ತುಮಕೂರು | ‘ನ್ಯಾಷನಲ್ ಹೆರಾಲ್ಡ್’ ಖಾಸಗಿ ದೂರು ವಜಾ : ಕಾಂಗ್ರೆಸ್ ಮುಖಂಡರಿಂದ ವಿಜಯೋತ್ಸವ

Date:

ದೆಹಲಿ ಹೈಕೋರ್ಟ್ ನ್ಯಾಷನಲ್ ಹೆರಾಲ್ಡ್ ಪ್ರಕರಣದ ಖಾಸಗಿ ದೂರನ್ನು ವಜಾಗೊಳಿಸುವ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಟೌನ್‌ಹಾಲ್ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರಗೌಡ ಅವರ ನೇತೃತ್ವದಲ್ಲಿ ಕಾರ್ಯಕರ್ತರು, ಮುಖಂಡರುಗಳು ವಿಜಯೋತ್ಸವ ಹಾಗೂ ಬಿಜೆಪಿಯ ದ್ವೇಷ ರಾಜಕಾರಣದ ವಿರುದ್ದ ಪ್ರತಿಭಟನೆ ನಡೆಸಿದರು.

- Advertisement -

 ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಶಾಸಕ ಡಾ.ಎಸ್.ಷಪಿ ಅಹಮದ್ ಮಾತನಾಡಿ ಕಾಂಗ್ರೆಸ್ ಮುಖಂಡರನ್ನು ಗುರಿಯಾಗಿಸಿಕೊಂಡು ಬಿಜೆಪಿ ಪಕ್ಷ ನಡೆಸುತ್ತಿದ್ದ ದ್ವೇಷದ ರಾಜಕಾರಣಕ್ಕೆ ದೆಹಲಿ ಹೈಕೋರ್ಟ್ ತೀರ್ಪು ಸರಿಯಾದ ಬರೆ ಎಳೆದಿದೆ.ಅನಗತ್ಯವಾಗಿ ಸ್ವಾತಂತ್ರ ಪೂರ್ವದಲ್ಲಿ ಸ್ವಾತಂತ್ರ ಚಳವಳಿಗೆ ಬಹಳವಾಗಿ ಶ್ರಮಿಸಿದ್ದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಇತಿಹಾಸವನ್ನು ಅರಿಯದೆ, ಕಾಂಗ್ರೆಸ್ ಮುಖಂಡರಾದ ಸೋನಿಯಾಗಾಂಧಿ,ರಾಹುಲ್‌ಗಾಂಧಿ ಅವರ ಮೇಲೆ ಸೇಡು ತೀರಿಸಿಕೊಳ್ಳಲು ಈ ಪ್ರಕರಣವನ್ನು ಬಳಸಿಕೊಂಡು ಇನ್ನಿಲ್ಲದ ಕಿರುಕುಳ ನೀಡಿ,ಪಕ್ಷವನ್ನು ಅಸ್ಥಿರಗೊಳಿಸಲು ಪ್ರಯತ್ನಿಸಿದ್ದಲ್ಲದೆ, ವೋಟ್ ಚೋರಿಯಂತಹ ಪ್ರತಿಭಟನೆಯಿಂದ ದೇಶದಲ್ಲಿ ಅತ್ಯಂತ ಮುಜುಗರಕ್ಕೆ ಒಳಗಾಗಿರುವ ಬಿಜೆಪಿ, ದೆಹಲಿ ಹೈಕೋರ್ಟಿನಲ್ಲಿ ಖಾಸಗಿ ದೂರು ಸಲ್ಲಿಸುವ ಮೂಲಕ ಜೈಲಿಗೆ ಅಟ್ಟುವ ಹುನ್ನಾರ ನಡೆಸಿತ್ತು.ಆದರೆ ಇದಕ್ಕೆ ಅವಕಾಶ ನೀಡದೆ ನ್ಯಾಯಾಲಯ ಕೇಸನ್ನು ವಜಾಗೊಳಿಸುವ ಮೂಲಕ ದೂರಿನಲ್ಲಿ ಯಾವುದೇ ಹುರುಳಿಲ್ಲ ಎಂಬುದನ್ನು ಸಾಬೀತು ಪಡಿಸಿದೆ.ನ್ಯಾಯಾಲಯದ ತೀರ್ಪು ಕಾಂಗ್ರೆಸ್ ಕಾರ್ಯಕರ್ತರಿಗೆ ಬಲ ತುಂಬಿದಂತಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರಬಲವಾಗಿ ನಮ್ಮ ನಾಯಕರೊಂದಿಗೆ ಕೈಜೋಡಿಸಿ ಕೆಲಸ ಮಾಡಲು ಹುರಿದುಂಬಿಸಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ಮಾತನಾಡಿ, ಪಾರ್ಲಿಮೆಂಟ್‌ನ ವಿರೋಧಪಕ್ಷನ ನಾಯಕನಾಗಿ ರಾಹುಲ್‌ಗಾಂಧಿ ಅವರು ಯಶಸ್ಸು ಗಳಿಸುತ್ತಿರುವುದನ್ನು ಸಹಿಸಿ ಕೊಳ್ಳಲಾಗದೆ ಬಿಜೆಪಿ ನ್ಯಾಯಾಲಯದ ಮೂಲಕ ನಮ್ಮ ನಾಯಕರ ಮೇಲೆ ಒತ್ತಡ ಹೇರಲು ಮುಂದಾಗಿತ್ತು. ಆದರೆ ನ್ಯಾಯಾಲಯ ಅದಕ್ಕೆ ಆಸ್ಪದ ನೀಡದೆ, ಬಿಜೆಪಿಯ ಹುನ್ನಾರವನ್ನು ಛಿದ್ರಗೊಳಿಸಿದೆ.ಇನ್ನ ಮುಂದಾದರೂ ಬಿಜೆಪಿ ಈ ರೀತಿಯ ದ್ವೇಷದ ರಾಜಕಾರಣವನ್ನು ಬಿಟ್ಟು, ನೇರವಾಗಿ ಚುನಾವಣೆ ಎದುರಿಸಲಿ ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಗಂಗಹನುಮಯ್ಯ, ಕಾಂಗ್ರೆಸ್ ಮುಖಂಡರಾದ ಎನ್.ಗೋವಿಂದರಾಜು ,ಮುರುಳೀಧರ ಹಾಲಪ್ಪ, ಸಂಜೀವಕುಮಾರ್,ಹೆಬ್ಬೂರು ಶ್ರೀನಿವಾಸಮೂರ್ತಿ, ಪಿ.ಶಿವಾಜಿ, ಕೆಂಪರಾಜು, ಸುಜಾತ, ಭಾಗ್ಯ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಹೇಶ್,ಜೆಸಿಬಿ ವೆಂಕಟೇಶ್, ಸಿಮೆಂಟ್ ಮಂಜುನಾಥ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ತುಮಕೂರು | ರೈತರ ಸಂಕಷ್ಟಕ್ಕೆ ಸ್ಪಂದಿಸಿ : ವೈಜ್ಞಾನಿಕ ಬರ ಪರಿಹಾರಕ್ಕೆ ಆಗ್ರಹ

ಭೀಕರ ಬರಗಾಲದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ...

ತುಮಕೂರು | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಪಡೆಯಬೇಕು ಹಾಗೂ ಇದುವರೆಗೆ...