ತುಮಕೂರು | ಡಿ.20ರಂದು ಕೆ ದೊರೈರಾಜ್ ಅವರ ‘ನಮ್ಮ ಹಟ್ಟಿ’ ಕೃತಿ ಬಿಡುಗಡೆ

Date:

ತಮ್ಮ ಜೀವನದುದ್ದಕ್ಕೂ ವ್ಯವಸ್ಥೆಯೊಂದಿಗೆ ಎಂದಿಗೂ ರಾಜಿಯಾಗದೇ, ಶೋಷಿತರ ಸಮಾನತೆಯ ಹಕ್ಕುಗಳಿಗೆ ಅತ್ಯಂತ ಪ್ರಾಮಾಣಿಕ ಧ್ವನಿಯಾದ ನಾಡಿನ ಸಾಕ್ಷಿಪ್ರಜ್ಞೆ ಪ್ರೊ. ಕೆ ದೊರೈರಾಜ್ ಅವರ ಆತ್ಮಕಥೆ ʼನಮ್ಮ ಹಟ್ಟಿʼ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮವನ್ನು ಡಿಸೆಂಬರ್‌ 20ರ ಬೆಳಿಗ್ಗೆ 10-30ಕ್ಕೆ ತುಮಕೂರು ನಗರದ ಅಮಾನಿಕೆರೆ ಸಮೀಪವಿರುವ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

- Advertisement -

ಕಾರ್ಯಕ್ರಮಕ್ಕೆ ನಾಡಿನ ಚಿಂತಕರು, ಪ್ರಜ್ಞಾವಂತರು, ಸಾಹಿತಿಗಳು, ಯುವಜನರು, ದಲಿತ-ರೈತ-ಕಾರ್ಮಿಕ-ಮಹಿಳಾ ಹೋರಾಟಗಾರರು ಹಾಗೂ ವಿದ್ಯಾರ್ಥಿ ಮಿತ್ರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಪ್ರತಿಪದ ಪ್ರಕಾಶನದಿಂದ ಜನಪರ ಚಿಂತಕ ಕೆ ದೊರೈರಾಜ್ ಅವರ ‘ನಮ್ಮ ಹಟ್ಟಿ’ ಒಂದು ಹಟ್ಟಿಯ ಆತ್ಮಕಥಾನಕ ಕೃತಿ ಬಿಡುಗಡೆ ಸಮಾರಂಭ ನಡೆಯುತ್ತಿದ್ದು, ಹಿರಿಯ ಚೇತನವು ಸವೆಸಿದ ಸಾರ್ಥಕ ಜೀವನದ ಅನುಭವ ಕಥನವು ಅನಾವರಣಗೊಳ್ಳುವ ಸುಂದರ ಕ್ಷಣಗಳಿಗೆ ಸಾಕ್ಷಿಯಾಗೋಣ ಬನ್ನಿ ಎಂದು ಡಿ ಟಿ ವೆಂಕಟೇಶ್ ಅವರು ಕೋರಿದ್ದಾರೆ.

ಕಾರ್ಯಕ್ರಮದಲ್ಲಿ ಕಥೆಗಾರ ಮತ್ತು ವಿಮರ್ಶಕ ಡಾ. ಜಿ ವಿ ಆನಂದಮೂರ್ತಿ ಒಂದು ಹಟ್ಟಿಯ ಆತ್ಮಕಥನಕವನ್ನು ನಿರೂಪಣೆ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅಸಮತೋಲನಾ ಆಸ್ತಿ ಪ್ರಕರಣ; ಸಹಾಯಕ ಲೆಕ್ಕಾಧಿಕಾರಿಯನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲು ದಲಿತ ಸೇನೆ ಆಗ್ರಹ

ಚಿಕ್ಕಮಗಳೂರಿನ ಹಿರಿಯ ಹೋರಾಟಗಾರ ಹಾಗೂ ಚಿಂತಕ ಎಚ್ ಎಂ ರುದ್ರಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕೃತಿ ಕುರಿತು ಡಾ. ಎಸ್ ನಟರಾಜ ಬೂದಾಳ್ ಮಾತನಾಡುವರು.

ವೇದಿಕೆಯಲ್ಲಿ ಚಿಂತಕ ಕೆ ದೊರೈರಾಜ್, ನಿವೃತ್ತ ವಿಶೇಷ ಜಿಲ್ಲಾಧಿಕಾರಿ ಎಸ್ ಮೂರ್ತಿ, ಲೇಖಕಿ ಬಾ ಹ ರಮಾಕುಮಾರಿ, ಹಿರಿಯ ಹೋರಾಟಗಾರ ಸಯ್ಯೀದ್ ಮುಜೀಬ್, ರೇಷ್ಮೆ ಇಲಾಖೆಯ ನಿವೃತ್ತ ಉಪ ನಿರ್ದೇಶಕ ವೈ ಕೆ ಬಾಲಕೃಷ್ಣಪ್ಪ, ಲೇಖಕ ಡಾ.ಜಿ ವಿ ಆನಂದಮೂರ್ತಿ ಭಾಗವಹಿಸುವರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ ಕಂಗಾಲಾದ ಬಡ ಕಾರ್ಮಿಕರು

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM...

ಹೊನ್ನಾವರ | ಬಾಡಿಗೆ ಹಣ ಕೇಳಿದ್ದಕ್ಕೆ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ: ಪ್ರಕರಣ ದಾಖಲು

ಬಾಕಿ ಉಳಿದಿದ್ದ ಬಾಡಿಗೆ ಹಣ ನೀಡುವಂತೆ ಕೇಳಿದ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ...

ಗದಗ | ಇಂದಿನ ಪೀಳಿಗೆಗೆ ಭಗತ್ ಸಿಂಗ್‌ ಕುರಿತು ನೈಜ ಅಧ್ಯಯನ ಅವಶ್ಯ: ಬಾಲು ರಾಠೋಡ್

ಪ್ರಸ್ತುತ ಯುವಜನತೆ ಎದುರಿಸುತ್ತಿರುವ ನಿರುದ್ಯೋಗ, ಭ್ರಷ್ಟಾಚಾರ, ಮೂಲಭೂತವಾದ ಸೇರಿದಂತೆ ಇತರ ಗಂಭೀರ...

SIR: ಕೊಡಗಿನಲ್ಲಿ ಸೆ.29ರಂದು ಪಬ್ಲಿಕ್ ಹಿಯರಿಂಗ್; ಜಸ್ಟಿಸ್ ಗೋಪಾಲ ಗೌಡ-ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ರಾಜ್ಯದಾದ್ಯಂತ ನಡೆಯುತ್ತಿರುವ...