಕೊಂಡು ಸೇಲಂ, ತಮಿಳುನಾಡಿಗೆ ಅಕ್ರಮವಾಗಿ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ತಕ್ಷಣ ಲಾರಿಯನ್ನು ವಶಕ್ಕೆ ಪಡೆದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ರಸಗೊಬ್ಬರ ಸಂಬಂಧ ಪರಿಶೀಲನೆಗಾಗಿ ಕೃಷಿ ಇಲಾಖೆ ಜಾರಿ ದಳದ ಸಹಾಯಕ ನಿರ್ದೇಶಕ ಪುಟ್ಟರಂಗಪ್ಪನವರಿಗೆ ಮಾಡಿದ ಮನವಿ ಮೇರೆಗೆ ಕೃಷಿ ಇಲಾಖೆ ಅಧಿಕಾರಿಗಳು ರಸಗೊಬ್ಬರ ಸಂಬಂಧ ದಾಖಲಾತಿ ಪರಿಶೀಲಿಸಿ ಸರ್ಕಾರದ ಆದೇಶ ಉಲ್ಲಂಘನೆ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

“ಕೃಷಿ ಬಳಕೆಗೆ ಮೀಸಲಾದ ಸರ್ಕಾರದ ಸಹಾಯ ಧನದ ಬೇವು ಲೇಪಿತ ಯೂರಿಯಾ ರಸಗೊಬ್ಬರವನ್ನು ಕೈಗಾರಿಕಾ ಉದ್ದೇಶಕ್ಕೆ ಅಂತಾರಾಜ್ಯ ಸಾಗಾಣಿಕೆ ನಿಷೇಧವಿದ್ದರೂ ಸಹ ಸಾಗಾಣಿಕೆ ಮಾಡುತ್ತಿರುವುದು ಕಂಡುಬಂದಿದ್ದು, ಈ ಸಂಬಂಧ ಹೆಚ್ಚಿನ ತನಿಖೆಗೆ ಕ್ರಮ ಕೈಗೊಳ್ಳಲಾಗಿದೆ” ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ರಾಜ್ಯದಲ್ಲಿ ಬಿಜೆಪಿ ಒಂದಂಕಿ ಸೀಟು ದಾಟಲ್ಲ : ಸಚಿವ ರಾಮಲಿಂಗಾರೆಡ್ಡಿ

ಈ ಸಂಬಂಧ ಕೃಷಿ ಇಲಾಖೆ ಜಾರಿ ದಳದ ಸಹಾಯಕ ನಿರ್ದೇಶಕ ಪುಟ್ಟರಂಗಪ್ಪನವರು ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...