ತುಮಕೂರು | ದೇಶದಲ್ಲಿ ಹೆಚ್ಚಿದ ಅಸಮಾನತೆ, ವೈವಿಧ್ಯತೆಯಲ್ಲಿ ಬಿರುಕು : ಮಾಜಿ ಕೇಂದ್ರ ಸಚಿವ ಜಯರಾಮ್ ರಮೇಶ್

Date:

21 ನೇ ಶತಮಾನ ರಾಜಕೀಯ ಮತ್ತು ಧಾರ್ಮಿಕತೆಯಿಂದ ಗುರಿತಿಸಿಕೊಳ್ಳಬಾರದು. ಬದಲಾಗಿ ವಿಜ್ಞಾನ ಮತ್ತು ಆಧ್ಯಾತ್ಮದಿಂದ ಪ್ರೇರಣೆಗೊಳ್ಳಬೇಕು. ಭಾರತ ದೇಶವು ಬೇರೆಲ್ಲ ದೇಶಗಳಿಗಿಂತ ತನ್ನ ಧಾರ್ಮಿಕ, ಸಾಂಸ್ಕೃತಿಕ, ಭಾಷೆ, ಸಂವಿಧಾನದಲ್ಲಿ ವೈವಿಧ್ಯತೆಯಿಂದ ಗುರುತಿಸಿಕೊಂಡಿದೆ. ಹಾಗೆ ಆರ್ಥಿಕವಾಗಿ ಬೆಳವಣಿಗೆ ಕಾಣುತ್ತಿದೆ ಈ ಸಂದರ್ಭದಲ್ಲಿ ವೈವಿಧ್ಯತೆಯಲ್ಲಿ ಬಿರುಕು ಮೂಡದಂತೆ ಯುವಜನತೆ ಎಚ್ಚರ ವಹಿಸಬೇಕು. ವೈವಿಧ್ಯತೆ ಭಾರತೀಯರನ್ನು ವ್ಯಾಖ್ಯಾನಿಸಬೇಕು, ವಿಭಜಿಸಬಾರದು ಎಂದು ಎಂದು ಮಾಜಿ ಕೇಂದ್ರ ಸಚಿವ ಹಾಗೂ ಸಂಸದ ಜಯರಾಮ್ ರಮೇಶ್ ತಿಳಿಸಿದರು. 

- Advertisement -

ತುಮಕೂರು ನಗರದ ಸಮೀಪದ ಅಗಳಕೋಟೆಯ ಶಿಕ್ಷಣ ಭೀಷ್ಮ ಡಾ.ಎಚ್.ಎಮ್.ಗಂಗಾಧರಯ್ಯ ಸ್ಮಾರಕ ಭವನದ ಭವನದಲ್ಲಿ ಸಾಹೇ (ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಷನ್) ಆಯೋಜಿಸಿದ್ದ 14ನೇ ಘಟಿಕೋತ್ಸವದಲ್ಲಿ  ಮಾತನಾಡಿದ ಅವರು, ಅಸಮಾನತೆ ಎಂಬುದು ನಮ್ಮ ದೇಶದ ಅಭಿವೃದ್ಧಿಗೆ ಬೀಳುತ್ತಿರುವ ದೊಡ್ಡ ಪೆಟ್ಟು. ಶಿಕ್ಷಣ, ಅರೋಗ್ಯ, ಆರ್ಥಿಕ, ಆದಾಯಗಳಂತಹ ಕ್ಷೇತ್ರದಲ್ಲಿ ಪ್ರಮುಖವಾಗಿ ಅಸಮಾನತೆ ಹೆಚ್ಚಾಗಿದೆ. ಭಾರತದಲ್ಲಿ ಬಡತನ ಕಡಿಮೆಯಾಗಿದೆ ಆದರೆ ಅಸಮಾನತೆ ಹೆಚ್ಚಾಗಿದೆ, ಆದ್ದರಿಂದ ಅಸಮಾನತೆಯ ಸಾಮಾಜಿಕ ವ್ಯವಸ್ಥೆ ಬದಲಾಗಬೇಕಿದೆ ಎಂದು ಪದವಿ ಪಡೆದ ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ವೈವಿಧ್ಯಮಯ ಜಾತಿ, ಧರ್ಮ, ವೇಷಭೂಷಣಗಳು ಆಚಾರ ಮತ್ತು ಪದ್ಧತಿಗಳನ್ನು ಹೊಂದಿರುವ ನಮ್ಮ ಸಮಾಜದಲ್ಲಿ ಹೊಸ ಹೊಸ ವಿಚಾರಗಳನ್ನು ಸೃಜಿಸಿ, ಸಮಸ್ಯೆಗಳನ್ನು ಪರಿಹರಿಸಲು ಯುವಜನತೆ ಪ್ರಯತ್ನಿಸಬೇಕು ಎಂದು ಅಭಿಪ್ರಾಯಪಟ್ಟರು. ಸಹ ಶಿಕ್ಷಣ ಕೊಡುತ್ತಿರುವ ಶಿಕ್ಷಣ ಸಂಸ್ಥೆಯಾದ ಸಿದ್ಧಾರ್ಥ ಸಂಸ್ಥೆಯಲ್ಲಿ ಶೇ.60ರಷ್ಟು ಹೆಣ್ಣು ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ ಎನ್ನುವುದು ಹೆಮ್ಮೆಯ ಸಂಗತಿ ಎಂದರು

1002394105

ಮಹಿಳಾ ವಿಶ್ವವಿದ್ಯಾಲಯ ಮತ್ತು ಸಂಸ್ಥೆಗಳಲ್ಲಿ ಕೇವಲ ಹೆಣ್ಣು ಮಕ್ಕಳೇ ಶಿಕ್ಷಣ ಪಡೆಯುವುದು ಹೆಚ್ಚುಗಾರಿಕೆಯಲ್ಲ. ಸಹ ಶಿಕ್ಷಣ ನೀಡುತ್ತಿರುವ ಸಂಸ್ಥೆಯಲ್ಲಿ ಮೂರನೆ ಎರಡು ಭಾಗದಷ್ಟು ಹೆಣ್ಣು ಮಕ್ಕಳು ಶಿಕ್ಷಣ ಪಡೆಯುತ್ತಿರುವುದು ಶ್ಲಾಘನೀಯ ಎಂದರು. 

ಸುಸ್ಥಿರಾಭಿವೃದ್ಧಿ ಕಾಪಾಡುವುದು ಬಹಳ ಮುಖ್ಯವಾಗಿದೆ. ಅಂದರೆ “ಪ್ರಕೃತಿ ರಕ್ಷತಿ ರಕ್ಷಿತಃ” ಅರ್ಥ ಪ್ರಕೃತಿಯನ್ನು ಯಾರು ರಕ್ಷಿಸುತ್ತಾರೋ, ಅವರನ್ನು ಪ್ರಕೃತಿ ರಕ್ಷಿಸುತ್ತದೆ. ಜಪಾನ್, ಯುರೋಪ್ ದೇಶಗಳಲ್ಲಿ ಜನಸಂಖ್ಯೆ ಕಡಿಮೆಯಾಗಿದ್ದು, ಚೀನಾ ಜನಸಂಖ್ಯೆ ಸುಸ್ಥಿರವಾಗಿದೆ. ಈಗಾಗಾಲೇ ಭಾರತ 1.5 ಬಿಲಿಯನ್ ಜನಸಂಖ್ಯೆ ಹೊಂದಿದ್ದು, 2050ರ ವೇಳೆಗೆ 300 ಮಿಲಿಯನ್‌ಗೆ ಏರಲಿದೆ. ಆದ ಕಾರಣ ಮುಂದಿನ ಪೀಳಿಗೆಯ ಭವಿಷ್ಯಕ್ಕೆ ಪರಿಸರವನ್ನು ಕಾಪಾಡುವುದು ಮತ್ತು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಇದೇ ವೇಳೆ ಪಾವಗಡದ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಸಂಸ್ಥಾಪಕರಾದ ಶ್ರೀ ಸ್ವಾಮಿ ಜಪಾನಂದಜಿ ಮಹಾರಾಜ್ ಹಾಗೂ ವಿಜ್ಞಾನಿ/ಭಾರತೀಯ ವಿಜ್ಞಾನ ಸಂಸ್ಥೆಯ ಏರೋಸ್ಪೇಸ್ ಇಂಜಿನಿಯರಿಂಗ್‌ನ ವಿಶ್ರಾಂತ ಪ್ರಾಧ್ಯಾಪಕರಾದ ಡಾ.ಕೆ.ಪಿ.ಜೆ.ರೆಡ್ಡಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.

ಗೌರವ ಡಾಕ್ಟರೇಟ್ ಸ್ವೀಕರಿಸಿ ಮಾತನಾಡಿದ, ವಿಜ್ಞಾನಿ/ಭಾರತೀಯ ವಿಜ್ಞಾನ ಸಂಸ್ಥೆಯ ಏರೋಸ್ಪೇಸ್ ಇಂಜಿನಿಯರಿAಗ್‌ನ ವಿಶ್ರಾಂತ ಪ್ರಾಧ್ಯಾಪಕರಾದ ಕೆ. ಪಿ. ಜೆ ರೆಡ್ಡಿ ಅವರು, ಜಾಗತಿಕವಾಗಿ ಗುರುತಿಸಿಕೊಂಡಿರುವ ಸಾಹೇ ವಿಶ್ವವಿದ್ಯಾಲಯದಿಂದ ಗೌರವ ಲಭಿಸಿರುವುದು ಸಂತಸದ ವಿಷಯ. ಇದಕ್ಕೆ ಸಂಸ್ಥೆಗೆ ಅಭಾರಿಯಾಗಿದ್ದೇನೆ ಎಂದರು. ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತ ದೇಶದಲ್ಲಿ ಹೆಚ್ಚು ಪಾಲು ಹೆಣ್ಣು ಮಕ್ಕಳಿದ್ದಾರೆ. ಅಂತಹ ಹೆಣ್ಣು ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡುವುದು ನಮ್ಮ ಮುಂದಿರುವ ಸವಾಲಾಗಿದೆ. ಗ್ರಾಮೀಣ ಭಾಗದ ಹೆಣ್ಣು ಮಕ್ಕಳಿಎ ಸೂಕ್ತ ಶಿಕ್ಷಣ ನೀಡುವ ನಿಟ್ಟಿನಲ್ಲಿ ನೂತನವಾಗಿ ಗ್ರಾಮೀಣ ಭಾಗದಲ್ಲೇ ವಿಶ್ವವಿದ್ಯಾಲಯ ತೆರೆಯುವ ಆಶಯವನ್ನು ಹೊಂದಿದ್ದೇವೆ, ಮುಂದಿನ ದಿನಗಳಲ್ಲಿ ಅದು ಸಾಧ್ಯವಾಗಲಿದೆ ಎಂದರು.

1002394106

ಮಾಜಿ ಕೇಂದ್ರ ಸಚಿವರು ಹಾಗೂ ಸಂಸದರಾದ ಜಯರಾಮ್ ರಮೇಶ್ ಅವರು ಪದವಿ ಪ್ರಮಾಣ ಪತ್ರಗಳನ್ನು ವಿತರಿಸಿದರು. ಜೊತೆಗ ಉನ್ನತ ಶ್ರೇಣಿ ಪಡೆದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು.  

ಘಟಿಕೋತ್ಸವದಲ್ಲಿ ಗೃಹ ಸಚಿವರು ಹಾಗೂ ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಸವ್ಯಸಾಚಿ ಡಾ.ಜಿ.ಪರಮೇಶ್ವರ ಅವರು ಸಾಹೇ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವದಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕೋರ್ಸ್ಗಳ ಒಟ್ಟು 1086 ಮಂದಿಗೆ ಪದವಿ ಪ್ರದಾನ ಮಾಡಿದರು.. 14 ಮಂದಿಗೆ ಪಿಎಚ್.ಡಿ ಪದವಿ, ವೈದ್ಯಕೀಯದಲ್ಲಿ 03, ದಂತ ವೈದ್ಯಕೀಯದಲಿ02, ಮತ್ತು ಇಂಜಿನಿಯರಿಂಗ್ ನಲ್ಲಿ 8 ಮಂದಿ ಸೇರಿದಂತೆ ಒಟ್ಟು 15 ಮಂದಿಗೆ ಚಿನ್ನದ ಪದಕ ಮತ್ತು ಪದವಿಗಳನ್ನು ಪ್ರದಾನ ಮಾಡಿದರು. ಇದೇ ವೇಳೆ ಇಬ್ಬರಿಗೆ ಫೆಲೋಶಿಪ್ ನೀಡಿದ್ದು ಈ ಬಾರಿ ಘಟಿಕೋತ್ಸವದ ವಿಶೇ಼ಷವಾಗಿತ್ತು.

1002394108

ಸಾಹೇ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ಕೆ ಬಿ ಲಿಂಗೇಗೌಡ, ಅವರು ಸಾಹೇ ವಿಶ್ವವಿದ್ಯಾನಿಲಯ ಪ್ರಗತಿನೋಟದ ವರದಿಯನ್ನು ಮಂಡಿಸಿದರು. 

ಈ ಬಾರಿಯ ಹೊರಾಂಗಣ ವೇದಿಕೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸುಮಾರು 5ಸಾವಿರ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಆಸನ ಮತ್ತು ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. 

ಕಾರ್ಯಕ್ರಮದಲ್ಲಿ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಟ್ರಸ್ಟಿಗಳಾದ ಶ್ರೀಮತಿ ಕನ್ನಿಕಾ ಪರಮೇಶ್ವರಿ ಮತ್ತು ಡಾ.ಜಿ.ಎಸ್.ಆನಂದ್ ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಿದ್ದರು. ಸಾಹೇ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ.ಕೆ.ಬಿ.ಲಿಂಗೇಗೌಡ, ಕುಲಸಚಿವರಾದ ಡಾ. ಅಶೋಕ್ ಮೆಹತಾ, ಸಾಹೇ ವಿಶ್ವವಿದ್ಯಾನಿಲಯದ ಪರೀಕ್ಷಾಂಗ ವಿಭಾಗದ ನಿಯಂತ್ರಕರಾದ ಡಾ.ಗುರುಶಂಕರ್ ಸಿ, ಡೆಂಟಲ್ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಪ್ರವೀಣ್ ಕುಡುವ, ವೈದ್ಯಕೀಯ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಪ್ರಭಾಕರ್ ಜಿ ಎನ್, ಉಪ ಕುಲಸಚಿವರು ಆದ ಡಾ.ಸುದೀಪ್ ಕುಮಾರ್, ಟಿ.ಬೇಗೂರಿನ ಶ್ರೀ ಸಿದ್ಧಾರ್ಥ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದ ಪ್ರಾಂಶುಪಾಲರಾದ ಡಾ ದಿವಾಕರ್, ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ.ಎಸ್. ರವಿಪ್ರಕಾಶ, ಸಾಹೇ ವಿವಿಯ ಕುಲಾಧಿಪತಿಗಳ ಸಲಹೆಗಾರರಾದ ಡಾ.ವಿವೇಕ್ ವೀರಯ್ಯ, ಡೀನ್‌ಗಳು, ಶೈಕ್ಷಣಿಕ ಮಂಡಳಿಯ ಸಮಿತಿ ಸದ್ಯಸರು, ಸೇರಿದಂತೆ ಎಲ್ಲಾ ವಿಭಾಗಗಳ ಮುಖ್ಯಸ್ಥರುಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮೋಹನ ಲಿಂಬಿಕಾಯಿ ಬೆಂಬಲಿಸಲು ಸಿಪಿಐ(ಎಂ) ಕರೆ

"ಇದೇ ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ...

ರಾಯಚೂರು | ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಸೇವೆ ಅಮೂಲ್ಯ: ಜಿಲ್ಲಾಧಿಕಾರಿ ಪೂವಿತಾ ಎಸ್

ಪೊಲೀಸರು ಕೇವಲ ಕಾನೂನು ಜಾರಿಗೊಳಿಸುವ ಸಿಬ್ಬಂದಿಯಲ್ಲ ಸಂಕಷ್ಟದ ಸಂದರ್ಭಗಳಲ್ಲಿ ಸಾರ್ವಜನಿಕರ ನೆರವಿಗೆ...

ರಾಜ್ಯದಲ್ಲಿ ಮಧ್ಯಾಹ್ನವೇ ಮಳೆ ಅಬ್ಬರ; 13 ಜಿಲ್ಲೆಗಳಲ್ಲಿ ಇನ್ನೂ 4 ದಿನ ಭರ್ಜರಿ ಮಳೆ: ಹವಾಮಾನ ಇಲಾಖೆ

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಿಂಗಾರು ಮಳೆ...

‘ಟಿಪ್ಪು ನಿಜ ಕನಸು’ಗಳಿಂದ ‘ಗಾಂಧೀ ಹತ್ಯೆಯ ಸತ್ಯ’ದವರೆಗೆ: ಇತಿಹಾಸ ತಿರುಚುವಿಕೆಯ ಸುತ್ತ ಮತ್ತೆ ವಿವಾದ

ನಾಟಕಕಾರ, ಬರಹಗಾರ ಅಡ್ಡಂಡ ಕಾರ್ಯಪ್ಪ ಹಿಂದಿನಿಂದಲೂ ಒಂದಲ್ಲೊಂದು ಕಾರಣಕ್ಕೆ ಸಾರ್ವಜನಿಕ ಚರ್ಚೆಯ...