ತುಮಕೂರು | ಸಮಾಜಕ್ಕೆ ಉತ್ತಮ ಪ್ರಜೆಗಳ ನೀಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ: ಸಚಿವ ಕೆ ಎನ್ ರಾಜಣ್ಣ

Date:

Advertisements

ವಿದ್ಯಾದಾನದ ಸಂದರ್ಭದಲ್ಲಿ ಶಿಕ್ಷಕರು ಯಾವುದೇ ಲೋಪ ಎಸಗಬಾರದು. ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ನೀಡುವ ಶಕ್ತಿ ನಿಮ್ಮಲ್ಲಿದೆ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿದರು.

ತುಮಕೂರು ಜಿಲ್ಲೆ ಮಧುಗಿರಿ ಪಟ್ಟಣದ ಎಂಜಿಎಂ ಬಾಲಿಕಾ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ದಾಖಲಿಸಿದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಸೇರಿದಂತೆ ಒಟ್ಟು 82 ಶಾಲೆಗಳ ಮುಖ್ಯ ಶಿಕ್ಷಕರಿಗೆ ಸನ್ಮಾನ ಮತ್ತು ₹25,000 ನಗದಿನ ಚೆಕ್ ವಿತರಣೆ ಹಾಗೂ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

“ಶಿಕ್ಷಕರಿಗೆ ಹೆಚ್ಚಿನ ಜವಾಬ್ದಾರಿ ಇದೆ. ವಿದ್ಯಾರ್ಥಿಗಳನ್ನು ತಿದ್ದುವುದು, ಹಿಂದಿನ ತರಗತಿಗಳ ವಿಷಯಗಳ ಬಗ್ಗೆ ಚರ್ಚೆ ಮತ್ತು ಮೆಲುಕು ಹಾಕುವಂತೆ ಮಾಡಿ ಏಕಾಗ್ರತೆಗಳನ್ನು ರೂಢಿಸುವುದರ ಜತೆಯಲ್ಲಿ ಹೆಚ್ಚು ಚರ್ಚಾ ಸ್ಪರ್ಧೆಗಳನ್ನು ಆಯೋಜಿಸುವುದರಿಂದ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ನೀರೀಕ್ಷಿಸಬಹುದಾಗಿದೆ” ಎಂದು ಹೇಳಿದರು.

Advertisements

“ಶಾಲೆ ಬಿಟ್ಟ ಮಕ್ಕಳ ಬಗ್ಗೆ ವಿಶೇಷ ಗಮನಹರಿಸಿ, ಅತಂಹ ಮಕ್ಕಳನ್ನು ಪತ್ತೆಹಚ್ಚಿ ವಿದ್ಯಾಭ್ಯಾಸಕ್ಕೆ ಅವಕಾಶ ಮಾಡಿಕೊಡಬೇಕು. ಪ್ರಸ್ತುತ ಕಾಲದಲ್ಲಿ ಬೇಸಾಯ ಲಾಭಾದಾಯಕವಾಗಿಲ್ಲ. ಆದರೆ, ವಿದ್ಯೆ ಲಾಭಾದಾಯಕದತ್ತಾ ಕರೆದುಕೊಂಡು ಹೋಗುವಂತಹ ಶಕ್ತಿಯನ್ನು ಹೊಂದಿದೆ. ಗುರಿಯಿಂದ ಮಾತ್ರ ಸಾಧನೆಗಳನ್ನು ಮಾಡಲು ಸಾಧ್ಯ. ವಿದ್ಯೆಯನ್ನು ಆಧರಿಸಿ ಜೀವನ ನಡೆಸಲು ಸಾಧ್ಯವಿದ್ದು, ವಿದ್ಯಾರ್ಥಿಗಳು ಸರ್ಕಾರದ ಸವಲತ್ತುಗಳನ್ನು ಬಳಸಿಕೊಳ್ಳಬೇಕು” ಎಂದು ಕರೆ ನೀಡಿದರು.

“ನಾನು ವಿದ್ಯೆಗೆ ಹೆಚ್ಚು ಮಹತ್ವ ನೀಡುತ್ತೇನೆ. ನನ್ನ ತಂದೆ – ತಾಯಿ ಇಬ್ಬರೂ ಅನಕ್ಷರಸ್ಥರಾಗಿದ್ದರು. ಅವರ ಸಹಾಯ ನನ್ನನ್ನು ವಿದ್ಯಾವಂತನನ್ನಾಗಿ ಮಾಡಿದ್ದು, ಇಂದು ನಾನು ನಿಮ್ಮೆಲ್ಲರ ಮುಂದೆ ಹಾಗೂ ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಲು ಸಾಧ್ಯವಾಯಿತು” ಎಂದು ನೆನಪಿಸಿಕೊಂಡರು.

“ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಅವಧಿಯಲ್ಲಿ ಶೂ ಭಾಗ್ಯ ಘೋಷಣೆ ಮಾಡಿ ಶಿಕ್ಷಣಕ್ಕೆ ಸಹಕಾರ ನೀಡಿದ್ದರು. ನಾನು ಶಾಸಕನಾಗಿದ್ದಾಗ ಕ್ಷೇತ್ರದ 3,250 ಮಂದಿ ವಿದ್ಯಾರ್ಥಿಗಳ ಮನೆಗೆ ವಿದ್ಯುತ್ ವ್ಯವಸ್ಥೆ ಕಲ್ಪಿಸಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲೆಯ ಸಾವಿರಾರು ಮಕ್ಕಳಿಗೆ ನೋಟ್ ಬುಕ್‌ಗಳನ್ನು ವಿತರಿಸಿದ್ದು ಹೆಮ್ಮೆಯ ವಿಷಯ” ಎಂದು ಸಚಿವ ಕೆ ಎನ್ ರಾಜಣ್ಣ ತಿಳಿಸಿದರು.

ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಎನ್ ಮಹಾಲಿಂಗೇಶ್ ಮಾತನಾಡಿ, “ಪ್ರಾಥಮಿಕ ಹಂತದಲ್ಲಿ ವಿದ್ಯಾರ್ಥಿಗಳಿಗೆ ವೈಜ್ಞಾನಿಕ, ವೈಚಾರಿಕ ಮನೋಭಾವಗಳನ್ನು ಬೆಳೆಸಬೇಕು. ಮೌಢ್ಯತೆಯ ಬಗ್ಗೆ ಅರಿವು ಮೂಡಿಸುವಂತಾಗಬೇಕು. ಎಲ್ಲ ಪದವಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಗೆ ಸರ್ಕಾರ ಗಮನಹರಿಸಬೇಕು. ಪದವಿ ಕಾಲೇಜುಗಳಲ್ಲಿನ ಗ್ರಂಥಾಲಯಗಳಲ್ಲಿ ಕುವೆಂಪು ಮತ್ತು ಪೂರ್ಣಚಂದ್ರ ತೇಜಸ್ವಿಯವರ ಪುಸ್ತಕಗಳು ದೊರೆಯುವಂತಾಗಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಸಂಸದ ಪ್ರತಾತ್‌ ಸಿಂಹ ವಿರುದ್ಧ ಅವಹೇಳನಕಾರಿ ಪೋಸ್ಟ್; ಪೊಲೀಸ್ ಕಾನ್‌ಸ್ಟೇಬಲ್‌ ಅಮಾನತು

ಡಿಡಿಪಿಐ ಎಂ ಆರ್ ಮಂಜುನಾಥ್, ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ  ವೆಂಕಟರಂಗಾರೆಡ್ಡಿ, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಸಂಜಯ್, ಇಒ ಶಾಂತಲಾ, ವಿಷಯ ಪರಿವೀಕ್ಷ ಮೋಹನ್, ಎಪಿಸಿ ಮಾರುತಿ, ಡಿವೈಪಿಸಿ ನರಸಿಂಹಮೂರ್ತಿ, ಡಯಟ್ ಪ್ರಾಂಶುಪಾಲ ಗಂಗಾಧರ್, ಮಧುಗಿರಿ ಬಿಇಒ ತಿಮ್ಮರಾಜು, ಸಿರಾ ಬಿಇಒ ಕೃಷ್ಣಪ್ಪ, ಕೊರಟಗೆರೆ ಬಿಇಒ ನಟರಾಜು , ಚಿತ್ತಯ್ಯ , ರಂಗಾಧಾಯ್ಯ, ಎಲ್ ಟಿ ದಾಸಣ್ಣ, ತೋಟದಪ್ಪ, ಕೆ ಟಿ ಸಿದ್ದೇಶ್ವರ್, ಕೆಪಿಸಿಸಿ ವಕ್ತಾರ ನಿಖಿತ್ ಮೌರ್ಯ, ಎನ್ ಗಂಗಣ್ಣ, ಎಂ ಎಸ್ ಶಂಕರನಾರಾಯಣ್, ಸಾಧಿಕ್  ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X