ತುಮಕೂರು | ಮೈಕ್ರೋ ಫೈನಾನ್ಸ್ ವಿರುದ್ಧ ಬೃಹತ್ ಪ್ರತಿಭಟನೆ; ಲೈಸೆನ್ಸ್ ರದ್ದಿಗೆ ಆಗ್ರಹ

Date:

Advertisements

ಮೈಕ್ರೋ ಫೈನಾನ್ಸ್ ಕಂಪನಿಗಳು ಜನರ ಮೇಲೆ ನಡೆಸುತ್ತಿರುವ ದೌರ್ಜನ್ಯ ಮತ್ತು ದಬ್ಬಾಳಿಕೆಯನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಪ್ರಾಂತ ಹಾಗೂ ರಾಜ್ಯ ರೈತ ಸಂಘಟನೆ, ಕರ್ನಾಟಕ ರಕ್ಷಣಾ ವೇದಿಕೆ, ಅಲ್ಪಸಂಖ್ಯಾತ ಸಂಘಟನೆ, ಅಲೆಮಾರಿ ಹಾಗೂ ಬುಡಕಟ್ಟು ಸಂಘಟನೆ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳು ಸೋಮವಾರ ಕೆಂಪಮ್ಮ ದೇವಿ ದೇವಸ್ಥಾನದ ಆವರಣದಿಂದ ಉಪವಿಭಾಗಾಧಿಕಾರಿಗಳ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಆಗಮಿಸಿ ಧರಣಿ ನಡೆಸಿ ಉಪವಿಭಾಗಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕುಂದೂರು ತಿಮ್ಮಯ್ಯ ಮಾತನಾಡಿ, “ನಾಡಿನ ಉದ್ದಗಲಕ್ಕೂ ದಲಿತರ ಮತ್ತು ಜನಸಾಮಾನ್ಯರ ಮೇಲೆ ಮೈಕ್ರೋ ಫೈನಾನ್ಸ್‌ನವರು ಪಟ್ಟಭದ್ರ ಗೂಂಡಾಗಳನ್ನು ಮುಂದೆ ಇಟ್ಟುಕೊಂಡು ಪುಂಡಾಟಿಕೆ ನಡೆಸಿ ಸಾಲ ಪಡೆದವರನ್ನು ಒಕ್ಕಲಿಬ್ಬಿಸುತ್ತಿದ್ದಾರೆ. ಇಂತಹ ಮೈಕ್ರೋ ಫೈನಾನ್ಸ್ ಮೇಲೆ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸಿ ಜನಸಾಮಾನ್ಯರ ರಕ್ಷಣೆ ಮಾಡಬೇಕು” ಎಂದು ಆಗ್ರಹಿಸಿದರು.

“ದೌರ್ಜನ್ಯ ಹಾಗೂ ದಬ್ಬಾಳಕೆ ಮಾಡುತ್ತಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಲೈಸೆನ್ಸ್ ರದ್ದು ಮಾಡಬೇಕು. ಮೈಕ್ರೋ ಫೈನಾನ್ಸ್ ಅವರ ದೌರ್ಜನ್ಯ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ₹25 ಲಕ್ಷ ಪರಿಹಾರ ನೀಡಬೇಕು. ಮೈಕ್ರೋ ಫೈನಾನ್ಸ್ ಸಾಲ ಮನ್ನಾ ಮಾಡಬೇಕು. ಮೈಕ್ರೋ ಫೈನಾನ್ಸ್‌ನವರ ಹೆಚ್ಚುವರಿ ಬಡ್ಡಿ ಕಟ್ಟಲಾಗದ ಜನರಿಗೆ ಸೂಕ್ತ ರಕ್ಷಣೆ ನೀಡಬೇಕು. ಮೈಕ್ರೋ ಫೈನಾನ್ಸ್ ಮಾಲೀಕರ ಮತ್ತು ಪುಂಡರ ಮೇಲೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದರು.

Advertisements

“ಇತ್ತೀಚೆಗೆ ತುಮಕೂರು ಜಿಲ್ಲೆ ತಿಪಟೂರು ತಾಲೂಕು ಅರಳಗುಪ್ಪೆ ಗ್ರಾಮದ ಭಾಗ್ಯಮ್ಮ ಎಂಬವರು ಮೈಕ್ರೋಫೈನಾನ್ಸ್‌ನವರ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶರಣಯ್ಯ ಎಂಬುವರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೀಗೆ ಮೈಕ್ರೋ ಫೈನಾನ್ಸ್‌ನವರ ಕಿರುಕುಳ ತಾಳಲಾರದೆ ಸಾಲು ಸಾಲು ಆತ್ಮಹತ್ಯೆಗಳು ನಡೆಯುತ್ತಿವೆ. ಜನಸಾಮಾನ್ಯರಿಗೆ ತೊಂದರೆ ಕೊಟ್ಟು ವಸೂಲಿ ಮಾಡಬಾರದೆಂದು ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಜಿಲ್ಲಾಧಿಕಾರಿಯವರು ಆದೇಶ ಮಾಡಿದ್ದರೂ ಕೂಡಾ ಮೈಕ್ರೋ ಫೈನಾನ್ಸ್ ಕಂಪನಿಗಳು ಆದೇಶ ಪಾಲಿಸುತ್ತಿಲ್ಲ. ಆದ್ದರಿಂದ ಸಂಬಂಧಪಟ್ಟ ಇಲಾಖೆಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಬೇಕು” ಎಂದು ಮನವಿ ಮಾಡಿದರು.

Advertisements
Bose Military School

ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಉಪವಿಭಾಗಧಿಕಾರಿ, “ಮನವಿ ಪತ್ರದ ಕುರಿತು ಸರ್ಕಾರದ ಗಮನಕ್ಕೆ ತರಲಾಗುವುದು. ತಪ್ಪಿಸ್ಥರ ವಿರುದ್ದ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಗದಗ | ಎಸ್‌ಎಫ್‌ಸಿ ವಿಶೇಷ ಅನುದಾನ ಅವೈಜ್ಞಾನಿಕ ಬಳಕೆ; ಸಂತೋಷ್ ಹಿರೇಮನಿ ತನಿಖೆಗೆ ಆಗ್ರಹ

ಪ್ರತಿಭಟನೆಯಲ್ಲಿ ಪ್ರಾಂತ ರೈತ ಸಂಘದ ಚನ್ನಬಸವಣ್ಣ, ರಾಜ್ಯ ರೈತ ಸಂಘಟನೆಯ ದೇವರಾಜು ತಿಮ್ಲಾಪುರ, ಕರ್ನಾಟಕ ರಕ್ಷಣಾ ವೇದಿಕೆ ವಿಜಯ್‌ಕುಮಾರ್, ಅಲ್ಪಸಂಖ್ಯಾತ ಸಂಘಟನೆಯ ಇಮ್ರಾನ್, ಅಲೆಮಾರಿ ಸಂಘಟನೆಯ ಇಂದ್ರಮ್ಮ ಹಾಗೂ ಬುಡಕಟ್ಟು ಸಂಘಟನೆಯ ಉಜ್ಜಜ್ಜಿ ರಾಜಣ್ಣ, ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ಜಕ್ಕನಹಳ್ಳಿ ಮೋಹನ್, ಮಹಿಳಾ ಘಟಕದ ಸಂಚಾಲಕರಾದ ಮಂಜುಳಾ, ನಂದಿನಿ, ಸಂಘಟನಾ ಸಂಚಾಲಕರಾದ ಸುರೇಶ್, ಅಣ್ಣಪ್ಪ, ರಮೇಶ್ ಎಸ್ ಸಿ ಶಿವಪುರ, ಕೀರ್ತಿ ಹತ್ಯಾಳು, ರಘು ಹಲವಾರು ಸಂಘ ಸಂಸ್ಥೆಗಳು ಸೇರಿದಂತೆ ನೂರಾರು ಮಹಿಳೆಯರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. Loan ellade yavude manushya enu property madoke agalla.
    Evella duddu mado plan .. 100 kke 1 bhaga kattalla 99 Baga kattidare . Abivruddi agidare.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements
Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕನಸ್ಸುಗಳೊಂದಿಗೆ ಶ್ರಮ ಇದ್ದರೆ ಮಾತ್ರ ಗುರಿ ಮುಟ್ಟಲು ಸಾಧ್ಯ – ಎಡಿಸಿ ಆಬಿದ್ ಗದ್ಯಾಳ

ಕನಸ್ಸುಗಳೊಂದಿಗೆ ಶ್ರಮ ಇದ್ದರೆ ಮಾತ್ರ ಗುರಿ ಮುಟ್ಟಲು ಸಾಧ್ಯ ವಿದ್ಯಾರ್ಥಿಗಳು ಈ...

ಬಾಗಲಕೋಟೆ | ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಘಟಕದ ಸಭೆ

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ್ ಬಾಗಲಕೋಟೆ ಜಿಲ್ಲಾ ಸಮಿತಿಯ ಸಭೆ ಬುಧವಾರ...

ಮಂಗಳೂರು | ಪಠ್ಯೇತರ ಪುಸ್ತಕಗಳ ಓದಿನಿಂದ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಸಾಧ್ಯ: ಉಮರ್ ಯು.ಹೆಚ್

ವಿದ್ಯಾರ್ಥಿಗಳು ಕೇವಲ ಪಠ್ಯ ಪುಸ್ತಕಗಳಿಗೆ ಜೋತು ಬೀಳದೆ, ಪಠ್ಯೇತರ ಪುಸ್ತಕಗಳನ್ನೂ ಜ್ಞಾನ...

ಕಲಬುರಗಿ | ಪತ್ನಿಯೊಂದಿಗೆ ವಿವಾಹೇತರ ಸಂಬಂಧ ಶಂಕೆ; ಸ್ನೇಹಿತನ ಕೊಲೆ

ಪತ್ನಿಯೊಂದಿಗೆ ವಿವಾಹೇತರ ಸಂಬಂಧ ಶಂಕೆ ಹಿನ್ನೆಲೆ ಪ್ರಾಣ ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆ...

Download Eedina App Android / iOS

X