ತುಮಕೂರು | 40,000 ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಪಿಎಸ್ಐ

Date:

ವಶಪಡಿಸಿಕೊಂಡ ವಾಹನವನ್ನು ಬಿಡುಗಡೆ ಮಾಡಲು ಲಂಚ ಪಡೆದ ಆರೋಪದ ಮೇಲೆ ತುಮಕೂರು ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಚೇತನ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

- Advertisement -

ಶನಿವಾರ ಲೋಕಾಯುಕ್ತ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ, ಪಿಎಸ್‌ಪಿ ಚೇತನ್ ಕುಮಾರ್ ಕುಮಾರ್ ಎಸ್‌ಎಸ್‌ ಅವರು ರೆಡೆಹ್ಯಾಂಡ್‌ಆಗಿ ಸಿಕ್ಕಿಬಿದ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಲೋಕಾಯುಕ್ತ ಅಧಿಕಾರಿಗಳ ಪ್ರಕಾರ, ಬೆಂಗಳೂರಿನ ನಾಗದೇವನಹಳ್ಳಿ ನಿವಾಸಿ ನಾಗೇಶ್ ಎಸ್.ಕೆ ಅವರ ಕಾರನ್ನು ತುಮಕೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ವಶಕ್ಕೆ ಪಡೆಯಲಾಗಿದೆ. ವಾಹನವನ್ನು ಮಾಲೀಕರಿಗೆ ಬಿಡುಗಡೆ ಮಾಡಬೇಕೆಂದರೆ 5 ಲಕ್ಷ ರೂ. ಕೊಡಬೇಕೆಂದು ಪಿಎಸ್‌ಐ ಚೇತನ್ ಕುಮಾರ್ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ದುಬಾರಿ ಲಂಚಕ್ಕೆ ಬೇಡಿಕೆ ಇಟ್ಟ ಚೇತನ್ ಕುಮಾರ್ ವಿರುದ್ಧ ನಾಗೇಶ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡು ಲೋಕಾಯುಕ್ತ ಪೊಲೀಸರು, ಚೇತನ್ ಅವರನ್ನು ‘ರೆಡ್‌ಹ್ಯಾಂಡ್‌’ಆಗಿ ಹಿಡಿಯಲು ಬಲೆ ಬೀಸಿದ್ದರು.

ಈ ಲೇಖನ ಓದಿದ್ದೀರಾ?: ಅಂದು ಸಿದ್ಧಾರ್ಥ, ಇಂದು ರಾಯ್‌; ಸಾಲು ಸಾಲು ಉದ್ಯಮಿಗಳ ಆತ್ಮಹತ್ಯೆ ಹಿಂದಿರುವ ಸತ್ಯವೇನು?

ಆದಾಗ್ಯೂ, ನೇರವಾಗಿ ಲಂಚ ಪಡೆಯದ ಪಿಎಸ್‌ಐ ಚೇತನ್, ಕ್ಯಾತಸಂದ್ರ ಬಳಿಕ ಸ್ಥಳೀಯ ಹೋಟೆಲ್‌ ಸಿಬ್ಬಂದಿಗೆ 40,000 ರೂ. ಹಣವನ್ನು ಕೊಡುವಂತೆ ನಾಗೇಶ್‌ ಅವರಿಗೆ ಸೂಚಿಸಿದ್ದರು. ಅವರು ಹೋಟೆಲ್‌ ಸಿಬ್ಬಂದಿಗೆ ಹಣ ನೀಡಿದಾಗ ಲೋಕಾಯುಕ್ತ ಅಧಿಕಾರಿಗಳು ಹೋಟೆಲ್ ಸಿಬ್ಬಂದಿಯನ್ನು ವಶಕ್ಕೆ ಪಡೆದು, ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ವಿಚಾರಣೆಯ ನಂತರ, ಹೋಟೆಲ್‌ ಸಿಬ್ಬಂದಿಯು ತಾವು ಪಿಎಸ್ಐ ಪರವಾಗಿ ಹಣವನ್ನು ಪಡೆದಿದ್ದಾಗಿ ಒಪ್ಪಿಕೊಂಡಿದ್ದಾರೆ. ಈ ಸುಳಿವು ದೊರೆತ ನಂತರ, ಶನಿವಾರ ಚೇತನ್ ಕುಮಾರ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7(ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ತುಮಕೂರು | ರೈತರ ಸಂಕಷ್ಟಕ್ಕೆ ಸ್ಪಂದಿಸಿ : ವೈಜ್ಞಾನಿಕ ಬರ ಪರಿಹಾರಕ್ಕೆ ಆಗ್ರಹ

ಭೀಕರ ಬರಗಾಲದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ...

ತುಮಕೂರು | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಪಡೆಯಬೇಕು ಹಾಗೂ ಇದುವರೆಗೆ...