ತುಮಕೂರು | ಕರ್ನಾಟಕದಲ್ಲಿ ಕನ್ನಡ ಅನಾಥವಾಗಬಾರದು: ಡಾ. ಪುರುಷೋತ್ತಮ್ ಬಿಳಿಮಲೆ

Date:

ಕರ್ನಾಟಕದಲ್ಲಿ ಕನ್ನಡ ಅನಾಥವಾಗಬಾರದು, ಕನ್ನಡಿಗರು ಜಾಗೃತರಾಗಬೇಕು. ಬಸವಾದಿ ಶರಣರು, ದಾಸರು, ದಾರ್ಶನಿಕರು ಕಟ್ಟಿಬೆಳೆಸಿದ ಕನ್ನಡವನ್ನು ಉಳಿಸಿ ಬೆಳೆಸುವ ಕೆಲಸ ನಮ್ಮೆಲ್ಲರದಾಗಬೇಕು. ಈ ಕಾರ್ಯದಲ್ಲಿ ವಿದ್ಯಾರ್ಥಿಗಳು, ಪೋಷಕರು ಪ್ರಧಾನ ಪಾತ್ರ ವಹಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾದಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ್ ಬಿಳಿಮಲೆ ತಿಳಿಸಿದರು.

- Advertisement -

ತುಮಕೂರಿನಲ್ಲಿ ಹಮ್ಮಿಕೊಂಡಿದ್ದ ‘ವೀರ ಸೌಧಾಮಿನಿ ಚಿತ್ರಸಂಪುಟ;’ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಸ್ಥಳೀಯ ಮಟ್ಟದಲ್ಲಿ ಕನ್ನಡವನ್ನು ಉಳಿಸುವ ಕೆಲಸಗಳು ಆಗಬೇಕಾಗಿದೆ. ಕನಿಷ್ಠ ಐದನೆಯ ತರಗತಿವರೆಗಾದರೂ ಕನ್ನಡ ಭಾಷೆ ಮಾಧ್ಯಮದ ಭಾಷೆಯಾಗಬೇಕು. ಇಂಗ್ಲಿಷನ್ನು ಒಂದು ಭಾಷೆಯಾಗಿ ಕಲಿಸಿ, ಆದರೆ ಮಾಧ್ಯಮ ಕನ್ನಡವೇ ಆಗಿರಲಿ. ಕನ್ನಡ ಭಾಷೆಯ ಕಲಿಕೆಗೆ ಹಾಗೂ ಉಳಿಯುವಿಕೆಗೆ ಪೋಷಕರ ಪಾತ್ರವೇ ಬಹಳ ಮುಖ್ಯವಾಗಿದೆ. ನಮ್ಮ ಸ್ಥಳೀಯ ನೆಲೆಗಳಲ್ಲಿ ಸ್ಥಳನಾಮಗಳನ್ನು ಮೂಲ ರೂಪದಲ್ಲಿಯೇ ಉಳಿಸಿಕೊಳ್ಳಬೇಕು. ಇದನ್ನು ಗ್ರಾಮ ಮಟ್ಟದಿಂದ ರಾಜ್ಯಮಟ್ಟದವರೆಗೂ ಆಂದೋಲನದ ರೀತಿಯಲ್ಲಿ ರೂಪಿಸಬೇಕು. ಅದಕ್ಕೆ ಸ್ಥಳೀಯರು ಕೈಜೋಡಿಸಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮಿಜಿ ಮಾತನಾಡಿ, “ಕರ್ನಾಟಕದ ಇತಿಹಾಸದಲ್ಲಿ ಕಿತ್ತೂರು ಸಂಸ್ಥಾನಕ್ಕೆ ತನ್ನದೇ ಆದ ಇತಿಹಾಸವಿದೆ. ರಾಣಿ ಚನ್ನಮ್ಮ ಕನ್ನಡ ನಾಡಿನ ವೀರಮಹಿಳೆ. ಬ್ರಿಟೀಷರ ವಿರುದ್ಧ ಹೋರಾಡುವುದರ ಮೂಲಕ ಹೆಣ್ಣುಮಕ್ಕಳಿಗೆ ಆದರ್ಶಪ್ರಿಯರಾಗಿದ್ದ ಇಂತಹ ವೀರಮಹಿಳೆಯ ಜೀವನ ಸಾಧನೆಗಳನ್ನು ಚಿತ್ರಸಂಪುಟದಲ್ಲಿ ಹಿಡಿದಿಟ್ಟಿರುವ ಸಂತೋಷ ಹಾನಗಲ್‌ರವರ ಪ್ರಯತ್ನ ಸಾರ್ಥಕವಾಗಿದೆ” ಎಂದು ತಿಳಿಸಿದರು.

“ಕನ್ನಡ ಭಾಷೆಯ ಬೆಳವಣಿಗೆಯ ಉದ್ದೇಶದಿಂದಲೇ ನಮ್ಮ ಹಿರಿಯ ಶ್ರೀಗಳು ಕನ್ನಡ ಪಂಡಿತ್ ಕಾಲೇಜು ತೆರೆದರು. ಗ್ರಾಮೀಣ ಹೆಣ್ಣುಮಕ್ಕಳು ಹೆಚ್ಚು ಹೆಚ್ಚು ವಿದ್ಯಾವಂತರಾಗಬೇಕೆಂಬ ದೂರದೃಷ್ಟಿಯಿಂದ ನಮ್ಮ ಸಂಸ್ಥೆಯ ಬಹುತೇಕ ಶಾಲೆಗಳನ್ನು ಗ್ರಾಮಾಂತರ ಪ್ರದೇಶದಲ್ಲಿಯೇ ಪ್ರಾರಂಭಿಸಿದರು. ಈ ಎಲ್ಲಾ ಶಾಲೆಗಳೂ ಕನ್ನಡ ಮಾಧ್ಯಮ ಶಾಲೆಗಳಾಗಿದ್ದು ಶ್ರೀಗಳವರ ಕನ್ನಡ ಭಾಷೆಯ ಅಭಿಮಾನದ ದ್ಯೋತಕಗಳಾಗಿವೆ” ಎಂದರು.

ಕಸಾಪ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಮಾತನಾಡಿ, “ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಬೇಕಾದರೆ ಕನ್ನಡ ಶಾಲೆಗಳು ಉಳಿದು ಕನ್ನಡ ಮಾಧ್ಯಮದಲ್ಲಿ ವಿದ್ಯಾರ್ಥಿಗಳು ಕಲಿಯಬೇಕು. ರಾಜ್ಯದಲ್ಲಿರುವ ಕನ್ನಡ ಶಿಕ್ಷಕರ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಬೇಕು. ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕ ಶಿಷ್ಯವೇತನ ನೀಡಬೇಕು” ಎಂದು ಆಗ್ರಹಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾವಾಹಿನಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎನ್.ಬಿ.ಪ್ರದೀಪ್‌ಕುಮಾರ್, ಅನನ್ಯ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಉಮೇಶ್‌, ಕಾರ್ಯದರ್ಶಿ ಡಾ. ಡಿ.ಎನ್.ಯೋಗೀಶ್ವರಪ್ಪ ತಾಲ್ಲೂಕು ಅಧ್ಯಕ್ಷ ಚಿಕ್ಕಬೆಳ್ಳಾವಿ ಶಿವಕುಮಾರ್, ಸಂಚಾಲಕ ಕೆ.ಎಸ್.ಉಮಾಮಹೇಶ್ ಇನ್ನಿತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...