ತುಮಕೂರು | ಕೃಷಿ ಬಳಕೆ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ವಿಳಂಬ ಬೇಡ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

Date:

Advertisements

ರೈತರು ಕೃಷಿ ಬಳಕೆಗಾಗಿ ಕೊರೆಸಿರುವ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ವಿಳಂಬ ಮಾಡಬಾರದೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

 ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಅಂತರ್ಜಲ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಬೇಸಿಗೆ ಕಾಲವಾಗಿರುವ ಹಿನ್ನೆಲೆಯಲ್ಲಿ ರೈತರ ಬೆಳೆಗಳಿಗೆ ನೀರಿನ ಅಭಾವದ ಕಾರಣ ತುರ್ತಾಗಿ ವಿದ್ಯುಚ್ಛಕ್ತಿಯನ್ನು ಪಡೆಯಲು ಅನುಕೂಲವಾಗುವ ದೃಷ್ಟಿಯಿಂದ, ನೋಂದಣಿ ಪ್ರಮಾಣ ಪತ್ರವನ್ನು ನೀಡುವ ವಿಧಾನವನ್ನು ಸರಳೀಕರಿಸಬೇಕು. ಜಿಲ್ಲಾ ಅಂತರ್ಜಲ ಕಚೇರಿಯಲ್ಲಿ ಅರ್ಜಿ ಶುಲ್ಕ ಮತ್ತು ದಂಡ ಪಾವತಿಸಿ ಸ್ವೀಕೃತಿ ಪತ್ರ ಪಡೆದು ಬೆಸ್ಕಾಂ ಕಚೇರಿಗೆ ಸಲ್ಲಿಸಿ ವಿದ್ಯುಚ್ಛಕ್ತಿ ಪಡೆಯಲು ಹಾಗೂ ತದನಂತರ ನೋಂದಣಿ ಪ್ರಮಾಣ ಪತ್ರ ಪಡೆದುಕೊಳ್ಳಲು ರೈತರಿಗೆ ಅನುವು ಮಾಡಿಕೊಡಬೇಕು ಎಂದು ತಾಕೀತು ಮಾಡಿದರು.  

1001110892

ಜಿಲ್ಲೆಯಲ್ಲಿ ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆ ವಿನಿಯಮನ) ಅಧಿನಿಯಮ-2012 ಮತ್ತು ನಿಯಮಾವಳಿ-2012ನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಅಂತರ್ಜಲ ಅತಿಬಳಕೆ ತಾಲ್ಲೂಕುಗಳೆಂದು ಅಧಿಸೂಚಿಸಲಾಗಿರುವ ಜಿಲ್ಲೆಯ ಚಿಕ್ಕನಾಯಕನಹಳ್ಳಿ, ತಿಪಟೂರು, ಕೊರಟಗೆರೆ, ಮಧುಗಿರಿ ಹಾಗೂ ತುಮಕೂರು ಸೇರಿದಂತೆ 5 ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಪ್ರತಿಯೊಬ್ಬ ಅಂತರ್ಜಲ ಬಳಕೆದಾರನೂ ಯಾವುದೇ ಉಪಯೋಗಕ್ಕಾಗಿ ಕೊಳವೆ ಬಾವಿಯನ್ನು ಕೊರೆಸಲು ಹಾಗೂ ಅಂತರ್ಜಲವನ್ನು ಬಳಸಲು ಜಿಲ್ಲಾ ಅಂತರ್ಜಲ ಸಮಿತಿಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದು ತಿಳಿಸಿದರು.

Advertisements

ಅಂತರ್ಜಲ ಅತಿಬಳಕೆ ತಾಲ್ಲೂಕುಗಳೆಂದು ಅಧಿಸೂಚಿಸಲಾಗಿರುವ ಜಿಲ್ಲೆಯ 5 ತಾಲ್ಲೂಕುಗಳಲ್ಲಿ ಪ್ರಸ್ತುತ ಇರುವ ಕೊಳವೆ ಬಾವಿಯನ್ನು ಸಕ್ಷಮ ಪ್ರಾಧಿಕಾರದಲ್ಲಿ ನೋಂದಾಯಿಸಿಕೊಳ್ಳಬೇಕೆಂದು ಸಾರ್ವಜನಿಕರ ಗಮನಕ್ಕೆ ತರಬೇಕು ಎಂದು ನಿರ್ದೇಶಿಸಿದರು.

   ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೆ ಅನಧಿಕೃತವಾಗಿ ಕೊಳವೆ ಬಾವಿಯನ್ನು ಕೊರೆಸಿದಲ್ಲಿ ಭೂಮಾಲೀಕರು ಮತ್ತು ರಿಗ್ ಮಾಲೀಕರ ಮೇಲೆ ಕಾನೂನು ರೀತ್ಯ ಕ್ರಮಕೈಗೊಳ್ಳಲು ಅಧಿಕಾರಿಗಳು ಹಿಂಜರಿಯಬಾರದು ಎಂದು ಸೂಚಿಸಿದರು.

ಸಭೆಯಲ್ಲಿ ಹಿರಿಯ ಭೂವಿಜ್ಞಾನಿ ನಾಗವೇಣಿ, ತಿಪಟೂರು ವಿಭಾಗದ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಸೋಮಶೇಖರ ಗೌಡ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.   

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X