ತುಮಕೂರು | ಸಾಹಿತ್ಯ ಅಕಾಡೆಮಿಯಿಂದ ಜು.10 ರಂದು ಯುವ ಕವಿಗೋಷ್ಠಿ : ಮಲ್ಲಿಕಾ ಬಸವರಾಜು

Date:

Advertisements

ಸಾಹಿತ್ಯ ಅಕಾಡೆಮಿ ಹಾಗೂ ಕರ್ನಾಟಕ ಲೇಖಕಿಯರ ಸಂಘ ಜೊತೆಗೂಡಿಸಿ ಬೆಂಗಳೂರು ವಿಭಾಗದ ಯುವ ಕವಿಗೋಷ್ಠಿಯನ್ನು ನಗರದ ಜಿಲ್ಲಾ ಆಸ್ಪತ್ರೆ ಆವರಣದ ಜಿಲ್ಲಾ ಆಸ್ಪತ್ರೆ ಸಭಾಂಗಣದಲ್ಲಿ ಜುಲೈ 10ರಂದು ಬೆಳಗ್ಗೆ 10.30 ಗಂಟೆಗೆ ಏರ್ಪಡಿಸಲಾಗಿದೆ ಎಂದು ಕರ್ನಾಟಕ ಲೇಖಕಿಯರ ಸಂಘದ ತುಮಕೂರು ಜಿಲ್ಲಾಧ್ಯಕ್ಷೆ ಮಲ್ಲಿಕಾ ಬಸವರಾಜು ತಿಳಿಸಿದರು

  ತುಮಕೂರು ನಗರದ ಪತ್ರಿಕಾ ಭವನದಲ್ಲಿ ನಡೆದ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವ ಮನಸ್ಸುಗಳಿಗೆ ವೇದಿಕೆ ಒದಗಿಸುವ ನಿಟ್ಟಿನಲ್ಲಿ ಯುವ ಕವಿಗೋಷ್ಠಿಯನ್ನು ಆಯೋಜಿಸಿದ್ದು, ಯುವ ಕವಿಗೋಷ್ಠಿಯನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಎಲ್.ಎನ್.ಮುಕುಂದರಾಜ್ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಕರ್ನಾಟಕ ಲೇಖಕಿಯರ ಸಂಘದ ತುಮಕೂರು ಜಿಲ್ಲಾ ಶಾಖೆಯ ಅಧ್ಯಕ್ಷರಾದ ಮಲ್ಲಿಕಾ ಬಸವರಾಜು ವಹಿಸುವರು. ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಕರಿಯಪ್ಪ ಎನ್., ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ಅಸ್ಗರ್ ಬೇಗ್, ಸಾಹಿತ್ಯ ಅಕಾಡೆಮಿ ಸದಸ್ಯರಾದ ಪಿ.ಚಂದ್ರಿಕಾ ಹಾಗೂ ಡಾ.ಅಕ್ಕೈ ಪದ್ಮಶಾಲಿ ಉಪಸ್ಥಿತರಿರುವರು .

 ಉದ್ಘಾಟನಾ ಸಮಾರಂಭದ ನಂತರ ನಡೆಯುವ ಯುವ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ತುಮಕೂರಿನ ಸೂರ್ಯಕೀರ್ತಿ ವಹಿಸುವರು.ಆಯ್ದ 22 ಜನ ಯುವ ಕವಿಗಳು ತಮ್ಮ ಸ್ವರಚಿತ ಕವನಗಳನ್ನು ವಾಚಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ‘ಕಾವ್ಯ ಎನ್ನುವುದು ಎಲ್ಲಿದೆ?’ ಕುರಿತು ಕಥೆಗಾರ ಡಾ.ನಟರಾಜ್ ಹುಳಿಯಾರ್ ಉಪನ್ಯಾಸ ನೀಡುವರು ನಂತರ ಸಂವಾದ ನಡೆಯಲಿದೆ.ಸಾಹಿತ್ಯ ಅಕಾಡೆಮಿ ಸದಸ್ಯರಾದ ಡಾ.ಕಾ.ವೆಂ.ಶ್ರೀನಿವಾಸಮೂರ್ತಿ ಹಾಗೂ ಡಾ.ರವಿಕುಮಾರ್ ಬಾಗಿ ಭಾಗವಹಿಸುವರು ಎಂದರು.

Advertisements

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯ ಸಂಚಾಲಕಿ ಸುಮ ಸತೀಶ್ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಯುವತಲೆ ಮಾರು ಕಳೆದುಹೋಗಿದೆ ಎಂಬ ಆರೋಪದ ನಡುವೆ ಗಂಭೀರವಾಗಿ ಕಾವ್ಯ ಓದುವ, ಬರೆಯುವವರು ಹೆಚ್ಚಿದ್ದಾರೆ. ಅದರಲ್ಲೂ ವಿವಿಧ ವಲಯದ, ವಿವಿಧ ವರ್ಗದ ಯುವಕವಿಗಳು ಕಾವ್ಯ ಕಟ್ಟುವಲ್ಲಿ ಸಶಕ್ತರಾಗಿದ್ದಾರೆ.ಅಂಥವರನ್ನು ಗುರುತಿಸಿ ಅವಕಾಶ ನೀಡುತ್ತಿದೆ ಕರ್ನಾಟಕ ಸಾಹಿತ್ಯ ಅಕಾಡೆಮಿ. ಇಂಥ ಯುವಕವಿಗೋಷ್ಠಿಗಳನ್ನು ಜಿ.ಎಸ್.ಶಿವರುದ್ರಪ್ಪ ಅವರು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿದ್ದಾಗ ಸಂಘಟಿಸಿದ್ದರು.ಶಿವಮೊಗ್ಗದಲ್ಲಿ ನಡೆದ ಯುವಕವಿಗೋಷ್ಠಿಯಲ್ಲಿ ನಮ್ಮ ಈಗಿನ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಎಲ್.ಎನ್. ಮುಕುಂದರಾಜ್ ಭಾಗವಹಿಸಿದ್ದರು. ‘ಕಾವ್ಯಕ್ಷೇತ್ರದಲ್ಲಿ ಬೆಳೆಯಲು ಬಹುದೊಡ್ಡ ಪ್ರೋತ್ಸಾಹ ನೀಡಿತು’ ಎನ್ನುವುದು ಮುಕುಂದರಾಜ್ ಅವರ ಹೆಮ್ಮೆಯ ಮಾತು. ಅವರ ಅವಧಿಯಲ್ಲಿ ಒಟ್ಟು ನಾಲ್ಕು ವಲಯಮಟ್ಟದ ಯುವಕವಿಗೋಷ್ಠಿಗಳು ನಡೆಯಲಿವೆ.

ಈಗಾಗಲೇ ಮೈಸೂರು ಭಾಗದ ಯುವಕವಿಗೋಷ್ಠಿ ಹಾಸನದಲ್ಲಿ ಹಾಗೂ ಕಲಬುರ್ಗಿ ಭಾಗದ ಯುವಕವಿಗೋಷ್ಠಿ, ಹೊಸಪೇಟೆಯಲ್ಲಿ ಜರುಗಿದೆ. ಇನ್ನೊಂದು ಕವಿಗೋಷ್ಠಿ ಬೆಳಗಾವಿ ವಿಭಾಗ ಮಟ್ಟದ ಯುವಕವಿಗೋಷ್ಠಿ ಬೆಳಗಾವಿಯಲ್ಲಿ ನಡೆಯಲಿದೆ ಎಂದು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಲೇಖಕಿಯರ ಸಂಘದ ತುಮಕೂರು ಜಿಲ್ಲಾ ಶಾಖೆಯ ಅಧ್ಯಕ್ಷೆ ಮಲ್ಲಿಕಾ ಬಸವರಾಜು, ಹಿರಿಯ ಲೇಖಕಿಯರಾದ ಬಾ.ಹ.ರಮಾಕುಮಾರಿ,ಡಾ.ಬಿ.ಸಿ.ಶೈಲಾ ನಾಗರಾಜ್, ಹಾಗೂ ಸಿ.ಎನ್.ಸುಗುಣಾದೇವಿ ಹಾಗೂ ಕವಿಗೋಷ್ಠಿ ನಿರ್ವಾಹಕ ಗಣೇಶ ಅಮೀನಗಡ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X