ತುಮಕೂರು | ಜೆಡಿಎಸ್ ಮುಳುಗುವ ಹಡಗಲ್ಲ : ನಿಖಿಲ್ ಕುಮಾರಸ್ವಾಮಿ

Date:

ರಾಜ್ಯದಲ್ಲಿ ವಿಳಂಬವಾಗಿರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಬಿಬಿಎಂಪಿ ಚುನಾವಣೆಯನ್ನು ನಡೆಸುವ ಸಂಬಂಧ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದರು.

- Advertisement -

ಜಿಲ್ಲೆಯಲ್ಲಿ ಜೆಡಿಎಸ್ ಸದಸ್ಯತ್ವ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮುನ್ನ ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಬಿಬಿಎಂಪಿ ಚುನಾವಣೆಯನ್ನು ಸರ್ಕಾರ ತಡೆ ಹಿಡಿದಿದೆ. ಈ ಚುನಾವಣೆಗಳನ್ನು ನಡೆಸಲು ಸರ್ಕಾರ ಮನಸ್ಸು ಮಾಡಬೇಕಿದೆ ಎಂದು ಅವರು ಹೇಳಿದರು.ಶೀಘ್ರವಾಗಿ ಈ ಚುನಾವಣೆಗಳನ್ನು ನಡೆಸಬೇಕು ಎಂಬುದು ನನ್ನ ಮತ್ತು ನಮ್ಮ ಪಕ್ಷದ ಆಗ್ರಹವಾಗಿದೆ ಎಂದು ತಿಳಿಸಿದರು.   

ಜೆಡಿಎಸ್ ಪಕ್ಷ ಮುಳುಗುತ್ತಿರುವ ಹಡಗಲ್ಲ. ಸದಾ ಕಾಲ ಜೆಡಿಎಸ್ ಪಕ್ಷದ ಪರವಾಗಿ ಮಾಜಿ ಪ್ರಧಾನಿ ದೇವೇಗೌಡರು, ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಹೋರಾಟ ನಡೆಸುತ್ತಾ ಕಾರ್ಯಕರ್ತರು ಹಾಗೂ ರಾಜ್ಯದ ಜನರ ಧ್ವನಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಜೆಡಿಎಸ್ ಪ್ರಾದೇಶಿಕ ಪಕ್ಷವಾಗಿದ್ದರೂ ಸಹ ಶೇ. 20 ರಷ್ಟು ಮತಗಳ ಷೇರನ್ನು ಹೆಚ್ಚಿಸಿಕೊಂಡಿದೆ. ಚುನಾವಣೆಯಲ್ಲಿ ಸೋಲು-ಗೆಲುವುದ ಸರ್ವೇ ಸಾಮಾನ್ಯ. ಇದನ್ನು ಸಮಚಿತ್ತವಾಗಿ ಸ್ವೀಕರಿಸುವ ಮನಸ್ಥಿತಿ ನಮ್ಮ ಪಕ್ಷದವರಿಗಿದೆ ಎಂದರು.

ರಾಜ್ಯದ ಸಮಗ್ರ ಅಭಿವೃದ್ಧಿ ದೃಷ್ಠಿಯಿಂದ ಜೆಡಿಎಸ್-ಬಿಜೆಪಿ ಪಕ್ಷಗಳು ಹೊಂದಾಣಿಕೆ ಮಾಡಿಕೊಂಡಿವೆ. ರಾಜ್ಯದ ಹಿತಕ್ಕಾಗಿ ಈ ಹೊಂದಾಣಿಕೆ ಮುಂದುವರೆಯಲಿದೆ ಎಂದು ಅವರು ಹೇಳಿದರು. 

ನವೆಂಬರ್-ಡಿಸೆಂಬರ್‌ನಲ್ಲಿ ನಡೆಯುತ್ತೆ ಎಂದು ಹೇಳಲಾಗುತ್ತಿರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಗೂ ಹೊಂದಾಣಿಕೆ ಮುಂದುವರೆಯುತ್ತಾ ಎಂಬ ಪ್ರಶ್ನೆಗೆ ನವೆಂಬರ್ ನಂತರ ಏನು ಬೆಳವಣಿಗೆ ಆಗತ್ತದೆ ಎಂಬುದನ್ನು ನೋಡೋಣ ಎಂದು ಚುಟುಕಾಗಿ ಉತ್ತರಿಸಿದರು.

ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ವಿಚಾರದಲ್ಲಿ ರಾಜ್ಯ ಸರ್ಕಾರ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ಹೇಮಾವತಿ ಜಲಾಶಯದಿಂದ ಮಂಡ್ಯ, ರಾಮನಗರ, ಹಾಸನ, ತುಮಕೂರು ಈ ಎಲ್ಲ ಜಿಲ್ಲೆಗಳ ರೈತರು ನೀರನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಜಲಸಂಪನ್ಮೂಲ ಸಚಿವರಾಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇದುವರೆಗೂ ರೈತರ ಸಭೆ ಕರೆದು ಅವರ ಸಮಸ್ಯೆ ಆಲಿಸಿ ಬಗೆಹರಿಸುವ ಕೆಲಸ ಮಾಡಿಲ್ಲ ಎಂದು ದೂರಿದರು.

ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಯೋಜನೆಗೆ ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಅನುಮೋದನೆ ನೀಡಲಾಗಿದೆ ಎಂಬ ಪತ್ರಕರ್ತರ ಪ್ರಶ್ನೆಗೆ, ಕುಮಾರಣ್ಣನವರ ಕಾಲಘಟ್ಟದಲ್ಲಿ ಈ ರೀತಿ ಘಟನೆ ನಡೆದಿದ್ದರೆ ಅವರು ರೈತರನ್ನು ಕೂರಿಸಿ ಸಮಸ್ಯೆ ಬಗೆಹರಿಸುತ್ತಿದ್ದರು. ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರು ಮತ್ತು ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ ಎಂದು ಆರೋಪಿಸಿದರು.

ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನಿನ್ನೆ ಜೆ.ಪಿ. ಭವನದಲ್ಲಿ ಅಧಿಕೃತವಾಗಿ ರಾಜ್ಯ ಪ್ರವಾಸಕ್ಕೆ ಚಾಲನೆ ಕೊಟ್ಟಿದ್ದಾರೆ. ಹಾಗಾಗಿ ಮುಂದಿನ 60 ದಿನಗಳ ಕಾಲ ರಾಜ್ಯಾದ್ಯಂತ ಪ್ರವಾಸ ನಡೆಸಿ ಪಕ್ಷದ ಸದಸ್ಯತ್ವ ನೋಂದಣಿ ಕಾರ್ಯ ನಡೆಸಲಾಗುವುದು ಎಂದರು. 

ಇದೇ ಸಂದರ್ಭದಲ್ಲಿ ಜೆಡಿಎಲ್‌ಪಿ ನಾಯಕ ಸಿ.ಬಿ. ಸುರೇಶ್‌ಬಾಬು, ಮಾಜಿ ಶಾಸಕ ಹೆಚ್. ನಿಂಗಪ್ಪ, ಜೆಡಿಎಸ್ ಜಿಲ್ಲಾಧ್ಯಕ್ಷ ಟಿ.ಆರ್. ಆಂಜಿನಪ್ಪ, ಟಿ.ಆರ್. ನಾಗರಾಜು, ಶಾಂತಕುಮಾರ್, ಮಾಜಿ ಪಾಲಿಕೆ ಸದಸ್ಯರಾದ ಧರಣೇಂದ್ರಕುಮಾರ್, ನರಸಿಂಹಮೂರ್ತಿ, ಶ್ರೀನಿವಾಸ್, ಕುಂಭಣ್ಣ, ದಾಂಡೇಲಿ ಗಂಗಣ್ಣ, ಗಂಗಹನುಮಯ್ಯ, ಲೀಲಾವತಿ, ಮೆಡಿಕಲ್ ಮಧು, ಸೋಲಾರ್ ಕೃಷ್ಣಮೂರ್ತಿ, ದರ್ಶನ್ ಯಾದವ್, ಸುಮ ಜಗನ್ನಾಥ್, ಲೀಲಾವತಿ, ಕುಸುಮ, ತಾಹೇರಾ ಬಾನು ಮತ್ತಿತರರು ಉಪಸ್ಥಿತರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...