ತುಮಕೂರು | ಅಸಮರ್ಪಕ ನಿರ್ವಹಣೆ; ಗೋಶಾಲೆಯಲ್ಲಿ 10ಕ್ಕೂ ಹೆಚ್ಚು ರಾಸುಗಳ ಸಾವು

Date:

ಗೋಶಾಲೆಯಲ್ಲಿ ಕಳೆದ ಎರಡು ತಿಂಗಳಿಂದ ರಾಸುಗಳಿಗೆ ಸಮರ್ಪಕ ಮೇವು ನೀರು ನೀಡದ ಕಾರಣ 10ಕ್ಕೂ ಹೆಚ್ಚು ರಾಸುಗಳು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನಲ್ಲಿ ಇತ್ತೀಚೆಗೆ ನಡೆದಿದೆ.

- Advertisement -

“ತಾಲೂಕಿನ ಬೈಚಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೆಡ್ಡಿಹಳ್ಳಿ ಗ್ರಾಮದ ಬಳಿಯ ‘ಗೋಮುಖ’ ಗೋಶಾಲೆಯಲ್ಲಿ ಎರಡು ತಿಂಗಳುಗಳಿಂದ ಮೇವು, ನೀರು ಕೊಡದೆ ಕಬ್ಬಿಣದ ‌ಬೇಲಿಯಲ್ಲಿಯೇ ಎಮ್ಮೆ ಹಾಗೂ ರಾಸುಗಳನ್ನು ಕೂಡಿ ಹಾಕಲಾಗಿದೆ. ಅವುಗಳಿಗೆ ಸಮರ್ಪಕ ಮೇವು, ನೀರು ನೀಡಿಲ್ಲ” ಎಂದು ಸ್ಥಳೀಯರ ಆರೋಪ ಕೇಳಿಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಗೋಮುಖ ಎಂಬ ಹೆಸರಿನಲ್ಲಿ ಪ್ರಾರಂಭಿಸಿರುವ ಗೋಶಾಲೆಯನ್ನು ಸರ್ಕಾರಿ ಅನುದಾನ ಬಳಸಿಕೊಳ್ಳಲು ಅಥವಾ ಇಲ್ಲಿನ ಸರ್ಕಾರಿ ಗೋಮಾಳ  ಕಬಳಿಸುವ ದುರುದ್ದೇಶದಿಂದ ಮಾಡಲಾಗಿದೆಯೇ ಹೊರತು ನಿಜವಾದ ಗೋರಕ್ಷಣೆಗಾಗಿ ಅಲ್ಲ. ಇಲ್ಲಿ ರಾಸುಗಳಿಗೆ ಸರಿಯಾಗಿ ಆಹಾರ ನೀಡುತ್ತಿಲ್ಲ. ಸರಿಯಾದ  ನಿರ್ವಹಣೆಯೂ ಇಲ್ಲದೆ ಮೂಕ ಪ್ರಾಣಿಗಳು ಮೃತಪಟ್ಟಿವೆ” ಎಂದು ಸ್ಥಳೀಯರು ಆರೋಪಿಸಿದ್ದಾರೆ.

“ಸರ್ಕಾರದಿಂದ ಲಾಭ ಪಡೆಯುವ ಉದ್ದೇಶದಿಂದ ಗೋಶಾಲೆ ತೆರೆಯಲಾಗಿದ್ದು, ಪಕ್ಕದಲ್ಲಿನ ಗೋಮಾಳ ಕಬಳಿಸುವ ಯತ್ನ ಮಾಡಲಾಗುತ್ತಿದೆ. ಆ ಕಾರಣದಿಂದ ಇಲ್ಲಿನ ರಾಸುಗಳನ್ನು ನಿಗಾವಹಿಸಿ ಸಾಕುತ್ತಿಲ್ಲ” ಎಂದು ಸ್ಥಳೀಯ ನಿವಾಸಿ ಸಿದ್ದಲಿಂಗಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಧಾರವಾಡ | ಲಿಂಗಾಯತ ಸ್ವತಂತ್ರ ಧರ್ಮ ಆಗುವುದರಿಂದ ಹಿಂದುತ್ವಕ್ಕೆ ಧಕ್ಕೆಯಾಗದು: ಸಿದ್ಧರಾಮ‌ ಸ್ವಾಮೀಜಿ

“ಗೋಶಾಲೆಯಲ್ಲಿ ಗೋವುಗಳು ಸತ್ತಿರುವುದರ ಬಗ್ಗೆ ಪಶು ಇಲಾಖೆಗೆ ಮಾಹಿತಿ ನೀಡಲಾಗಿದೆ. ಸಮರ್ಪಕವಾಗಿ ನಿರ್ವಹಣೆ ಮಾಡದ ಕಾರಣ ಹತ್ತಕ್ಕೂ ಹೆಚ್ಚು ರಾಸುಗಳು ಸಾವಿಗೀಡಾಗಿವೆ” ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ್ ತಿಳಿಸಿದ್ದಾರೆ.

“ಗೋಶಾಲೆಯಲ್ಲಿ ರಾಸುಗಳ ಕಸ ಎತ್ತದ ಕಾರಣ ತೊಂದರೆಯಾಗಿದೆ. ಒಂದು ತಿಂಗಳಿನಿಂದ ಮೇವು ನೀರು ಇರಲಿಲ್ಲ. ಕೆಲವು ದಾನಿಗಳು ಮೇವು ದಾನ ನೀಡಿದ್ದಾರೆ. ಇತ್ತೀಚೆಗೆ 10ಕ್ಕೂ ಹೆಚ್ಚು ರಾಸು ಸಾವಿಗೀಡಾಗಿವೆ” ಎಂದು ಗೋಶಾಲೆ ನಿರ್ವಣಾಕಾರ ದೇಶ್ಯಾ ನಾಯಕ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...