ತುಮಕೂರು | ಎತ್ತಿನಹೊಳೆಗೆ ಕೃಷ್ಣ, ಪರಮಶಿವಯ್ಯ ಅವರ ಹೆಸರಿಡಿ : ಮಾಜಿ ಸಂಸದ ಜಿ. ಎಸ್. ಬಸವರಾಜು

Date:

Advertisements

ಪಶ್ಚಿಮಾಭಿಮುಖವಾಗಿ ಹರಿಯುವ ನದಿ ನೀರನ್ನು, ಬಯಲು ಪ್ರದೇಶಗಳಿಗೆ ಹರಿಸಬಹುದು ಎಂದು ಮೊಟ್ಟ ಮೊದಲು ಪರಿಚಯಿಸಿದ್ದು ನೀರಾವರಿ ತಜ್ಞ ಜಿ.ಎಸ್.ಪರಮಶಿವಯ್ಯ ಮತ್ತು ಈ ಯೋಜನೆಗೆ ಚಾಲನೆ ನೀಡಿದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರವರು. ಹಾಗಾಗಿ ಈ ಯೋಜನೆಗೆ ಜಿ.ಎಸ್. ಪರಮಶಿವಯ್ಯ ಹಾಗೂ ಎಸ್.ಎಂ. ಕೃಷ್ಣ ರವರ ಹೆಸರಿಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಂಸದ ಜಿ.ಎಸ್. ಬಸವರಾಜು ಒತ್ತಾಯಿಸಿದರು.

ಆಗಿನ ಜಲಸಂಪನ್ಮೂಲ ಸಚಿವರಾಗಿದ್ದ ಹೆಚ್.ಕೆ.ಪಾಟೀಲ್ ರವರ ಹೆಸರನ್ನು ಸಹ ಈ ಯೋಜನೆಗೆ ಇಡಬೇಕು. ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

1971 ರಲ್ಲಿ ರಾಷ್ಟ್ರಪತಿ ಆಡಳಿತವಿದ್ದಾಗ ಧರ್ಮವೀರ ರವರು ರಾಜ್ಯಪಾಲರಾಗಿದ್ದರು. ಅವರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವರ್ಧನ್ ರವರು ನೀರಾವರಿ ತಜ್ಞ ಜಿ.ಎಸ್.ಪರಮಶಿವಯ್ಯ ನವರನ್ನು ಬೆಂಗಳೂರು ಸರ್ಕಲ್‌ಗೆ ವರ್ಗಾವಣೆ ಮಾಡಿದ್ದರು. ಆಗ ಅವರು ಇನ್ನವೆಸ್ಟಿಗೇಷನ್ ಸರ್ಕಲ್‌ಗೆ ವರ್ಗಾವಣೆ ಮಾಡಿಸಿಕೊಂಡು ಅರಣ್ಯ ಸುತ್ತಿ ಸಿದ್ಧಪಡಿಸಿದ ಸುಮಾರು 53 ವರ್ಷಗಳ ಕನಸು ಇದಾಗಿದೆ ಎಂದರು.

Advertisements

ನಂತರ ಬಂದ ಅನೇಕ ಚುನಾಯಿತ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸಹ ಯೋಜನೆಯ ಯಶಸ್ಸಿಗೆ ನಿರಂತರವಾಗಿ ಶ್ರಮಿಸಿದ್ದಾರೆ. ಅವರನ್ನೆಲ್ಲಾ ಗೌರವಿಸುವ ಕೆಲಸ ಬಹಳ ಉತ್ತಮವಾಗಿದೆ ಎಂದು ಅವರು ಹೇಳಿದರು.

ಪರಮಶಿವಯ್ಯನವರು 140 ಟಿಎಂಸಿ ನೀರಿನ ಯೋಜನೆ ತರಲು ಒತ್ತಾಯಿಸುತ್ತಿದ್ದರು. ಸರ್ಕಾರ ಪ್ರಾಯೋಗಿಕವಾಗಿ 24 ಟಿ.ಎಂ.ಸಿ ಅಡಿ ನೀರಿನ ಎತ್ತಿನಹೊಳೆ ಯೋಜನೆ ರೂಪಿಸಿದಾಗ, ಅವರು ಪ್ರಬಲವಾಗಿ ವಿರೋಧಿಸಿದ್ದರು. ಪೈಪ್ ಬದಲಾಗಿ ಕಾಲುವೆಯನ್ನು ಮಾಡಿಸಲು ಹರಸಾಹಸ ಮಾಡಲಾಯಿತು ಎಂದು ವಿವರಿಸಿದರು.

ಕೆಲವು ಬದಲಾವಣೆ ಮತ್ತು ಅನಗತ್ಯ ಎನಿಸಿದರೂ ಕಾಲುವೆ ನಿರ್ಮಾಣ ಬಹಳ ಪ್ರಮುಖವಾಗಿದೆ. ನಾವು 10000 ಕ್ಯೂಸೆಕ್ಸ್ ಸಾಮರ್ಥ್ಯದ ಕರ್ನಾಟಕ ವಾಟರ್ ಗ್ರಿಡ್ ಕೆನಾಲ್ ರೂಪಿಸಲು ಶ್ರಮಿದ್ದೆವು. ಕೊನೆಗೂ ಪೈಪ್ ಬದಲಾಗಿ ಹಾಸನ ಜಿಲ್ಲೆಯ ಹರವನಹಳ್ಳಿಯಿಂದ ತುಮಕೂರು ಜಿಲ್ಲೆಯ ಬೈರಗೊಂಡ್ಲುವಿನವರೆಗೆ ಸುಮಾರು 260 ಕಿ.ಮೀ. ದೂರದ ಕಾಲುವೆಗೆ, ಸುಮಾರು 3300 ಕ್ಯೂಸೆಕ್ಸ್ ಒಂದೇ ಸಾಮರ್ಥ್ಯದ ಕಾಲುವೆ ನಿರ್ಮಾಣ ಮಾಡಿರುವುದು ವಿಶೇಷ. ಈ ಕಾಲುವೆಗೆ ಜಿ.ಎಸ್.ಪರಮಶಿವಯ್ಯ ಹೆಸರಿಡಲೇಬೇಕು. ಇದು ಅವರ ಪರಿಕಲ್ಪನೆಯ ಕೂಸಾಗಿದೆ ಎಂದರು.

ಈ ಕಾಲುವೆ ಫ್ರಿಬೋರ್ಡ್ ಸೇರಿದಂತೆ ಒಂದು ವರ್ಷದ 365 ದಿವಸವೂ ನೀರು ಹರಿಸಿದರೆ, ಸುಮಾರು 140 ಟಿ.ಎಂ.ಸಿ ಅಡಿ ನೀರನ್ನು ಹರಿಸಬಹುದಾಗಿದೆ. ಸುಮಾರು 2000 ರಿಂದ 2500 ಟಿ.ಎಂ.ಸಿ. ನೀರು ಸಮುದ್ರ ಸೇರಲಿದೆ. ಇದರಲ್ಲಿ ಈ ಕಾಲುವೆ ಮೂಲಕ 140 ಟಿ.ಎಂ.ಸಿ. ನೀರನ್ನು ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿರುವುದು ಸ್ವಾಗತಾರ್ಹ. ಈ ನಿಟ್ಟಿನಲ್ಲಿ ಚಿಂತನೆ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಆದೇಶದ ಮೇರೆಗೆ ರಾಜ್ಯಾದ್ಯಂತ ಊರಿಗೊಂದು ಕೆರೆ- ಆ ಕೆರೆಗೆ ನದಿ ನೀರು ಯೋಜನೆಯ ಸಮೀಕ್ಷೆ ಶೀಘ್ರವಾಗಿ ಪೂರ್ಣಗೊಳ್ಳಬೇಕಿದೆ. ಇದರಿಂದ ಪರಮಶಿವಯ್ಯನವರ ಅತ್ಮಕ್ಕೆ ಶಾಂತಿ ಸಿಗಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕುಂದರನಹಳ್ಳಿ ರಮೇಶ್, ಶಿವರುದ್ರಪ್ಪ, ರಕ್ಷಿತ್ ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X