ತುಮಕೂರು | ಮುದ್ದಹನುಮೇಗೌಡರನ್ನು ಗೆಲ್ಲಿಸಿ: ಸಚಿವ ಪರಮೇಶ್ವರ್

Date:

ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ ಮುದ್ದಹನುಮೇಗೌಡರನ್ನು ಗೆಲ್ಲಿಸಬೇಕು ಎಂದು ಕ್ಷೇತ್ರದ ಜನರಲ್ಲಿ ಗೃಹ ಸಚಿವ ಪರಮೇಶ್ವರ್ ಮನವಿ ಮಾಡಿದರು.

ತುಮಕೂರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, “ಮುದ್ದಹನುಮೇಗೌಡರು ತಮ್ಮ 35 ವರ್ಷದ ರಾಜಕೀಯ ಜೀವನದಲ್ಲಿ ಕಪ್ಪುಚುಕ್ಕೆ ಮಾಡಿಕೊಂಡಿಲ್ಲ. ಅವರೊಬ್ಬ ಸಜ್ಜನ ರಾಜಕಾರಣಿ. ವಿದ್ಯಾವಂತರಾಗಿ ಮತ್ತು ನ್ಯಾಯಾಧೀಶರಾಗಿ ಸಾರ್ವಜನಿಕ ಬದುಕಿನಲ್ಲಿ ಜನಪರ ಕೆಲಸಗಳನ್ನು ಮಾಡಿದ್ದಾರೆ. ತನ್ನ ವ್ಯಕ್ತಿತ್ವವನ್ನು ಶುದ್ಧವಾಗಿಟ್ಟುಕೊಂಡಿದ್ದಾರೆ. ಇಡೀ ದೇಶದಲ್ಲಿ ಕೇವಲ 44 ಸೀಟುಗಳನ್ನು ಗೆದ್ದಂತಹ ಪರಿಸ್ಥಿತಿಯಲ್ಲಿ ಕಾಂಗ್ರೆಸ್‌ನಿಂದ 2014ರಲ್ಲಿ ಗೆದ್ದು ಬಂದರು. ಕೇಂದ್ರದಲ್ಲಿ ನಮ್ಮ ಸರ್ಕಾರವಿರದೆ, ವಿರೋಧ ಪಕ್ಷವೂ ಇರದೆ ಇದ್ದರೂ ಮುದ್ದಹನುಮೇಗೌಡರು ಜಿಲ್ಲೆಯ ಹಾಗೂ ರಾಜ್ಯದ ಸಮಸ್ಯೆಗಳನ್ನು ಗಟ್ಟಿ ಧ್ವನಿಯಲ್ಲಿ ಪ್ರತಿನಿಧಿಸಿದ್ದರು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ ಬಂಡಾಯ ಶಮನಕ್ಕೆ ಬಿಎಸ್‌ವೈ ಎಂಟ್ರಿ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಭದ್ರಾ ಮೇಲ್ದಂಡೆ, ಮೇಕೆದಾಟು, ಮಹದಾಯಿ, ತುಮಕೂರು-ರಾಯದುರ್ಗ ರೈಲ್ವೆ, ಕೊಬ್ಬರಿ ಬೆಲೆ ನಿಯಂತ್ರಣ ಹಾಗೂ ನಾಫೆಡ್ ಮೂಲಕ ಕೊಬ್ಬರಿ ಖರೀದಿಗೆ ನಿಗದಿತ ಬೆಲೆ ಸಿಗುವಂತೆ ಮಾಡಿದ್ದಾರೆ. ಇಂತಹ ಪ್ರಮುಖ ಸಮಸ್ಯೆಗಳ ಬಗ್ಗೆ ಸರ್ಕಾರಗಳನ್ನು ಎಚ್ಚರಿಸುವ ಕೆಲಸ ಮಾಡಿದ್ದರು. ಅಲ್ಲದೆ ತಾವೊಬ್ಬ ಕ್ರಿಯಾಶೀಲ ಸಂಸದನಾಗಿ ಐದು ವರ್ಷಗಳು ಕೆಲಸ ಮಾಡಿದ್ದಾರೆ. ಅವರು ಪ್ರಜಾಪ್ರಭುತ್ವದ ಕುರಿತು ವಿಶ್ವಸಂಸ್ಥೆಯಲ್ಲಿ ಮಾತನಾಡಿರುವ ನಮ್ಮ ಜಿಲ್ಲೆಯ ಏಕೈಕ ವ್ಯಕ್ತಿ. ಹಾಗಾಗಿ ಈ ಬಾರಿಯ ಸಂಸದರನ್ನಾಗಿ ಮುದ್ದಹನುಮೇಗೌಡರನ್ನು ಆಯ್ಕೆ ಮಾಡೋಣ” ಎಂದು ಕರೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಕಾಲಮಿತಿಯೊಳಗೆ ರಸ್ತೆ ಗುಂಡಿ ಮುಚ್ಚಲು ಸೂಚನೆ ನೀಡಿದ ಬಿಬಿಎಂಪಿ ಮುಖ್ಯ ಆಯುಕ್ತ

"ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ರಸ್ತೆಗಳಲ್ಲಿ ಬಿದ್ದಿರುವ ರಸ್ತೆಗುಂಡಿಗಳನ್ನು...

ರಾಜ್ಯದಲ್ಲಿ ಮೇ 31ರಿಂದ ಮುಂಗಾರು ಮಳೆ ಆರಂಭ

ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು ವಾತಾವರಣ ತಂಪಾಗಿದೆ. ರಾಜ್ಯದಲ್ಲಿ ಮುಂದಿನ ಒಂದು ವಾರ...

ಕಲಬುರಗಿ | ಬೈಕ್‌ಗೆ ಸಾರಿಗೆ ಬಸ್ ಢಿಕ್ಕಿ; ಒಂದೇ ಊರಿನ ಮೂವರು ಯುವಕರು ದುರ್ಮರಣ

ಸಾರಿಗೆ ಬಸ್ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಮೇಲೆ...

ಬೆಳಗಾವಿ | ಕರ್ನಾಟಕಕ್ಕೆ ಹರಿದುಬರುತ್ತಿದ್ದ ನೀರು ತಡೆದ ಮಹಾರಾಷ್ಟ್ರ; ಬ್ಯಾರೇಜ್‌ ಸುತ್ತ ಪೊಲೀಸ್‌ ನಿಯೋಜನೆ

ಮಹಾರಾಷ್ಟ್ರದಲ್ಲಿ ಮೂರ್ನಾಲ್ಕು ದಿನಗಳಿಂದ ಸುರಿದ ಮಳೆಯಿಂದಾಗಿ ತುಂಬಿರುವ ರಾಜಾಪುರ ಬ್ಯಾರೇಜ್‌ನಿಂದ ಕರ್ನಾಟಕಕ್ಕೆ...