ತುಮಕೂರು | ಸಂದರ್ಶನದ ಪ್ರಶ್ನೆಗಳು ನೈಜ ಸುದ್ದಿಯನ್ನು ಹೊರ ತರುವಂತಿರಬೇಕು : ಮಾರುತಿ ಪಾವಗಡ

Date:

ಸಂದರ್ಶನದಲ್ಲಿ ಪ್ರಶ್ನೆಗಳ ಮಹತ್ವ ಬಹಳ ಮುಖ್ಯ. ಸಂದರ್ಶನ ಮಾಡುವ ಸಂದರ್ಭದಲ್ಲಿ ಸಾಮಾನ್ಯ ಪ್ರಶ್ನೆಗಳನ್ನು ಕೇಳುವ ಬದಲು ನಮಗೆ ಯಾವ ಸುದ್ದಿ ಅವಶ್ಯಕತೆ ಇದೆ ಅದರ ಅನುಕೂಲವಾಗಿ ಪ್ರಶ್ನೆಗಳನ್ನು ಕೇಳುವುದು ಅಗತ್ಯ ಎಂದು  ಖಾಸಗಿ ಸುದ್ದಿ ವಾಹಿನಿಯ ಪೊಲಿಟಿಕಲ್ ಬ್ಯುರೋ ಮುಖ್ಯಸ್ಥ ಮಾರುತಿ ಪಾವಗಡ ತಿಳಿಸಿದರು. 

- Advertisement -

ತುಮಕೂರು ನಗರದ ಶ್ರೀ ಸಿದ್ಧಾರ್ಥ  ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಮೂರು ದಿನಗಳ ಆಂಕರಿಂಗ್ ಸುದ್ದಿ ನಿರೂಪಣಾ  ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಇವರು,  ಸಂದರ್ಶನ ಮತ್ತು ಪ್ಯಾನೆಲ್ ಚರ್ಚೆ ವಿಷಯದ ಕುರಿತು ಉಪನ್ಯಾಸ ನೀಡಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಸಂದರ್ಶನಕ್ಕೂ ಮೊದಲು ಸಂದರ್ಶನದ ವಿಷಯದ ಬಗ್ಗೆ ಅಧ್ಯಯನ ನಡೆಸುವುದು ಮತ್ತು ಪೂರ್ವಸಿದ್ಧತೆ  ಅವಶ್ಯಕವಾಗಿರುತ್ತದೆ. ಸಂದರ್ಶನದಲ್ಲಿ ಸಂದರ್ಶನಕ್ಕೆ ಒಳಪಡಿಸುತ್ತಿರುವಂತಹ ವ್ಯಕ್ತಿಯ ಹಿನ್ನೆಲೆ, ಸಾಧನೆ ಬಹಳ ಮುಖ್ಯವಾಗಿರುತ್ತದೆ ಹಾಗೂ ಸಂದರ್ಶನ ನಡೆಸುವ ನಿರೂಪಕನಿಗೆ ವಿಷಯದ ಕುರಿತು ಸಂಪೂರ್ಣ ಮಾಹಿತಿ ಜ್ಞಾನ ಅತ್ಯಗತ್ಯ ಎಂದು ಹೇಳಿದರು.

1002066910

 ಇನ್ನು ಪ್ಯಾನಲ್ ಚರ್ಚೆ ಎಂಬುದು ಪರ ವಿರೋಧಗಳನ್ನ ಒಳಗೊಂಡಿರುವಂಥದ್ದು, ಪ್ಯಾನೆಲ್ ಚರ್ಚೆಯನ್ನು  ನಿರ್ವಹಿಸುವಂತಹ ನಿರೂಪಕನಿಗೆ  ತಾಳ್ಮೆ ಮುಖ್ಯ. ಒತ್ತಡವನ್ನು ನಿರ್ವಹಿಸುವಂತಹ ಶಕ್ತಿ ಅವನಲ್ಲಿರಬೇಕು ಎಂದು ತಿಳಿಸಿದರು. 

 ಪತ್ರಿಕೋದ್ಯಮ ಕ್ಷೇತ್ರದಲ್ಲಿ ನೂರಾರು ಅವಕಾಶಗಳಿವೆ. ಅವಕಾಶಗಳಿಗೆ ಒಗ್ಗಿಕೊಳ್ಳುವಂತಹ ಮನಸ್ಥಿತಿ ನಿಮ್ಮಲ್ಲಿರಬೇಕು. ಯಾವುದೇ ಕೆಲಸವನ್ನು ಮಾಡುವೆ ಎಂಬ ದೃಢ ನಂಬಿಕೆ ಇರಬೇಕು. ಆಗ ಮಾತ್ರ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಉತ್ತಮ ಪತ್ರಕರ್ತರಾಗಲು ಸಾಧ್ಯ.  ಪತ್ರಿಕೋದ್ಯಮದಲ್ಲಿರುವಂತಹವರು ಯಾವುದೇ ಸುದ್ದಿ ಬಂದರೆ ಅದನ್ನ ಪರಿಶೀಲಿಸುವುದರಿಂದ ತಪ್ಪಾದ ಸುದ್ದಿ ಹರಡುವಿಕೆಗೆ ಕಡಿವಾಣ ಹಾಕಿದಂತಾಗುತ್ತದೆ. ಈ ರೀತಿಯಾದಂತಹ ಜವಾಬ್ದಾರಿಯುತ ಕೆಲಸವನ್ನು ಪತ್ರಿಕೋದ್ಯಮದ ವಿದ್ಯಾರ್ಥಿಗಳು ನಿಮ್ಮ ವೃತ್ತಿ ಜೀವನದಲ್ಲಿ ಪಾಲಿಸಬೇಕೆಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.  

  ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನು ಆಡಿದಂತಹ ಶ್ರೀ ಸಿದ್ಧಾರ್ಥ ಮಧ್ಯಮ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾಕ್ಟರ್ ಬಿ ಟಿ ಮುದ್ದೇಶ್ ಮಾತನಾಡಿ ಮಾಧ್ಯಮ ಕ್ಷೇತ್ರದಲ್ಲಿ ಅಗಾಧ ಬದಲಾವಣೆ ಆಗಿದೆ. ಆ ಬದಲಾವಣೆಗೆ ತಕ್ಕಂತೆ ಹೊಸ ಹೊಸ ಕಲಿಕೆ ಮತ್ತು ಕೌಶಲ್ಯಗಳನ್ನು ಶ್ರದ್ದೆ, ಬದ್ಧತೆಯಿಂದ ಕಲಿಕಾ ಹಂತದಲ್ಲೇ ಕಲಿತರೆ ಬದಲಾವಣೆಗೆ ಒಗ್ಗಿಕೊಳ್ಳಲು ಸಾಧ್ಯ ಎಂದು ಹೇಳಿದರು

  ಕಾರ್ಯಗಾರದಲ್ಲಿ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ಅಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಂತಹ ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...