ಜಮೀನು ಖಾತೆ ಮಾಡಿಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಸಿ ಎಸ್ ಪುರದ ಕಂದಾಯ ನಿರೀಕ್ಷಕ ನರಸಿಂಹಮೂರ್ತಿ ಲೋಕಾಯುಕ್ತರ ಬಲೆಗೆ ಸಿಲುಕಿದ್ದಾರೆ.
ಗದ್ದೇಹಳ್ಳಿ ನಾಗರಾಜು ಎಂಬ ರೈತರ ಜಮೀನು ಖಾತೆ ಮಾಡಿಕೊಡಲು ₹10,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಂದಾಯ ನಿರೀಕ್ಷಕ ನರಸಿಂಹಮೂರ್ತಿ ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಈ ಸುದ್ದಿ ಓದಿದ್ದೀರಾ? ಹುಬ್ಬಳ್ಳಿ | ನೇಹಾ ರೀತಿಯ ಮತ್ತೊಂದು ಪ್ರಕರಣ: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಹತ್ಯೆ
ಸಿ ಎಸ್ ಪುರ ನಾಡ ಕಚೇರಿಯಲ್ಲಿ ನಡೆದ ಈ ದಾಳಿ ಲೋಕಾಯುಕ್ತ ಡಿವೈಎಸ್‌ಪಿ ಉಮಾಶಂಕರ್ ನೇತೃತ್ವದ ನಿರೀಕ್ಷಕ ಸಲೀಂ ತಂಡ ₹10,000 ಲಂಚದ ಹಣ ಸ್ವೀಕರಿಸುವ ವೇಳೆ ಬಂಧಿಸಿದ್ದಾರೆ.
ಲೋಕಾಯುಕ್ತ ತಂಡ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
