ತುಮಕೂರು | ಮಾಧುಸ್ವಾಮಿ ಬೆಂಬಲಿಗರಿಂದ ‘ಗೋ ಬ್ಯಾಕ್ ಸೋಮಣ್ಣ’ ಚಳವಳಿ

Date:

ಮಾಜಿ ಸಚಿವ ಜೆ ಸಿ ಮಾಧುಸ್ವಾಮಿ ಬೆಂಬಲಿಗರು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಆಕಾಂಕ್ಷಿ ವಿ ಸೋಮಣ್ಣ ವಿರುದ್ಧ ‘ಗೋ ಬ್ಯಾಕ್ ಸೋಮಣ್ಣ’ ಎಂದು ಘೋಷಣೆ ಕೂಗಿ ಕೆ ಬಿ ಕ್ರಾಸ್‌ನಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ತುಮಕೂರು ಹಾಲಿ ಸಂಸದ ಜಿ ಎಸ್ ಬಸವರಾಜು ಮತ್ತು ಮಾಜಿ ಸಚಿವ ವಿ ಸೋಮಣ್ಣ ವಿರುದ್ಧ ಧಿಕ್ಕಾರ ಕೂಗಿ ಟೈರ್‌ಗೆ ಬೆಂಕಿ ಹಚ್ಚಿ ನೂರಾರು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು ಹಾಗೂ ಮಾಜಿ ಸಚಿವ ಜೆ ಸಿ ಮಾಧುಸ್ವಾಮಿಗೆ ಬಿಜೆಪಿ ಟಿಕೆಟ್ ನೀಡುವಂತೆ ಆಗ್ರಹಿಸಿದರು.

ಚಿಕ್ಕನಾಯಕನಹಳ್ಳಿ, ತುರುವೇಕೆರೆ, ಗುಬ್ಬಿ, ತಿಪಟೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ‘ಸೋಮಣ್ಣ ಗೋ ಬ್ಯಾಕ್’ ಎಂದು ಘೋಷಣೆ ಮೊಳಗಿಸಿ ಹಾಲಿ ಸಂಸದ ಜಿ ಎಸ್ ಬಸವರಾಜು ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಹಾಲಿ ಬಿಜೆಪಿ ಸಂಸದ ಜಿ ಎಸ್ ಬಸವರಾಜು ವೈಯಕ್ತಿಕ ಹಿತಾಸಕ್ತಿಗೆ ಪಕ್ಷವನ್ನು ಬಲಿ ಕೊಡಲು ಮುಂದಾಗಿದ್ದಾರೆ. ಹೊರಗಿನಿಂದ ಬಂದು ತುಮಕೂರಿನಲ್ಲಿ ಗೆದ್ದ ನಿದರ್ಶನವಿಲ್ಲ. ಹಾಗಾಗಿ ಹೊರಗಿನವರಿಗೆ ಟಿಕೆಟ್ ನೀಡಿದರೆ ಗೆಲ್ಲುವುದು ಕಷ್ಟ. ಸಂಸದ ಬಸವರಾಜು ಅವರ ಒತ್ತಡಕ್ಕೆ ಮಣಿದು ಸೋಮಣ್ಣ ಅವರಿಗೆ ಟಿಕೆಟ್ ನೀಡಿದರೆ ಸೋಲು ಖಚಿತ” ಎಂದು ಬಿಜೆಪಿ ಕಾರ್ಯಕರ್ತರು ಸೋಮಣ್ಣ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸಿಂದಗಿ ತಾಲೂಕಿನ ಎರಡು ಗ್ರಾಮಗಳು ಆಲಮೆಲ ತಾಲೂಕಿಗೆ ಸೇರ್ಪಡೆಯಾಗಿರುವುದು ಅವೈಜ್ಞಾನಿಕ; ಅನಿರ್ದಿಷ್ಟಾವಧಿ ಧರಣಿ

ಮಾಜಿ ಸಚಿವ ಜೆ ಸಿ ಮಾಧುಸ್ವಾಮಿ ಅಭಿಮಾನಿಯೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಮುಂದಾದಾಗ ಪೊಲೀಸರು ತಡೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಬ್ಬೂರು ಗ್ರಾಮಕ್ಕೆ ಪದವಿ ಕಾಲೇಜು ನೀಡುವಂತೆ ಪ್ರಗತಿಪರ ಸಂಘಟನೆಗಳ ಒತ್ತಾಯ

ಸರ್ಕಾರ, ನಿರ್ಲಕ್ಷ್ಯ ಧೋರಣೆ ಬಿಟ್ಟು ಗಬ್ಬೂರು ಗ್ರಾಮಕ್ಕೆ ಪದವಿ ಕಾಲೇಜು ನೀಡುವಂತೆ...

ಕಲಬುರಗಿ | ಸಿಮೆಂಟ್‌ ಕಾರ್ಖಾನೆಯಲ್ಲಿ ಕಾರ್ಮಿಕ ಸಾವು; 2 ತಿಂಗಳಲ್ಲಿ 4ನೇ ದುರಂತ

ಸಿಮೆಂಟ್‌ ಕಾರ್ಖಾನೆಯಲ್ಲಿ ಬೃಹತ್ ಟ್ಯಾಂಕರ್ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ,...

ಬೀದರ್‌ | ವಿದ್ಯುತ್‌ ಸ್ಪರ್ಶ: ಸ್ಥಳದಲ್ಲೇ ವ್ಯಕ್ತಿ ಸಾವು

ವಿದ್ಯುತ್‌ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬಸವಕಲ್ಯಾಣ ತಾಲೂಕಿನ ಲಾಡವಂತಿ...

ವಿಜಯಪುರ | ಮರಗೂರ ಮೊರಾರ್ಜಿ ದೇಸಾಯಿ ವಸತಿಶಾಲೆ ಅವ್ಯವಸ್ಥೆ ಸರಿಪಡಿಸುವಂತೆ ಡಿಎಸ್‌ಎಸ್‌ ಮನವಿ 

ವಿಜಯಪುರ ಜಿಲ್ಲೆಯ ಮರಗೂರ ಮೊರಾರ್ಜಿ ದೇಸಾಯಿ ವಸತಿಶಾಲೆಯ ಅವ್ಯವಸ್ಥೆಗೆ ಕಾರಣರಾಗಿರುವ ಅಧಿಕಾರಿಗಳ...