ತುಮಕೂರು | ವಿದ್ಯಾರ್ಥಿನಿಯರ ಪ್ರತಿಭಟನೆ ಹಿನ್ನೆಲೆ ಬಿಸಿಎಂ ಹಾಸ್ಟೆಲ್ ಗೆ ಲೋಕಾಯುಕ್ತರ ಭೇಟಿ : ಪರಿಶೀಲನೆ

Date:

Advertisements

ತುಮಕೂರಿನ ಮೈದಾಳ ರಸ್ತೆಯಲ್ಲಿರುವ ಸ್ನಾತಕೋತ್ತರ ಬಿಸಿಎಂ ಮಹಿಳಾ‌ ಹಾಸ್ಟಲ್ ಗೆ ತುಮಕೂರು ಲೋಕಾಯುಕ್ತರ ತಂಡ ಭೇಟಿನೀಡಿ ಪರಿಶೀಲನೆ ನಡೆಸಿ, ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ್ದಾರೆ. ಕಳೆದ ಗುರುವಾರ ಸಂಜೆ 5 ರಿಂದ ರಾತ್ರಿ 8 ವರೆಗೂ ಪ್ರತಿಭಟನೆ ನಡೆಸಿ ಕಮಿಷನರ್, ಡಿಸಿ ಸ್ಥಳಕ್ಕೆ ಬರುವಂತೆ ಹಾಸ್ಟೆಲ್ ವಿದ್ಯಾರ್ಥಿನಿಯರು ಹಿಡಿದಿದ್ದರು.

ಈಗ ಹಾಸ್ಟೆಲ್ ವಿದ್ಯಾರ್ಥಿಗಳಿಂದ ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ಪಡೆದಿದ್ದಾರೆ. ಹಾಸ್ಟೆಲ್ ವಾರ್ಡನ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಡಿಒ ವಿರುದ್ಧ ವಿದ್ಯಾರ್ಥಿಗಳು ದೂರುಗಳನ್ನು ಹೇಳಿದ್ದಾರೆ ಎಂದು ಗೋತ್ತಾಗಿದೆ.

ಹಾಸ್ಟೆಲ್ ನಲ್ಲಿ ಆಹಾರ ಸೇರಿದಂತೆ ಸರಿಯಾದ ಸೌಲಭ್ಯ ದೊರೆಯುತ್ತಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿನಿಯರು ಡಿ. 12 ರ ಸಂಜೆ ಮಳೆಯಲ್ಲಿಯೇ ಪ್ರತಿಭಟನೆ ನಡೆಸಿದ್ದರು. ಇದರ ಬೆನ್ನಲ್ಲೇ ಇಂದು ವಿದ್ಯಾರ್ಥಿನಿಯರ ಬಿಸಿಎಂ ಹಾಸ್ಟೆಲ್ ಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿನೀಡಿದ್ದಾರೆ. ತುಮಕೂರು ಲೋಕಾಯುಕ್ತ ಡಿವೈಸ್ ಪಿ ಗಳಾದ ರಾಮಕೃಷ್ಣ ಹಾಗೂ ಉಮಾಶಂಕರ್ ಭೇಟಿ ನೀಡಿದ್ದಾರೆ.

Advertisements

ಹಾಸ್ಟೆಲ್ ಅವ್ಯವಸ್ಥೆ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರಿಗೆ ವಿದ್ಯಾರ್ಥಿಗಳು ಪತ್ರ ಮೂಲಕ ದೂರು ನೀಡಿದ್ದರು. ಪ್ರತಿಭಟನೆ ವೇಳೆ ಹಾಸ್ಟಲ್ ನಲ್ಲಿ ಬೆಡ್ ಶೀಟ್ ಕೊಟ್ಟಿದೆ ಎಂದು ಸಹಿ ಪಡೆದು, ಕೊಟ್ಟಿರಲಿಲ್ಲ ಹಾಗೂ ಹಾಸ್ಟಲ್ ಗೆ ಬರುವ ಪಡಿತರವನ್ನು ಹಾಸ್ಟಲ್ ಗೆ ವಿತರಿಸದೆ ಫೋಟೋ ತೆಗೆಸಿಕೊಂಡು ಹಾಗೇ ತೆಗೆದುಕೊಂಡು ಹೋಗುತ್ತಾರೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದರು. ಇದರ ಬಗ್ಗೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X