ತುಮಕೂರು | ಸಿಗದ ಆ್ಯಂಬುಲೆನ್ಸ್ ಸೌಲಭ್ಯ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು!

Date:

Advertisements

ಮೃತಪಟ್ಟ ತಂದೆಯ ಶವ ಸಾಗಿಸಲು ಆ್ಯಂಬುಲೆನ್ಸ್ ವ್ಯವಸ್ಥೆ ಸಿಗದ ಕಾರಣ ಮಕ್ಕಳು ಬೈಕ್‌ನಲ್ಲೇ ಶವ ಸಾಗಿಸಿದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್ ಹೊಸಕೋಟೆಯಲ್ಲಿ ನಡೆದಿದೆ.

ಅನಾರೋಗ್ಯದ ಕಾರಣ ಹೊನ್ನೂರಪ್ಪ(80) ಎಂಬವರನ್ನು ವೈ‌.ಎನ್ ಹೊಸಕೋಟೆಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬುಧವಾರ ಮಧ್ಯಾಹ್ನ 108 ಆ್ಯಂಬುಲೆನ್ಸ್‌ನಲ್ಲಿ ಕರೆ ತರಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಹೊನ್ನೂರಪ್ಪ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಆಸ್ಪತ್ರೆಯಲ್ಲಿ ಶವ ಸಾಗಿಸಲು ಯಾವುದೇ ವಾಹನದ ಸೌಲಭ್ಯಗಳಿರಲಿಲ್ಲ. ಈ ಹಿನ್ನೆಲೆಯಲ್ಲಿ ಅನಾರೋಗ್ಯದ ವೇಳೆ ಕರೆತಂದಿದ್ದ 108 ಆ್ಯಂಬುಲೆನ್ಸ್‌ನಲ್ಲೇ ಊರಿಗೆ ಶವ ಸಾಗಿಸಲು ಸಿಬ್ಬಂದಿಗಳಲ್ಲಿ ಮಕ್ಕಳು ವಿನಂತಿಸಿದ್ದಾರೆ. ಆದರೆ, 108 ಆ್ಯಂಬುಲೆನ್ಸ್‌ನಲ್ಲಿ ಮೃತಪಟ್ಟ ಬಳಿಕ ಶವ ಸಾಗಿಸುವಂತಿಲ್ಲ ಎಂಬ ನಿಯಮ ಇರುವುದರಿಂದ ಶವ ಕೊಂಡೊಯ್ಯಲು ನಿರಾಕರಿಸಿದ್ದಾರೆ. ಈ ವೇಳೆ ಸಿಬ್ಬಂದಿ ಹಾಗೂ ಹೊನ್ನೂರಪ್ಪ ಕುಟುಂಬದವರ ನಡುವೆ ಸಣ್ಣಮಟ್ಟಿನ ವಾಗ್ವಾದ ಕೂಡ ನಡೆದಿರುವುದಾಗಿ ತಿಳಿದುಬಂದಿದೆ.

Advertisements

ಕೊನೆಗೆ ದಾರಿ ಕಾಣದಾಗದೆ, ಇಬ್ಬರು ಮಕ್ಕಳಾದ ಗೋಪಾಲಪ್ಪ, ಚಂದ್ರಣ್ಣ ಎಂಬುವವರು ಬೈಕ್‌ನಲ್ಲೇ ತಂದೆಯ ಶವವನ್ನು ಕುಳ್ಳಿರಿಸಿಕೊಂಡು ವೈ‌.ಎನ್ ಹೊಸಕೋಟೆಯಿಂದ ಸುಮಾರು 6 ಕಿಲೋಮೀಟರ್ ದೂರವಿರುವ ದಳವಾಯಿಹಳ್ಳಿಗೆ ಶವ ಸಾಗಿಸಿರುವುದಾಗಿ ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ಕಾರ್ಕಳ ಪರಶುರಾಮ ಪ್ರತಿಮೆ ವಿವಾದ | ಶಾಸಕ ಸುನಿಲ್ ಪ್ರಚಂಡ ಸುಳ್ಳುಗಾರ: ಕಾಂಗ್ರೆಸ್‌ ಮುಖಂಡ ಉದಯ್ ಶೆಟ್ಟಿ

ಬೈಕಿನಲ್ಲಿ ಶವವನ್ನು ಸಾಗಿಸುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಗೃಹ ಸಚಿವರ ತವರು ಜಿಲ್ಲೆಯಲ್ಲಿ ಈ ಬೆಳವಣಿಗೆ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ವೈ‌.ಎನ್ ಹೊಸಕೋಟೆಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶವ ಸಾಗಿಸಲು ಸರ್ಕಾರ ಹಾಗೂ ಆರೋಗ್ಯ ಇಲಾಖೆಯು ಶೀಘ್ರವೇ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿದ್ದಾರೆ. ವೈ.ಎನ್ ಹೊಸಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

Download Eedina App Android / iOS

X