ತುಮಕೂರು | ಬಿ-ಖಾತಾ ಆಂದೋಲನಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಚಾಲನೆ

Date:

Advertisements

ಮಹಾನಗರಪಾಲಿಕೆ ವ್ಯಾಪ್ತಿಯ ಅನಧಿಕೃತ ಆಸ್ತಿಗಳನ್ನು ಬಿ-ಖಾತಾ ರಿಜಿಸ್ಟರ್‌ನಲ್ಲಿ ದಾಖಲಿಸಲು ನಗರದಾದ್ಯಂತ ಹಮ್ಮಿಕೊಂಡಿರುವ ಬಿ-ಖಾತಾ ಆಂದೋಲನಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಗುರುವಾರ ಚಾಲನೆ ನೀಡಿದರು. 

ತುಮಕೂರು ನಗರದ ಸಿರಾಗೇಟ್ ಐ.ಡಿ.ಎಸ್.ಎಂ.ಟಿ. ಕಾಂಪ್ಲೆಕ್ಸ್ನಲ್ಲಿಂದು ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆಂದೋಲನದಲ್ಲಿ ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿಗಳನ್ನು ಬಿ-ಖಾತಾ ರಿಜಿಸ್ಟರ್‌ನಲ್ಲಿ ದಾಖಲಿಸಲು ಮಾಲೀಕರಿಗೆ ನಿಗಧಿತ ಅರ್ಜಿಯನ್ನು ವಿತರಿಸಲಾಗುವುದು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸ್ವೀಕರಿಸಲು ವಾರ್ಡ್ ವಾರು ಸ್ಥಳಗಳನ್ನು ನಿಗಧಿಪಡಿಸಲಾಗಿದೆ. ಸಾರ್ವಜನಿಕರು ಸೀಮಿತ ಕಾಲಾವಧಿಯೊಳಗೆ ಅರ್ಜಿ ಸಲ್ಲಿಸಿ ತಮ್ಮ ಆಸ್ತಿಯನ್ನು ಬಿ-ಖಾತಾ ರಿಜಿಸ್ಟರ್‌ನಲ್ಲಿ ದಾಖಲಿಸಬಹುದಾಗಿದೆ ಎಂದು ತಿಳಿಸಿದರು.  

  ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮಹಾನಗರ ಪಾಲಿಕೆ ವ್ಯಾಪ್ತಿಯ 11 ಸ್ಥಳಗಳಲ್ಲಿ ಬಿ-ಖಾತಾ ರಿಜಿಸ್ಟರ್ ದಾಖಲಾತಿ ಆಂದೋಲನ ನಡೆಯಲಿದ್ದು, ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ತಿಳಿಸಿದರು. 

Advertisements
1001078797

ಸಾರ್ವಜನಿಕರು ಸಕಾಲದಲ್ಲಿ ತೆರಿಗೆ ಹಣವನ್ನು ಪಾವತಿಸಬೇಕು. ಇದರಿಂದ ನಗರವನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲು ನೆರವಾಗುತ್ತದೆ ಎಂದು ತಿಳಿಸಿದರು. 

ಸಾರ್ವಜನಿಕರು ತಮ್ಮ ಆಸ್ತಿಗೆ ಸಂಬAಧಿಸಿದAತೆ ಬಿ ಅಥವಾ ಎ ಖಾತಾ ಪಡೆಯಲು ಮಧ್ಯವರ್ತಿಗಳನ್ನು ಸಂಪರ್ಕಿಸದೆ ನೇರವಾಗಿ ಸಂಬಂಧಪಟ್ಟ ಅಧಿಕಾರಿಗಳನ್ನ ಭೇಟಿ ಮಾಡಬೇಕು ಎಂದು ಸೂಚನೆ ನೀಡಿದರು.

ಮಹಾನಗರ ಪಾಲಿಕೆ ಆಯುಕ್ತರಾದ ಅಶ್ವಿಜ ಮಾತನಾಡಿ, ಕಳೆದ 4 ತಿಂಗಳಿಂದ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ಮಾಲೀಕರಿಗೆ 10 ಸಾವಿರ ಎ-ಖಾತೆಗಳನ್ನು ವಿತರಿಸಲಾಗಿದೆ. ಬಿ-ಖಾತಾ ಪಡೆಯಲು ಮೇ 10ರವರಗೆ ಕಾಲಾವಕಾಶವಿದ್ದು, ನಾಗರಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು. 

ಬಿ-ಖಾತಾಗೆ ದಾಖಲಿಸಲಿಚ್ಛಿಸುವ ಆಸ್ತಿ ಮಾಲೀಕರು ತಮ್ಮ ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತುಪಡಿಸುವ 2024ರ ಸೆಪ್ಟೆಂಬರ್ 10ರ ಪೂರ್ವದಲ್ಲಿ ನೋಂದಾಯಿತ ಮಾರಾಟ ಪತ್ರ, ದಾನಪತ್ರ, ವಿಭಾಗ ಪತ್ರ, ಹಕ್ಕು ಖುಲಾಸೆ ಪತ್ರ, ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ(ಇಸಿ,ನಮೂನೆ-15), ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಸೀದಿ, ಮಾಲೀಕರ ಮತ್ತು ಸ್ವತ್ತಿನ ಫೋಟೋ ಹಾಗೂ ಗುರುತಿನ ದಾಖಲೆ ಪ್ರತಿ ಸೇರಿದಂತೆ ಮತ್ತಿತರ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು ಎಂದು ಮಾಹಿತಿ ನೀಡಿದರು. 

ಬಿ-ಖಾತಾ ರಿಜಿಸ್ಟರ್‌ಗೆ ದಾಖಲಿಸಲು ನಿಗಧಿಪಡಿಸಿರುವ ಸ್ಥಳಗಳ ವಿವರ 

   ಸಾರ್ವಜನಿಕರ ಅನುಕೂಲಕ್ಕಾಗಿ ಬಿ-ಖಾತಾ ರಿಜಿಸ್ಟರ್‌ಗೆ ದಾಖಲಿಸಲು ಪಾಲಿಕೆ ವತಿಯಿಂದ ವಾರ್ಡ್ಗಳಿಗನುಗುಣವಾಗಿ ದಿನಾಂಕವಾರು ಸ್ಥಳವನ್ನು ನಿಗಧಿಪಡಿಸಲಾಗಿದ್ದು, ಫೆಬ್ರವರಿ 21ರಂದು ವಾರ್ಡ್ ಸಂಖ್ಯೆ 1, 2, 3ರ ನಾಗರಿಕರು ಶಿರಾಗೇಟ್ ಐಡಿಎಸ್‌ಎಂಟಿ ಕಾಂಪ್ಲೆಕ್ಸ್ ಹಾಗೂ ವಾರ್ಡ್ ಸಂಖ್ಯೆ 4, 5, 6-ಚಿಕ್ಕಪೇಟೆಯ ಪೂರ್ಣಯ್ಯ ಛತ್ರ; ಫೆ.27 ಮತ್ತು 28ರಂದು ವಾರ್ಡ್ ಸಂಖ್ಯೆ 7 ರಿಂದ 11-ಪಿ.ಎಚ್ ಕಾಲೋನಿಯ ಆಜಾದ್ ಪಾರ್ಕ್ ಹಾಗೂ ವಾರ್ಡ್ ಸಂಖ್ಯೆ 10, 14, 15, 23, 29-ಕುಣಿಗಲ್ ಮುಖ್ಯರಸ್ತೆಯ ವಾಲ್ಮೀಕಿ ಸಮುದಾಯ ಭವನ; ಮಾರ್ಚ್ 3 ಮತ್ತು 4ರಂದು ವಾರ್ಡ್ ಸಂಖ್ಯೆ 12,13,17,22- ಮಹಾನಗರ ಪಾಲಿಕೆ ಆವರಣ ಹಾಗೂ ವಾರ್ಡ್ ಸಂಖ್ಯೆ 16, 18, 19, 20-ಕೋತಿತೋಪು ಸರ್ಕಾರಿ ಶಾಲೆ; ಮಾ.6 ಮತ್ತು 7ರಂದು ವಾರ್ಡ್ ಸಂಖ್ಯೆ 24 ರಿಂದ 27- ಅಶೋಕ ನಗರದ ಆಜಾದ್ ಪಾರ್ಕ್ ಹಾಗೂ ವಾರ್ಡ್ ಸಂಖ್ಯೆ 21, 28-ಹನುಮಂತಪುರದ ಕೊಲ್ಲಾಪುರದಮ್ಮನ ದೇವಸ್ಥಾನ; ಮಾ.11 ಮತ್ತು 12ರಂದು ವಾರ್ಡ್ ಸಂಖ್ಯೆ 33, 34-ಎಸ್.ಎಲ್.ಎನ್.ನಗರದ ಮಹಾನಗರಪಾಲಿಕೆ ಪಂಪ್‌ಹೌಸ್ ಹಾಗೂ ವಾರ್ಡ್ ಸಂಖ್ಯೆ 30, 31-ಮಾರುತಿ ನಗರ ಪಾರ್ಕ್; ಮಾ.14ರಂದು ವಾರ್ಡ್ ಸಂಖ್ಯೆ 32, 35ರ ನಾಗರಿಕರಿಗಾಗಿ ಬಟವಾಡಿಯ ಬಸವ ಭವನದಲ್ಲಿ ಬಿ-ಖಾತಾ ರಿಜಿಸ್ಟರ್‌ಗೆ ದಾಖಲಿಸಲು ಅರ್ಜಿಗಳನ್ನು ಸ್ವೀಕರಿಸಲಾಗುವುದು. 

ಕಾರ್ಯಕ್ರಮದಲ್ಲಿ ಪಾಲಿಕೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X