ತುಮಕೂರು | ಕಲುಷಿತ ನೀರು ಸೇವಿಸಿ 10ಕ್ಕೂ ಅಧಿಕ ಮಂದಿ ಅಸ್ವಸ್ಥ

Date:

ಕಲುಷಿತ ನೀರು ಸೇವಿಸಿ 10 ಮಂದಿ ಅಸ್ವಸ್ಥಗೊಂಡಿರುವ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ವೈ ಎನ್‌ ಹೊಸಕೋಟೆಯ ತಾತಯ್ಯನ ಗುಡಿಯ ಬಳಿ ನಡೆದಿದೆ.

- Advertisement -

ಕುಡಿಯುವ ನೀರಿಗೆ ಚರಂಡಿ ನೀರು ಮಿಶ್ರಣಗೊಂಡ ಪರಿಣಾಮ ಈ ಅವಘಡ ಸಂಭವಿಸಿದೆ. ಗೇಟ್ ವಾಲ್‌ಗಳ ಮೂಲಕ ಕುಡಿಯುವ ನೀರಿಗೆ ಕಲುಷಿತ ನೀರು ಸೇರಿದೆ. ನಲ್ಲಿ ನೀರು ಕುಡಿದ 10ಕ್ಕೂ ಹೆಚ್ಚು ಜನರಲ್ಲಿ ವಾಂತಿ, ಭೇದಿ ಜತೆಗೆ ಜ್ವರ ಕಾಣಿಸಿಕೊಂಡಿದೆ. ಓರ್ವ ಬಾಲಕಿ ತೀವ್ರ ಅಸ್ವಸ್ಥಗೊಂಡಿರುವ ಕಾರಣ ಆಕೆಯನ್ನು ಕೂಡಲೇ ಪಾವಗಡ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
ಕಲುಷಿತ ನೀರು ಸೇವಿಸಿ ಬಾಲಕಿ ಅಸ್ವಸ್ಥ
ಕಲುಷಿತ ನೀರು ಸೇವಿಸಿ ಬಾಲಕಿ ಅಸ್ವಸ್ಥ

“ಬಡವರ್ಗದವರು, ಕೂಲಿ ಕಾರ್ಮಿಕರು ಈ ಭಾಗದಲ್ಲಿ ಹೆಚ್ಚಾಗಿ ವಾಸಿಸುತ್ತಿದ್ದು, ಜಿಲ್ಲಾಡಳಿತ, ಸ್ಥಳೀಯ ಆಡಳಿತ ಸೇರಿದಂತೆ ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆ” ಎಂದು ಸ್ಥಳೀಯರು ಆರೋಪಿಸಿದ್ದಾರೆ.

ತಹಶೀಲ್ದಾರ್‌ ಸುಜಾತಾ, ಇಒ ಶಿವರಾಜಯ್ಯ ಹಾಗೂ ವೈದ್ಯಾಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಗ್ರಾಮದಲ್ಲಿ ಬೀಡುಬಿಟ್ಟಿದ್ದು, ಮುಂಜಾಗ್ರತಾ ಕ್ರಮವಾಗಿ ಆಂಬುಲೆನ್ಸ್‌ಗಳನ್ನು ರವಾನೆ ಮಾಡಲಾಗಿದ್ದು, ಅಗತ್ಯ ಔಷಧಗಳನ್ನು ದಾಸ್ತಾನು ಮಾಡಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...