ತುಮಕೂರು | ಕೆಎನ್ಆರ್ ಅಮೃತ ಮಹೋತ್ಸವ : ಎರಡು ಲಕ್ಷ ಜನ ಸೇರುವ ನಿರೀಕ್ಷೆ

Date:

ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಅವರ 75ನೇ ಜನ್ಮದಿನದ ಅಮೃತಮಹೋತ್ಸವ ಮತ್ತು ಅಭಿನಂದನಾ ಗ್ರಂಥದ ಲೋಕಾರ್ಪಣಾ ಕಾರ್ಯಕ್ರಮವನ್ನು ಜೂ. 21ರಂದು ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಎರಡು ಲಕ್ಷ ಜನ ಸೇರುವ ನಿರೀಕ್ಷೆ ಇದ್ದು ಇದು ಇತಿಹಾಸವಾಗಿ ಉಳಿಯಲಿದೆ ಎಂದು ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ತಿಳಿಸಿದರು.

- Advertisement -

ತುಮಕೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಅವರಣದ ವೇದಿಕೆ ಕಾರ್ಯಕ್ರಮದ ಸಿದ್ಧತೆಗಳನ್ನು ವೀಕ್ಷಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ರಾಜೇಂದ್ರ, ಕೆ.ಎನ್. ರಾಜಣ್ಣ ಅವರ 75 ನೇ ಹುಟ್ಟು ಹಬ್ಬದ ಅಮೃತಮಹೋತ್ಸವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲ್ಲಿದ್ದಾರೆ. ಸಾಹಿತಿ ನಾಡೋಜ ಬರಗೂರು ರಾಮಚಂದ್ರಪ್ಪ ಆಶಯ ನುಡಿಗಳನ್ನಾಡಲಿದ್ದಾರೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕಾಂಗ್ರೆಸ್ ನ  ಹಲವು ಗಣ್ಯರು ಆಗಮಿಸಲಿದ್ದಾರೆ. ಇದು ಶಕ್ತಿ ಪ್ರದರ್ಶನ ಕಾರ್ಯಕ್ರಮವಲ್ಲ, ರಾಜಣ್ಣ ಅವರ ಸ್ನೇಹಿತರೆಲ್ಲಾ ಸೇರಿ ಮಾಡುತ್ತಿರುವ ಕಾರ್ಯಕ್ರಮ. ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಜಲಶಕ್ತಿ ಹಾಗೂ ರಾಜ್ಯ ರೈಲ್ವೆ ಖಾತೆ ಸಚಿವ ವಿ ಸೋಮಣ್ಣ, ಸಚಿವರಾದ ಎಚ್.ಕೆ. ಪಾಟೀಲ್, ಕೆ.ಎಚ್. ಮುನಿಯಪ್ಪ, ಸತೀಶ್ ಜಾರಕಿಹೊಳಿ, ಡಾ ಹೆಚ್ ಸಿ ಮಹದೇವಪ್ಪ, ಎಂ,ಬಿ ಪಾಟೀಲ್, ರಾಮಲಿಂಗರೆಡ್ಡಿ, ಕೆ,ಜೆ.ಜಾರ್ಜ್, ಎನ್ ಚಲುವರಾಯಸ್ವಾಮಿ, ಕೃಷ್ಣ ಬೈರೇಗೌಡ, ದಿನೇಶ್ ಗುಂಡುರಾವ್, ತುಮುಲ್ ಅಧ್ಯಕ್ಷ ಎಚ್.ವಿ. ವೆಂಕಟೇಶ್, ಆಂಧ್ರಪ್ರದೇಶದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಘುವೀರರೆಡ್ಡಿ ಮೊದಲಾದವರು ಭಾಗವಹಿಸುವರು ಎಂದು ತಿಳಿಸಿದರು.

ಮಾಧ್ಯಮಗೋಷ್ಠಿಯಲ್ಲಿ ಕಲ್ಲಹಳ್ಳಿ ದೇವರಾಜು, ನಾರಾಯಣ, ಮಂಜುನಾಥ್, ಧನಿಯಕುಮಾರ್, ಮುರುಳಿಕೃಷ್ಣಪ್ಪ, ಸಾಹಿತಿಗಳಾದ ಬಾ.ಹ. ರಮಾಕುಮಾರಿ, ಶೈಲ ನಾಗರಾಜು, ಡ್ಯಾಗೇರಹಳ್ಳಿ ವಿರೂಪಾಕ್ಷ, ಡಿಎಸ್ಎಸ್ ಮುರುಳಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ತುಮಕೂರು ದಸರಾಕ್ಕೆ ತಾರಾ ಮೆರುಗು : 11 ದಿನ, ನೂರಾರು ಆಕರ್ಷಣೆ

ದೇವಿಯ ಆರಾಧನೆ, ತಾರೆಯರ ಕಲರವ, ಸಂಗೀತದ ರಸದೌತಣ, ನೃತ್ಯ ವೈಭವ, ಕ್ರೀಡಾ...