ತುಮಕೂರು | ಪಂಚ ಗ್ಯಾರಂಟಿಗಳ ಕಿರು ಹೊತ್ತಿಗೆ ಸಚಿವರಿಂದ ಬಿಡುಗಡೆ

Date:

Advertisements

 ಸರ್ಕಾರವು 2 ವರ್ಷಗಳ ಅವಧಿಯನ್ನು ಪೂರೈಸುತ್ತಿರುವ ಈ ಸುಸಂದರ್ಭದಲ್ಲಿ ರಾಜ್ಯದ ಜನಹಿತಕ್ಕಾಗಿ ಜಾರಿ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಮಾಹಿತಿ ನೀಡುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕಿರುಹೊತ್ತಿಗೆಯನ್ನು ಹೊರ ತಂದಿದ್ದು, ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ  ಕಿರುಹೊತ್ತಿಗೆಯನ್ನು  ಬಿಡುಗಡೆ ಮಾಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ಕಂಚಿನ ಪ್ರತಿಮೆ ಅನಾವರಣ ಮತ್ತು ಅವರ 134ನೇ ಜಯಂತಿ ಹಾಗೂ ಡಾ. ಬಾಬು ಜಗಜೀವನ ರಾಂ ಅವರ 118ನೇ ಜಯಂತಿ ಕಾರ್ಯಕ್ರಮದಲ್ಲಿ ಸಚಿವರು ಈ ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡಿದರು.

ಇದೇ ಸಂದರ್ಭದಲ್ಲಿ ಕೇಂದ್ರ, ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಸಂಸದ ವಿ. ಸೋಮಣ್ಣ, ಸಹಕಾರ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್. ಸುರೇಶ್, ಸಮಾಜ ಕಲ್ಯಾಣ ಸಚಿವ ಡಾಃ ಹೆಚ್.ಸಿ. ಮಹದೇವಪ್ಪ, ರಾಜ್ಯ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ. ಜಯಚಂದ್ರ, ತುಮಕೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಹಾಗೂ ಪಾವಗಡ ಶಾಸಕ ಹೆಚ್.ವಿ. ವೆಂಕಟೇಶ್, ನಗರ ಶಾಸಕ ಜಿ.ಬಿ. ಜ್ಯೋತಿ ಗಣೇಶ್, ಕುಣಿಗಲ್ ಶಾಸಕ ಡಾ|| ಹೆಚ್.ಡಿ. ರಂಗನಾಥ್, ತುಮಕೂರು ಗ್ರಾಮಾಂತರ ಶಾಸಕ ಸುರೇಶ್‌ಗೌಡ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪ್ರಭು, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಉಪ ಅರಣ್ಯ ಸಂರಕ್ಷಣಾಧಿಕಾರಿ ಹೆಚ್. ಅನುಪಮ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಸ್. ಕೃಷ್ಣಪ್ಪ, ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಜಿ. ಹಿಮಂತರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Advertisements

ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ಹಸಿವಿನಿಂದ ಬಳಲಬಾರದೆಂಬ ದೃಷ್ಟಿಯಿಂದ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆ, ಆರ್ಥಿಕ ಸ್ವಾವಲಂಬನೆ ಸಾಧಿಸಲು ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಯಜಮಾನಿ ಮಹಿಳೆ ಬ್ಯಾಂಕ್ ಖಾತೆಗೆ ಪ್ರತಿ ಮಾಹೆ 2000 ರೂ. ನೀಡುವ ಗೃಹಲಕ್ಷ್ಮೀ ಯೋಜನೆ, ವಿದ್ಯಾವಂತ ನಿರುದ್ಯೋಗಿ ಪದವೀಧರರಿಗೆ ಪ್ರತಿ ಮಾಹೆ 3000 ರೂ. ಹಾಗೂ ಡಿಪ್ಲೋಮಾದಾರರಿಗೆ 2000 ರೂ.ಗಳ ಉದ್ಯೋಗ ಭತ್ಯೆ ನೀಡುತ್ತಿರುವ ಯುವನಿಧಿ ಯೋಜನೆ, 200 ಯುನಿಟ್‌ಗಳಿಗಿಂತಲೂ ಕಡಿಮೆ ವಿದ್ಯುತ್ ಬಳಸುವ ಗ್ರಾಹಕರಿಗೆ ಉಚಿತ ವಿದ್ಯುತ್ ಒದಗಿಸುವ ಗೃಹಜ್ಯೋತಿ ಯೋಜನೆ ಹಾಗೂ ರಾಜ್ಯ ಸರ್ಕಾರದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ರಾಜ್ಯದ ಮಹಿಳೆಯರಿಗೆ ಅವಕಾಶ ಮಾಡಿಕೊಟ್ಟಿರುವ ಶಕ್ತಿ ಯೋಜನೆಗಳಿಗೆ ಸಂಬಂಧಿಸಿದ ಜಿಲ್ಲೆಯ ಪ್ರಗತಿ ವಿವರ, ಫಲಾನುಭವಿಗಳ ಅನಿಸಿಕೆಗಳನ್ನು ಒಳಗೊಂಡಿರುವ ಈ ಕಿರುಹೊತ್ತಿಗೆಯು ಸರ್ಕಾರಿ ಯೋಜನೆಗಳ ಬಗ್ಗೆ ಜನರಿಗೆ ಉಪಯುಕ್ತ ಮಾಹಿತಿ ನೀಡಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X