ತುಮಕೂರು | ಪತ್ರಕರ್ತರಿಗೆ ಪೂರ್ವಗ್ರಹ ಇರಬಾರದು : ಕೆ.ವಿ.ಪ್ರಭಾಕರ್

Date:

Advertisements

ಮಗು ಮಾತಾಡುವ ಮೊದಲು ನೋಡಿ ಕಲಿಯುತ್ತದೆ, ನೋಟದ ಮೂಲಕವೇ ತನ್ನ ಸುತ್ತಲನ್ನು ಗ್ರಹಿಸುತ್ತದೆ. ಸಮಾಜದ  ಬಗ್ಗೆ ಸ್ಪಷ್ಟ ನೋಟ-ಗ್ರಹಿಕೆ ಇದ್ದಾಗ ಪರಿಣಾಮಕಾರಿ ಪತ್ರಕರ್ತ  ಹುಟ್ಟುತ್ತಾನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.

ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ  ಸಂವಹನ ವಿಭಾಗ ಹಾಗೂ ವಿವಿ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಜಂಟಿಯಾಗಿ ಆಯೋಜಿಸಿದ್ದ ಮಾಧ್ಯಮ ಹಬ್ಬ ‘ಇಂಪ್ರೆಷನ್ -2025’ ವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು.

ಹೊಸ ಪತ್ರಕರ್ತರಲ್ಲಿ ಅಧ್ಯಯನಶೀಲತೆ ಮತ್ತು ಗ್ರಹಿಕೆಯ  ಕೊರತೆ ಇರುವುದನ್ನು ನಾನು ಗಮನಿಸಿದ್ದೇನೆ.  ಪತ್ರಕರ್ತರಾಗುವವರಿಗೆ ಮಗುವಿನ ಮನಸ್ಸು ಮುಖ್ಯ.  ಪ್ರತಿಯೊಂದು ಮಗುವೂ ಮಾತಾಡುವ ಮೊದಲು ನೋಟದ ಮೂಲಕವೇ ತಿಳಿಯುತ್ತದೆ, ಅರಿಯುತ್ತದೆ, ಗ್ರಹಿಸುತ್ತದೆ. ಹೀಗಾಗಿ  ನೋಟದ ಮೂಲಕ ಕಲಿಯುವುದು ಸಹಜವಾದ, ನೈಸರ್ಗಿಕವಾದ ಪ್ರಕ್ರಿಯೆ ಎಂದರು.

Advertisements

ಪತ್ರಕರ್ತರಾಗುವವರು ಪೂರ್ವಗ್ರಹ ಮುಕ್ತ ಮಗುವಿನ ಮನಸ್ಸಿನಿಂದ ಸಾಮಾಜಿಕ ವ್ಯವಸ್ಥೆಯನ್ನು, ಸಾಮಾಜಿಕ ತಾರತಮ್ಯಗಳನ್ನು ಇರುವುದನ್ನು ಇರುವ ಹಾಗೆ ಗಮನಿಸಬೇಕು.  ಹೀಗಾದಾಗ ಮಾತ್ರ ಸಾಮಾಜಿಕ ಸಮಸ್ಯೆಗಳು ಮತ್ತು ಈ ಸಮಸ್ಯೆಗಳಿಗೆ ಕಾರಣವಾದ ಸಂಗತಿಗಳ ಬಗ್ಗೆ ಸ್ಪಷ್ಟ ಗ್ರಹಿಕೆ ಬರುತ್ತದೆ. ಈ  ಸ್ಪಷ್ಟತೆಯೇ ಪರಿಣಾಮಕಾರಿ ಪತ್ರಕರ್ತನನ್ನು ರೂಪಿಸುತ್ತದೆ.  ಇದರಿಂದಾಗಿ ಅಭಿವೃದ್ಧಿ ಪತ್ರಿಕೋದ್ಯಮಕ್ಕೆ ಹೆಚ್ಚು ಅನುಕೂಲ ಮತ್ತು ಮಹತ್ವ ಸಿಗುತ್ತದೆ ಎಂದರು.

ಇತ್ತೀಚಿನ ದಶಕಗಳಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ತಂತ್ರಜ್ಞಾನದ  ಕಾರಣಕ್ಕೆ ಕ್ರಾಂತಿಕಾರಿ ಬದಲಾವಣೆಗಳು ಸಂಭವಿಸುತ್ತಿವೆ. ಮುದ್ರಣ  ಮಾಧ್ಯಮದಿಂದ ಡಿಜಿಟಲ್ ಮಾಧ್ಯಮವನ್ನೂ ದಾಟಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್  ಕಡೆಗೆ ಧಾವಿಸಿ ಬಂದಿದ್ದೇವೆ. ಈ ಬದಲಾವಣೆಯು ಮಾಹಿತಿ ಹರಿವಿನ ವೇಗವನ್ನು 

ಹೆಚ್ಚಿಸಿದೆ, ಆದರೆ ಅದೇ ವೇಳೆ ಸುಳ್ಳು ಸುದ್ದಿ, ದ್ವೇಷ ಭಾಷೆ ಇತ್ಯಾದಿಗಳ  ಹೊಸ ಹೊಸ ಸವಾಲುಗಳನ್ನೂ, ಅಪಾಯಗಳನ್ನೂ ಮನುಷ್ಯ  ಜಗತ್ತಿನ ಮುಂದಿಟ್ಟಿದೆ. ಇಂತಹ ಸಂದರ್ಭದಲ್ಲಿ ಪತ್ರಿಕೋದ್ಯಮ ಮತ್ತು ಮಾಧ್ಯಮ ಶಿಕ್ಷಣವು ನೈತಿಕತೆ ಮತ್ತು ಜವಾಬ್ದಾರಿಯನ್ನೂ  ಜೊತೆಗೆ ಕಲಿಸಬೇಕಾಗಿದೆ ಎಂದರು.

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಮಾತನಾಡಿ ಪತ್ರಕರ್ತರು ಪ್ರಶ್ನೆ ಕೇಳುವುದನ್ನು ಬಿಡಬಾರದು ಆದರೆ,  ಪ್ರಶ್ನೆ ಮಾಡುವ ಮೊದಲು ಆ ವಿಷಯದ ಬಗ್ಗೆ ಅಧ್ಯಯನ  ನಡೆಸಿರಬೇಕು. ಊಹಾ ಪತ್ರಿಕೋದ್ಯಮಕ್ಕೆ ಜೋತು ಬಿದ್ದರೆ  ಅಧ್ಯಯನಶೀಲತೆ ಬೆಳೆಯುವುದಿಲ್ಲ ಎಂದರು.

 ತುಮಕೂರು ವಿವಿ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಮಾತನಾಡಿ ಮಾಧ್ಯಮ ಶಿಕ್ಷಣವನ್ನು ಜನಪ್ರಿಯಗೊಳಿಸಲು ಮತ್ತು ಮಾಧ್ಯಮ ಅಧ್ಯಯನದತ್ತ ವಿದ್ಯಾರ್ಥಿಗಳನ್ನು ಸೆಳೆಯಲು ಕಾಲಕ್ಕೆ ತಕ್ಕಂತೆ ಪಠ್ಯಕ್ರಮದ ಬದಲಾವಣೆ. ಕೌಶಲಾಧಾರಿತ ಶಿಕ್ಷಣ ಹಾಗೂ ಮೂಲಭೂತ ಸೌಕರ್ಯವೃದ್ಧಿ ಸೇರಿದಂತೆ ಹಲವು ಕ್ರಮಗಳ ಅಗತ್ಯವಿದೆ ಎಂದರು.

‘ಪ್ರಜಾಪ್ರಗತಿ’ ಸಂಪಾದಕ ಎಸ್. ನಾಗಣ್ಣ ಮಾತನಾಡಿ, ಮಾಧ್ಯಮ ಹಬ್ಬವು  ಮಾಧ್ಯಮ ರಂಗದಲ್ಲಿ ಪ್ರಜ್ಞಾವಂತ ಯುವ ಪ್ರತಿಭೆಗಳ ಹುಟ್ಟಿಗೆ  ವೇದಿಕೆಯಾಗಲಿ ಎಂದು ಹಾರೈಸಿದರು.

ಹಾಲಪ್ಪ ಪ್ರತಿಷ್ಠಾನ ಮಧುಗಿರಿ ಬಂಗಾರದ ಪದಕ ವಿಜೇತ ಸ್ನಾತಕ ಪತ್ರಿಕೋದ್ಯಮ ವಿಭಾಗದ ಹಿರಿಯ ವಿದ್ಯಾರ್ಥಿಗಳನ್ನು ಮುರಳೀಧರ ಹಾಲಪ್ಪ ಗೌರವಿಸಿದರು. 

ಮಾಧ್ಯಮ ಅಕಾಡೆಮಿ ಕಾರ್ಯದರ್ಶಿ ಸಹನಾ ಎಂ, ಸಿಂಡಿಕೇಟ್ ಸದಸ್ಯ ಮನೋಜ್ ಹೆಚ್. ಆರ್., ಪರೀಕ್ಷಾಂಗ ಕುಲಸಚಿವ ಡಾ. ಸತೀಶ್‌ಗೌಡ ಎನ್., ವಿವಿ ಕಲಾ ಕಾಲೇಜಿನ ಪ್ರಾಂಶುಪಾಲರಾದ ಡಾ. ದಾಕ್ಷಾಯಿಣಿ ಜಿ., ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಸಿಬಂತಿ ಪದ್ಮನಾಬ ಕೆ.ವಿ. ಉಪಸ್ಥಿತರಿದ್ದರು. ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ದೆಗಳು ನಡೆದವು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X