ತುಮಕೂರು | ಕಲೆಯ ಗ್ರಹಿಕೆ ಮೇಲೆ ನಿರ್ಬಂಧ ಹೇರುವುದು ಅಪಾಯಕಾರಿ: ವಿಮರ್ಶಕ ರಾಘವೇಂದ್ರರಾವ್

Date:

ಕಲೆಯ ಗ್ರಹಿಕೆ ಮೇಲೆ ನಿರ್ಬಂಧಗಳನ್ನು ಹೇರುವುದು ಅಪಾಯಕಾರಿಯಾಗಿದೆ. ಗ್ರಹಿಕೆಯು ನಿಯಮಬದ್ಧವಾಗಿದ್ದರೂ ನಿರ್ಬಂಧ ರಹಿತವಾಗಿರಬೇಕು ಎಂದು ವಿಮರ್ಶಕ, ಪ್ರೊ. ಎಚ್.ಎಸ್ ರಾಘವೇಂದ್ರರಾವ್ ಹೇಳಿದರು.

- Advertisement -

ತುಮಕೂರು ವಿವಿಯ ಸ್ನಾತಕೋತ್ತರ ಡಿವಿಜಿ ಕನ್ನಡ ಅಧ್ಯಯನ ಕೇಂದ್ರ ಹಾಗೂ ಇಂಗ್ಲೀಷ್ ಸಾಹಿತ್ಯ ಅಧ್ಯಯನ ವಿಭಾಗವು ಜಂಟಿಯಾಗಿ ಆಯೋಜಿಸಿದ್ದ ‘ಕಲೆಯ ಮೂಲಕ ಲೋಕಗ್ರಹಿಕೆ’ ಎಂಬ
ಪರಿಕಲ್ಪನೆಯಲ್ಲಿ ‘ಸಹಿತ’ ಸಾಹಿತ್ಯೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಸಂಸ್ಕೃತಿಯನ್ನು ಸ್ವಾಧೀನಪಡಿಸಿಕೊಳ್ಳಬೇಕು. ಅನುವಂಶಿಕವಾಗಿ ಪಡೆಯಬಾರದು. ಕಲಾ ಗ್ರಹಿಕೆ, ಸೃಷ್ಟಿ, ಪ್ರಕಾರ, ಪ್ರಚಾರ ಎಲ್ಲಿಯವರೆಗೂ ಅಧಿಕಾರದ ಒತ್ತಡದಲ್ಲಿ ಇರುತ್ತದೋ, ಅಲ್ಲಿಯವರೆಗೂ
ಅಪಾಯವೇ ಆಗಿರುತ್ತದೆ. ಒತ್ತಡವನ್ನು ಮೀರಿ ವ್ಯಕ್ತಿ ಕಲೆಯನ್ನು ಗ್ರಹಿಸಿ, ಕಟ್ಟಬೇಕು. ಕಲೆ ದಾರಿ ತಪ್ಪಿಸಬಾರದು, ದಾರಿ ತೋರಬೇಕು. ವಿಷಯ ಗ್ರಹಿಕೆ ಯೋಚನೆಯಾಗಿ ಬದಲಾದಾಗ ಯಶಸ್ಸು
ಕಾಣಬಹುದು” ಎಂದರು.

“ಗುರುಗಳನ್ನು, ಹಿರಿಯರನ್ನು, ಪುಸ್ತಕಗಳನ್ನು ಹೀರಬೇಕು, ಮೀರಬೇಕು. ಆಗ ಲೋಕ-ಕಲೆ ಎರಡೂ ಉಳಿಯುತ್ತದೆ. ಬದಲಾಗುತ್ತಿರುವ ಲೋಕಕ್ಕೆ ಬದಲಾದ ಕಲೆಯ ಅವಶ್ಯಕತೆ ಇದೆ. ನೋವುಗಳನ್ನು ನಲಿವಾಗಿ ಬದಲಾಯಿಸುವ ಜೀವನದ ಕಲೆಯ ಗ್ರಹಿಕೆಯಾಗಬೇಕಿದೆ” ಎಂದರು.

“ಕಲೆಗಳ ಮೂಲಕ ಲೋಕ ಗ್ರಹಿಕೆಯಾಗಬೇಕು. ಬಚ್ಚಿಟ್ಟುಕೊಂಡ ಲೋಕಗಳ ಅನಾವರಣ ಕಲಾವಿದನಿಂದ ಆಗಬೇಕು. ಶತಮಾನಗಳಿಂದ ನೂಕಲ್ಪಟ್ಟ ಮಹಿಳೆಯರ, ದಲಿತರ ಲೋಕ
ಕಲೆಯಿಂದ ಅನಾವರಣವಾಯಿತು. ಕೇವಲ ಸಾಹಿತ್ಯವಷ್ಟೇ ಕಲೆಯಾಗಬಾರದು. ನೃತ್ಯ, ದೃಶ್ಯ, ಚಿತ್ರ, ಸಂಗೀತವೂ ವಿಭಿನ್ನ ಕಲೆಗಳು. ಕಲಾವಿದ ಮನುಷ್ಯನಾಗಿ ಲೋಕವನ್ನು ಅನುಭವಿಸುತ್ತಾನೆ. ಕಲೆಯನ್ನು ಸೃಷ್ಟಿಸುವಾಗ ಲೋಕದ ಅನುಭವ ಗ್ರಹಿಕೆಯಾಗುತ್ತದೆ” ಎಂದು ತಿಳಿಸಿದರು.

“ಕಲಾವಿದ ತನ್ನ ಲೋಕವನ್ನು ಕಲೆಯ ಮೂಲಕವೇ ಗ್ರಹಿಸಿಕೊಳ್ಳಬೇಕು. ಕವಿತೆ, ಕಾದಂಬರಿ ಬರೆಯುವ ಮೂಲಕ ಲೋಕದ ಗ್ರಹಿಕೆಯಾಗುತ್ತದೆ. ಪ್ರತಿಯೊಂದು ಕಲೆಯ ಅಂತರ ವಿಭಿನ್ನವಾಗಿರುತ್ತದೆ. ‘ಸಂಗೀತದ ರೆಕ್ಕೆ ಕವಿತೆಯ ಹಕ್ಕಿಗೆ ಬಂದಾಗ ಏನಾಗುತ್ತದೋ’ ಹಾಗೆಯೇ, ಕಲಾವಿದ ಕಟ್ಟುವುದು ಹೊಸದೇ ಲೋಕವನ್ನು. ಕಲಾವಿದನಿಂದ ಪಾತ್ರ ಸೃಷ್ಟಿಯಾಗುತ್ತದೆ, ಮುಂದುವರಿಯುತ್ತದೆ. ಇವೆಲ್ಲವೂ ಕಲಾವಿದನ ಗಹನವಾದ ಚಿಂತನೆಯಿಂದ ಸಾಧ್ಯ” ಎಂದರು.

“ನವಿಲು ನರ್ತಿಸುವುದು ಸಹಜ, ಪ್ರಕೃತಿ ನಿಯಮ. ನವಿಲಿನಂತೆ ನರ್ತಿಸುವುದೇ ಕಲೆ. ಕಲೆಯಿಂದ ಹುಟ್ಟಿದ ಲೋಕ ಕಲೆಯ ಮಾಧ್ಯಮದಿಂದ ನಿಯಂತ್ರಿಸಲ್ಪಟ್ಟಿರುತ್ತದೆ. ಕಲೆಯನ್ನು ಕಟ್ಟಿಕೊಡುವ ಕಲಾಕೃತಿ ವಿಭಿನ್ನವಾಗಿರುತ್ತದೆ. ಕೇವಲ ಭಾಷೆ ಬರುವುದರಿಂದ ಕವನ, ಕವಿತೆ, ಕಾದಂಬರಿ ಅರ್ಥವಾಗುತ್ತದೆ ಎಂದರೆ ಅದು ತಪ್ಪು ಗ್ರಹಿಕೆ. ಕಲಾರಸಿಕ ಕಲೆಯನ್ನು ಕಬ್ಬಿನ ರಸದಂತೆ ಹೀರಿದಾಗ ಮಾತ್ರ ಕಲಾಗ್ರಹಿಕೆ ಸಂಪೂರ್ಣ” ಎಂದರು.

“ಕಲೆ ಲೋಕವನ್ನು ಗ್ರಹಿಸುವ, ಕಟ್ಟುವ, ತಲುಪಿಸುವ ರೀತಿ ಬೇರೆಯದೇ ಆಗಿರುತ್ತದೆ. ಕಲೆಯ ಶಾಸ್ತ್ರದ ಅರಿವಿಲ್ಲದಿದ್ದರೂ ಕಲೆ ಲೋಕವನ್ನು ಪ್ರಾಥಮಿಕವಾಗಿ ತಲುಪುತ್ತದೆ. ಕಲೆಯ ಶಾಸ್ತ್ರ ಗೊತ್ತಿದ್ದವರಿಗೆ ಮಾತ್ರ ಪರಿಣಾಮ ಬೀರುತ್ತದೆ. ಕಲಾವಿದ ವಿಷಯ ಮಂಡಿಸುವ ವಕೀಲನಾಗಬಾರದು. ಲೋಕವನ್ನು ಗ್ರಹಿಸಿ, ಸಮುದಾಯದ ಒಳ-ಹೊರ ಆಳವನ್ನು ಅರಿತು ಕಲೆಯನ್ನು ಕಟ್ಟುವ ಅರ್ಥಗಳ ತಯಾರಕನಾಗಬೇಕು” ಎಂದು ಹೇಳಿದರು.

“ಶತಮಾನಗಳು ಕಳೆದಂತೆ ಕಲೆಯು ಸಮಯಾಧಾರಿತ, ವ್ಯಕ್ತಿಯಾಧಾರಿತ ಹಾಗೂ ಸಂಸ್ಕೃತಿಯಾಧಾರಿತವಾಗಿ ಬದಲಾಗುತ್ತದೆ. ಬದಲಾಗದ ಕಲೆ ಪೂರ್ವಗ್ರಹಕ್ಕೆ ಕಾರಣವಾಗಲಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಆರೋಪ; ಪುತ್ರಿಯಿಂದ ದೂರು

ಎರಡನೆಯ ದಿನದ ಸಾಹಿತ್ಯೋತ್ಸವದಲ್ಲಿ ರಂಗಭೂಮಿ ಕಲಾವಿದರಾದ ಅಕ್ಷತಾ ಮತ್ತು ತಂಡ ‘ಲೀಕ್ ಔಟ್’ ಕಥಾಭಿನಯ ಪ್ರಸ್ತುತಿಪಡಿಸಿದರು. ‘ಮಾನವಿಕಗಳ ಭವಿಷ್ಯ’ ಕುರಿತು ಬೆಂಗಳೂರು ಐಸೆಕ್‍ನ ಪ್ರಾಧ್ಯಾಪಕ ಪ್ರೊ. ಚಂದನ್ ಗೌಡ, ಬೆಂಗಳೂರು ವಿವಿಯ ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕ ಪ್ರೊ. ಶ್ರೀಕೀರ್ತಿ ಮಾತು-ಸಂವಾದ ನಡೆಸಿಕೊಟ್ಟರು. ಮೌನೇಶ ಬಡಿಗೇರ ಅವರ ಉಪಸ್ಥಿತಿಯಲ್ಲಿ ಕಥೆಗಾರರಾದ ದಾದಾಪೀರ್ ಜೈಮನ್, ರವಿಕುಮಾರ್ ನೀಹ, ಮಿರ್ಜಾ ಬಶೀರ್ ಕಟ್ಟು-ಕಥೆ ನಡೆಸಿಕೊಟ್ಟರು. ಅನುವಾದಕಿ ವನಮಾಲಾ ವಿಶ್ವನಾಥ್ ಭಾಷಾಂತರ ಕುರಿತು ನುಡಿ-ಮಾರ್ನುಡಿ ವಿಷಯ ಪ್ರಸ್ತುತಪಡಿಸಿದರು.

ಸಾಹಿತ್ಯೋತ್ಸವದ ಸಂಘಟಕರುಗಳಾದ ಪ್ರೊ ನಿತ್ಯಾನಂದ ಬಿ ಶೆಟ್ಟಿ, ಪ್ರೊ ಎಚ್ ಕೆ ಶಿವಲಿಂಗಸ್ವಾಮಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಅ.5ರಿಂದ ಮೂರು ದಿನಗಳ ಮಾಧ್ಯಮ ಕಾರ್ಯಾಗಾರ : ‘ರೇಡಿಯೋ ಬರವಣಿಗೆಯಿಂದ ಛಾಯಾಗ್ರಹಣದವರೆಗೆ’ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪಾಠ

 ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಮಾಧ್ಯಮ ಲೋಕದ ಪ್ರಾಯೋಗಿಕ ಅನುಭವ ಕಟ್ಟಿಕೊಡಲು ಶ್ರೀ ಸಿದ್ಧಾರ್ಥ...

ತುಮಕೂರು | ಜಂತರ್ ಮಂತರ್‌ನಲ್ಲಿ ಯುವಜನರ ಬಂಧನ: ಸಿಪಿಐ(ಎಂ) ತೀವ್ರ ಖಂಡನೆ

 ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತಕ್ಷಣ ತೆಗೆದುಹಾಕಬೇಕೆಂದು...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...

ತುಮಕೂರಿನಲ್ಲಿ ಬರದ ಕರಿನೆರಳು: ಕೇಂದ್ರ ತಂಡದ ಮುಂದೆ ₹159 ಕೋಟಿ ನಷ್ಟದ ಲೆಕ್ಕ

ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಜಿಲ್ಲೆಯಲ್ಲಿ ಈವರೆಗೆ ಸುಮಾರು ₹159 ಕೋಟಿ...