ತುಮಕೂರು | ಹೊರಗುತ್ತಿಗೆ ಮಹಿಳಾ ನೌಕರರಿಗೆ ಹೆರಿಗೆ ಭತ್ಯೆ : ಡಾ.ನಾಗಲಕ್ಷ್ಮೀ ಚೌಧರಿ

Date:

Advertisements

 ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ಮಹಿಳಾ ನೌಕರರಿಗೆ ಖಾಯಂ ನೌಕರರಂತೆಯೇ ಹೆರಿಗೆ ರಜೆ, ಹೆರಿಗೆ ಭತ್ಯೆ ಸೌಲಭ್ಯ ಕಲ್ಪಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿ ಕಾರ್ಯರೂಪಕ್ಕೆ ತರಲು ಪ್ರಯತ್ನಿಸುತ್ತೇನೆಂದು ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ  ಚೌಧರಿ ಭರವಸೆ ನೀಡಿದರು.

 ತುಮಕೂರು ನಗರದ ಜಿಲ್ಲಾ ಬಾಲಭವನದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದ ರಾಜ್ಯ ಮಟ್ಟದ ವಾರ್ಷಿಕ ಮಹೋತ್ಸವ, ಜಿಲ್ಲಾ ಸಮಿತಿಯ ಅಭಿನಂದನಾ ಸಮಾರಂಭ ಹಾಗೂ ರಾಜ್ಯ ಮಟ್ಟದ ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರ ಒಗ್ಗಟ್ಟು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,

ಸರ್ಕಾರದ ಖಾಯಂ ಮಹಿಳಾ ನೌಕರರಿಗೆ ನೀಡುವಂತೆಯೇ ಹೊರಗುತ್ತಿಗೆ ಮಹಿಳಾ ನೌಕರರಿಗೂ ಹೆರಿಗೆ ಭತ್ಯೆ, ಹೆರಿಗೆ ರಜೆ ಸೌಲಭ್ಯ ಕಲ್ಪಿಸಬೇಕು. ಹೊರಗುತ್ತಿಗೆಯಡಿ ಕಾರ್ಯ ನಿರ್ವಹಿಸುವ ಬಹುಪಾಲು ನೌಕರರು ಆರ್ಥಿಕವಾಗಿ ಹಿಂದುಳಿದಿರುವುದರಿಂದ ನೌಕರಿ ಅವರಿಗೆ ಅನಿವಾರ್ಯವಾಗಿರುತ್ತದೆ. ಹೆರಿಗೆ ಸಮಯದಲ್ಲಿ ಹೊರಗುತ್ತಿಗೆ ಮಹಿಳಾ ನೌಕರರು ಆರ್ಥಿಕ ಸಂಕಷ್ಟಕ್ಕೆ ಸಿಲುಕದಂತೆ ಹಾಗೂ ಆರೋಗ್ಯದ ಹಿತದೃಷ್ಟಿಯಿಂದ ಭತ್ಯೆ, ರಜಾ ಸೌಲಭ್ಯವನ್ನು ನೀಡುವಂತೆ ಈಗಾಗಲೇ ಆರೋಗ್ಯ ಸಚಿವರ ಗಮನಕ್ಕೆ ತಂದಿದ್ದೇನೆ. ಮುಖ್ಯಮಂತ್ರಿಗಳಿಗೂ ಮನವಿ ಮಾಡಲಾಗುವುದೆಂದರು. 

Advertisements
1001255935

 ಹೊರಗುತ್ತಿಗೆ ನೌಕರರು ಜೀತ ಪದ್ಧತಿಯಂತೆ ದುಡಿಯಬೇಕಾಗಿಲ್ಲ. ಸಮಾನ ಕೆಲಸಕ್ಕೆ ಸಮಾನ ವೇತನ ಪಡೆಯಲು ಸಂಪೂರ್ಣ ಅರ್ಹರಿರುತ್ತಾರೆ. ರಾಜ್ಯದ 23 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಆಸ್ಪತ್ರೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಹೊರಗುತ್ತಿಗೆ ನೌಕರರಿಗೆ ಕನಿಷ್ಟ ವೇತನ ಪಾವತಿಯಾಗುತ್ತಿಲ್ಲ. ಸಕಾಲದಲ್ಲಿ ಸಂಬಳ ಕೈಗೆ ಸಿಗುತ್ತಿಲ್ಲವೆಂದು ದೂರುಗಳು ಕೇಳಿ ಬಂದಿವೆ. ಸಕಾಲದಲ್ಲಿ ಕನಿಷ್ಠ ವೇತನ ಪಾವತಿ ಮಾಡದ ನೇಮಕಾತಿ ಏಜೆನ್ಸಿಗಳನ್ನು ಬ್ಲಾಕ್ ಲಿಸ್ಟ್ಗೆ ಸೇರಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. 

 ಗುತ್ತಿಗೆ ನೌಕರರು ತಮಗೆ ಸಿಗಬೇಕಾದ ಸೌಲಭ್ಯಗಳನ್ನು ಪಡೆಯಲು ಕಾನೂನು ಮೂಲಕ ಹೋರಾಡಿದಾಗ ಮಾತ್ರ ಗೆಲುವು ದೊರೆಯುತ್ತದೆ. ಈ ನಿಟ್ಟಿನಲ್ಲಿ ಹೊರಗುತ್ತಿಗೆ ನೌಕರರು ಸಂಘಟನೆ ಮೂಲಕ ಹೋರಾಡಬೇಕೆಂದು ಸಲಹೆ ನೀಡಿದರು. 

1001255936

 ಅರ್ಹತೆ ಇರುವುದನ್ನು ಪಡೆಯಲು ಒಗ್ಗಟ್ಟಿನ ದನಿ ಎತ್ತಲೇಬೇಕು. ಎಲ್ಲಿಯವರೆಗೂ ದನಿ ಎತ್ತುವುದಿಲ್ಲವೋ ಅಲ್ಲಿಯವರೆಗೂ ಸೌಲಭ್ಯಗಳು ನಮ್ಮ ಕೈ ಸೇರುವುದಿಲ್ಲ. ಹೊರಗುತ್ತಿಗೆ ನೌಕರರಿಗೆ ಸಕಾಲದಲ್ಲಿ ಕನಿಷ್ಠ ವೇತನ ಪಾವತಿ ಮಾಡುವುದು ಸಂಬಂಧಿಸಿದ ಅಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ. ಖಾಯಂ ನೌಕರರಿಗಿಂತ ಹೆಚ್ಚು ಕೆಲಸ ಮಾಡುವ ಹೊರ ಗುತ್ತಿಗೆ ನೌಕರರಿಗೆ ವೇತನ ಪಾವತಿಯಲ್ಲಿ ತಾರತಮ್ಯ ಕಂಡು ಬಂದರೆ ಆಯೋಗ ಸುಮ್ಮನೆ ಕೈಕಟ್ಟಿ ಕೂರುವುದಿಲ್ಲ ಎಂದು ತಿಳಿಸಿದರು. 

 ನೇಮಕಾತಿ ಏಜೆನ್ಸಿಗಳು ಗುತ್ತಿಗೆ ನೌಕರರಿಗೆ ಕಡ್ಡಾಯವಾಗಿ ಮಾಹೆಯಾನ ಕನಿಷ್ಠ 14,000 ರೂ.ಗಳ ವೇತನವನ್ನು ಪಾವತಿಸಬೇಕು. ಇಲ್ಲದಿದ್ದರೆ ಸಂಬAಧಿಸಿದ ಏಜೆನ್ಸಿಗಳನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರಲ್ಲದೆ, ಬರುವ ದಿನಗಳಲ್ಲಿ ಗುತ್ತಿಗೆ ನೌಕರರಿಗೆ ನೇರ ವೇತನ ಪಾವತಿ ಮಾಡಲು ಸರ್ಕಾರದ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು. 

ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರ ಸಂಘದ ರಾಜ್ಯಾಧ್ಯಕ್ಷ ಅಕ್ಷಯ್ ಡಿ.ಎಂ ಗೌಡ, ತುಮಕೂರು ಜಿಲ್ಲಾ ಘಟಕ ಮತ್ತು ರಾಜ್ಯ ಸಮಿತಿ ನಿರ್ದೇಶಕ ಬಿ. ಸಿದ್ದಪ್ಪ, ರಾಜ್ಯ ಸಮಿತಿ ಪದಾಧಿಕಾರಿಗಳು, ಕಿರಣ್ ಕಾರ್ತಿಕ್, ರಾಜ್ಯ ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರು ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಭಾಗವಹಿಸಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X