ತುಮಕೂರು | ಕನ್ನಡ ಅನ್ನದ ಭಾಷೆಯಾಗಬೇಕು : ಡಾ.ಆಶಾರಾಣಿ ಬಗ್ಗನಡು

Date:

ಕನ್ನಡ ಭಾಷೆಗೆ ಒಳಗೊಳ್ಳುವ ಗುಣ ಇದೆ. ಕನ್ನಡ ಭಾಷೆ ಒಳಗೆ ಉರ್ದು, ಫ್ರೆಂಚ್, ಅರೇಬಿಕ್, ಇಂಗ್ಲೀಷ್ ಪದಗಳನ್ನು ನಮ್ಮದೇ ಎನ್ನುವಷ್ಟು ಅಪ್ಪಿಕೊಂಡಿದ್ದೇವೆ. ಕನ್ನಡ ಎಂದರೆ ಭಿನ್ನ ಭೇದ ಎಣಿಸದ ಸಮಗ್ರ ಕರ್ನಾಟಕವನ್ನು ಒಳಗೊಂಡ ದೃಷ್ಟಿಕೋನ. ಕನ್ನಡ ಧರ್ಮಾತೀತವಾದದ್ದು. ಹಲವು ಭಾಷೆ ಮಾತಾಡುವ, ಬಹು ಧರ್ಮೀಯರನ್ನು ಒಳಗೊಂಡಿದೆ. ಕನ್ನಡ ಭಾಷೆಯನ್ನು ದೈನಂದಿನ ವ್ಯವಹಾರದಲ್ಲಿ ಬಳಸುವ ಎಲ್ಲರೂ ಕನ್ನಡಿಗರು ಎಂದು ತುಮಕೂರು ವಿವಿ ಉಪನ್ಯಾಸಕಿ ಡಾ.ಆಶಾರಾಣಿ ಬಗ್ಗನಡು ತಿಳಿಸಿದರು.

- Advertisement -

ತುಮಕೂರು ನಗರದ ಕೆಪಿಎಸ್‌ ಎಂಪ್ರೆಸ್‌ ಬಾಲಕಿಯರ ಪ್ರೌಢಶಾಲೆಯಲ್ಲಿ ಕರ್ನಾಟಕ ಲೇಖಕಿಯರ ಸಂಘ ಇತ್ತೀಚೆಗೆ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉನ್ನತ ಶಿಕ್ಷಣ, ವೃತ್ತಿಪರ ಶಿಕ್ಷಣ ಕನ್ನಡ ಮಾಧ್ಯಮ ದಲ್ಲಿ ದೊರೆಯುತ್ತಿಲ್ಲ, ಹತ್ತನೇ ತರಗತಿವರೆಗೆ ಕನ್ನಡ ಮಾಧ್ಯಮ ದಲ್ಲಿ ಓದಿದ ಬಹಳಷ್ಟು ಮಕ್ಕಳು, ಉನ್ನತ ಶಿಕ್ಷಣ ಕನ್ನಡ ಮಾಧ್ಯಮ ದಲ್ಲಿ ಲಭ್ಯವಿರದ ಕಾರಣಕ್ಕಾಗಿಯೇ ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿರುವುದ ಕಾಣಬಹುದಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ದಲ್ಲಿ ಕನ್ನಡ ಬಳಸಬೇಕು , ಕನ್ನಡದ ಪಠ್ಯಗಳು ಬರಬೇಕು .ಕನ್ನಡವನ್ನು ಜ್ಞಾನದ ಭಾಷೆಯಾಗಿ, ಅನ್ನದ ಭಾಷೆಯಾಗಿ ಮಾಡುವ ಕೆಲಸ ಆಗಬೇಕು .ಕನ್ನಡ ಮಾಧ್ಯಮ ದಲ್ಲಿ ಓದಿದ ಮಕ್ಕಳಿಗೆ ಒಳ್ಳೆಯ ಭವಿಷ್ಯ ಇದೆ ಎಂದರೆ, ಪೋಷಕರು ತಮ್ಮ ಮಕ್ಕಳನ್ನು ಕನ್ನಡ ಮಾಧ್ಯಮ ಕ್ಕೆ ಸೇರಿಸುವರು .ಇದನ್ನು ಆಗು ಮಾಡುವ ಇಚ್ಛಾಶಕ್ತಿ ಸರ್ಕಾರಕ್ಕೆ ಇರಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಲೇಖಕಿಯರ ಸಂಘದ ಜಿಲ್ಲಾಧ್ಯಕ್ಷೆ ಮಲ್ಲಿಕಾ ಬಸವರಾಜು ಮಾತನಾಡಿ , ಕನ್ನಡವನ್ನು ನಮ್ಮ ದೈನಂದಿನ ವ್ಯವಹಾರದಲ್ಲಿ ಬಳಸುವ, ಬೆಳೆಸುವ ಮತ್ತು ಉಳಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ. ತುಮಕೂರು  ನಗರದ ಹಿರಿಯ ನಾಗರೀಕರಾದ ಶ್ರೀ ರಾಜನ್ ರವರು ತಮ್ಮ ಸಹೋದರಿಯರು ವಿದ್ಯಾಭ್ಯಾಸ ಮಾಡಿದ್ದ ಎಂಪ್ರೆಸ್ ಶಾಲೆಯಲ್ಲಿ ಎಸ್ಎಸ್ಎಲ್ ಸಿ ಯಲ್ಲಿ ಕನ್ನಡ ಮಾಧ್ಯಮದಲ್ಲಿ, ಅತಿಹೆಚ್ಚು ಅಂಕ ಗಳಿಸಿದ ಒಬ್ಬ ವಿದ್ಯಾರ್ಥಿನಿಗೆ ಮತ್ತು ಯಾವುದೇ ಮಾಧ್ಯಮ ದಲ್ಲಿ ಓದಿ ,ಕನ್ನಡ ಭಾಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ಇಬ್ಬರು ವಿದ್ಯಾರ್ಥಿನಿಯರಿಗೆ ,ಒಟ್ಟು ಮೂವರಿಗೆ ತಲಾ ಒಂದು ಸಾವಿರದಂತೆ ,ಮೂರು ಸಾವಿರ ರೂಪಾಯಿಗಳ ಬಹುಮಾನವನ್ನು ಪ್ರಾಯೋಜಿಸಿದ್ದು ಅದನ್ನು ಈ ಕಾರ್ಯಕ್ರಮ ದಲ್ಲಿ ವಿತರಿಸುವುದಾಗಿ ತಿಳಿಸಿದರು.

ಎಂಪ್ರೆಸ್ ಶಾಲೆಯ ಮೂವರು ವಿದ್ಯಾರ್ಥಿನಿಯರಿಗೆ ತಲಾ ಒಂದು ಸಾವಿರದಂತೆ ,ಮೂರು ಸಾವಿರ ನಗದು ಕೊಟ್ಟು ಪುರಸ್ಕರಿಸಲಾಯಿತು.

ಎಂಪ್ರೆಸ್ ಬಾಲಕಿಯರ ಪ್ರೌಢಶಾಲೆಯ ಉಪ ಪ್ರಾಂಶುಪಾಲರಾದ ಮಂಜುಳಾ .ಎನ್ ಮಾತನಾಡಿ , ತಮ್ಮ ಶಾಲೆಯಲ್ಲಿ ಲೇಖಕಿಯರ  ಸಂಘದಿಂದ ಕನ್ನಡ ರಾಜ್ಯೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಂಡದ್ದನ್ನು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಸಿ.ಎಲ್ .ಸುನಂದಮ್ಮ, ಶಿಕ್ಷಕ ರಾಮಯ್ಯ, ಗೀತಾ ನಾಗೇಶ್ ಮತ್ತು ಶಾಲೆಯ ಭೋಧಕ ವರ್ಗದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...