ಕರ್ನಾಟಕದಲ್ಲಿರುವ ರಾಜ್ಯಪಾಲರು ನಂಬರ್ ಒನ್ ಕಳ್ಳ. ಸಂವಿಧಾನಬದ್ಧವಾಗಿ ಕಾರ್ಯನಿರ್ವಹಿಸಬೇಕಾದ ರಾಜ್ಯಪಾಲರು ತಮ್ಮ ಕಚೇರಿಯನ್ನು ಬಿಜೆಪಿ ಕಚೇರಿಯನ್ನಾಗಿ ಮಾಡಿಕೊಂಡು ಸಂವಿಧಾನಕ್ಕೆ ಕೊಳ್ಳಿ ಇಡುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಬೆಮೆಲ್ ಕಾಂತರಾಜು ಆರೋಪಿಸಿದರು.
ತುಮಕೂರು ಜಿಲ್ಲೆಯ ತುರುವೇಕೆರೆ ಪಟ್ಟಣದ ಜೆ ಕೆ ಕಂಫರ್ಟ್‌ನಲ್ಲಿ ಬ್ಲಾಕ್ ಕಾಂಗ್ರೆಸ್‌ನಿಂದ ಆಯೋಜಿಸಿದ್ದ ಸ್ವಾಭಿಮಾನಿ ಸಾಧನಾ ಸಮಾವೇಶ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
“ಜನರ ಆರ್ಶೀವಾದದಿಂದ 136 ಸ್ಥಾನ ಪಡೆದು ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಸಲುವಾಗಿ ಬಿಜೆಪಿ, ಜೆಡಿಎಸ್ ಪಕ್ಷಗಳು ಸುಳ್ಳು ಆರೋಪಗಳನ್ನು ಮಾಡಿ ಸರ್ಕಾರಕ್ಕೆ, ಸಿದ್ದರಾಮಯ್ಯನವರಿಗೆ ಕೆಟ್ಟ ಹೆಸರು ತರುವ ಪ್ರಯತ್ನ ಮಾಡುತ್ತಿವೆ. ಬಿಜೆಪಿ, ಜೆಡಿಎಸ್ ನಾಯಕರ ಮೇಲೆ ಸಾಕಷ್ಟು ಆರೋಪಗಳಿದ್ದು, ತನಿಖೆ ನಡೆದಿದ್ದರೂ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿಲ್ಲ. ಆದರೆ ಸಿದ್ದರಾಮಯ್ಯನವರ ಮೇಲೆ ಕೇವಲ ಸುಳ್ಳು ಆರೋಪಗಳು ಬಂದ ಕೂಡಲೇ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ಸಂವಿಧಾನಕ್ಕೆ ಕೊಳ್ಳಿಯಿಡುವ ಕೆಲಸ ಮಾಡಿದ್ದಾರೆ” ಎಂದು ಟೀಕಿಸಿದರು.
ದೊಡ್ಡಬಳ್ಳಾಪುರ ಮಾಜಿ ಶಾಸಕ ವೆಂಕಟರಮಣಯ್ಯ ಮಾತನಾಡಿ, “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಪ್ರಾರಂಭದಲ್ಲೇ ಪಂಚ ಗ್ಯಾರಂಟಿಗಳನ್ನು ನೀಡಿ ದೇಶಕ್ಕೆ ಕರ್ನಾಟಕ ಮಾದರಿ ರಾಜ್ಯವೆಂಬ ಹೆಗ್ಗುರುತನ್ನು ಸಾಧಿಸಿದೆ. ರಾಜ್ಯ ಸರ್ಕಾರ ದಿವಾಳಿಯಾಗಿದೆ. ಗ್ಯಾರಂಟಿ ನೀಡಲು ಹಣವಿಲ್ಲವೆಂದು ಆರೋಪಿಸಿದ್ದ ಬಿಜೆಪಿ, ಜೆಡಿಎಸ್ ಪಕ್ಷಗಳು ವಿವಿಧ ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಯನ್ನು ನಕಲು ಮಾಡಿವೆ. ಬರೀ ಸುಳ್ಳು ಭರವಸೆಗಳನ್ನು ನೀಡುತ್ತಲೇ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಆದರೆ ನಮ್ಮ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ದೇಶದ ಅಭಿವೃದ್ದಿಯಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರವಾದುದು” ಎಂದರು.
ಮಹಿಳಾ ನಾಯಕಿ ಗೀತಾರಾಜಣ್ಣ ಮಾತನಾಡಿ, “ರಾಜ್ಯ ಸರ್ಕಾರ ನೀಡಿರುವ ಪಂಚ ಗ್ಯಾರಂಟಿಗಳು ಯಾವುದೇ ಜಾತಿ, ಧರ್ಮ, ಪಕ್ಷದ ಭೇದವಿಲ್ಲದೆ ಪ್ರತಿಯೊಂದು ಕುಟುಂಬಕ್ಕೂ ತಲುಪಿವೆ. ಕಾಂಗ್ರೆಸ್ ಪಕ್ಷ ಎಂದೂ ಜಾತಿ ಆಧಾರಿತ ರಾಜಕಾರಣ ಮಾಡಿಲ್ಲ. ಸಂವಿಧಾನದ ಆಶಯಗಳಿಗೆ ಬದ್ಧವಾಗಿ ಎಲ್ಲ ಜಾತಿ, ಧರ್ಮದ ಅಭಿವೃದ್ದಿಗೆ ನಮ್ಮ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಬೇಕೆನ್ನುವ ಉದ್ದೇಶದಿಂದ ಶೀಘ್ರದಲ್ಲೇ ತುಮಕೂರಿನಲ್ಲಿ ಸ್ವಾಭಿಮಾನಿ ಸಾಧನಾ ಸಮಾವೇಶ ನಡೆಯಲಿದ್ದು, ಪಕ್ಷದ ಕಾರ್ಯಕರ್ತರು, ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಅಭಿವೃದ್ದಿ ಪರ ಸರ್ಕಾರದ ಜೊತೆ ನಾವಿದ್ದೇವೆಂದು ಸಾರಬೇಕಿದೆ” ಎಂದರು.
ಎಐಸಿಸಿ ಸದಸ್ಯ ಸುಬ್ರಮಣಿ ಶ್ರೀಕಂಠೇಗೌಡ ಮಾತನಾಡಿ, “ಜನಪರ, ಅಭಿವೃದ್ಧಿಪರ ಆಡಳಿತ ನೀಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೆಟ್ಟ ಹೆಸರು ತರುವುದಕ್ಕೋಸ್ಕರ ಬಿಜೆಪಿ, ಜೆಡಿಎಸ್ ಪಕ್ಷಗಳು ಸುಳ್ಳು ಆರೋಪ ಮಾಡುತ್ತಿದ್ದು, ಪಕ್ಷದ ಕಾರ್ಯಕರ್ತರು ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ, ಸಾಧನೆಗಳನ್ನು ಪ್ರತಿ ಮನೆಗೆ ತಲುಪಿಸುವ ಕೆಲಸವನ್ನು ಮಾಡಬೇಕಿದೆ. ಆ ಮೂಲಕ ಬಿಜೆಪಿ, ಜೆಡಿಎಸ್ ಮಾಡುತ್ತಿರುವ ಆರೋಪಗಳು ಸುಳ್ಳೆಂಬ ಅಂಶವನ್ನು ಒತ್ತಿ ಹೇಳಬೇಕಿದೆ” ಎಂದರು.
ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರಶೇಖರ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಾಸ್ತಿಗೊಂಡನಹಳ್ಳಿ ದೇವರಾಜ್, ನಾಗರಾಜ್, ಪಕ್ಷದ ವಕ್ತಾರ ಮುರಳೀಧರ ಹಾಲಪ್ಪ, ವೀಕ್ಷಕ ಪಂಚಾಕ್ಷರಯ್ಯ, ಎಸ್‌ಸಿ ಘಟಕದ ಜಿಲ್ಲಾಧ್ಯಕ್ಷ ಲಿಂಗರಾಜ್, ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ಅನಿಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಂಬರೀಶ್, ಸೇವಾದಳದ ಅಧ್ಯಕ್ಷ ಕೊಂಡಜ್ಜಿ ಕುಮಾರ್, ಮಹಿಳಾ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಕಿಸಾನ್ ಘಟಕದ ಅಧ್ಯಕ್ಷರಾದ ಚಂದ್ರಶೇಖರ್, ನಟರಾಜ್, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ನೂರುಲ್ಲಾ, ಒಬಿಸಿ ಘಟಕದ ಅಧ್ಯಕ್ಷ ಚೇತನ್, ಮುಖಂಡರಾದ ವಾಲೆ ಚಂದ್ರಯ್ಯ, ನಂಜುಂಡಪ್ಪ, ಭೈರಪ್ಪ, ವೇಣುಗೋಪಾಲ್ ಸೇರಿದಂತೆ ನೂರಾರು ಮಂದಿ ಮುಖಂಡರು, ಕಾರ್ಯಕರ್ತರು ಇದ್ದರು.
ವರದಿ : ಗಿರೀಶ್ ಕೆ ಭಟ್, ತುರುವೇಕೆರೆ
ಅವನ ವಿರುದ್ದ ಕೇಸ್ ಭಾಗ್ಯ ಕೊಟ್ಟು ಒದ್ದು ಒಳಗೆ ಹಾಕಲಿ, ಇಂತಹ news ನ್ನು ದೊಡ್ಡದಾಗಿ ಹಾಕುವ ಈ ಗುಲಾಮ ಮಾಧ್ಯಮ ವನ್ನು ಕೇಸ್ ಭಾಗ್ಯ ಸಿಗಲಿ
ಜನಗಳು ಒತ್ತಾಯ ಅಥವಾ ಮುಷ್ಕರ ಮಾಡಿದಾಗ ವಿದ್ಯುತ್ ದರ 10 ಪ್ಯೆಸೆ ಇಳಿಸದೆ , ಮೇಲೆ ಮೊಕದ್ದಮೆ ಹಾಕುತ್ತಿದ್ದ ಸರಕಾರ ಏಕಾಏಕಿ ಚುನಾವಣೆ ಗೆಲ್ಲಲು ಉಚಿತ ವಿದ್ಯುತ್ ಭಾಗ್ಯ ಘೋಷಣೆ ಮಾಡಿರುವುದು ಲಂಚ ನೀಡಿ ಚುನಾವಣೆ ಗೆದ್ದಂತೆ ಅಲ್ಲವೇ?