ಲಾರಿ ಹಾಗೂ ಎರ್ಟಿಗಾ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಐವರು ಗಾಯಗೊಂಡಿರುವ ಘಟನೆ ಕೊರಟಗೆರೆ ತಾಲೂಕಿನ ಅಗ್ರಹಾರ ಗ್ರಾಮ ಪಂಚಾಯಿತಿಯ ತುಮಕೂರು-ಕೊರಟಗೆರೆ ರಸ್ತೆಯಲ್ಲಿ ನಡೆದಿದೆ.
ಆಂಧ್ರದಿಂದ ತುಮಕೂರು ಕಡೆಗೆ ಬರುತ್ತಿದ್ದ ಲಾರಿ ಹಾಗೂ ಕಾರು ನಡುವೆ ಅಪಘಾತವಾಗಿದ್ದು, ದಾವಣಗೆರೆಯ ಶಿವು ನಾಯಕ್, ಮಧುಗಿರಿಯ ಕೊಡಿಗೇನಹಳ್ಳಿಯ ಪರಮೇಶ್ ಮೃತರು ಎಂದು ತಿಳಿದುಬಂದಿದೆ.
ಡಾಬಸ್ ಪೇಟೆಯಲ್ಲಿ ಸ್ನೇಹಿತನ ಮದುವೆ ಮುಗಿಸಿಕೊಂಡು ವಾಪಸ್ಸಾವಾಗುವಾಗ ಈ ಘಟನೆ ನಡೆದಿದ್ದು, ತುಮಕೂರು ಕಡೆಯಿಂದ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಕಡೆಗೆ ತಡರಾತ್ರಿ ಕಾರಿನಲ್ಲಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನಿತ್ಯ ಕುಡಿದು ಹಿಂಸಿಸುತ್ತಿದ್ದ ಅಣ್ಣನನ್ನೇ ಕೊಂದ ತಮ್ಮ
ಕಾರಿನಲ್ಲಿ ಒಟ್ಟು 7 ಮಂದಿ ಪ್ರಯಾಣಿಸುತ್ತಿದ್ದರು. ಈ ಪೈಕಿ ಇಬ್ಬರು ಮೃತಪಟ್ಟಿದ್ದರೆ, 5 ಮಂದಿ ಗಾಯಗೊಂಡಿದ್ದಾರೆ. ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊರಟಗೆರೆ ಠಾಣೆ ಪೊಲೀಸರು ಘಟನಾ ಸ್ಥಖಲ್ಲೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.