ತುಮಕೂರು | ‘ಲಂಚ ಕೊಡಲು ಹಣವಿಲ್ಲ’; ತಾವು ಬೆಳೆದ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ

Date:

ಅಧಿಕಾರಿಗಳಿಗೆ ಲಂಚ ಕೊಡಲು ನನ್ನ ಬಳಿ ಹಣವಿಲ್ಲವೆಂದು ರೈತರೊಬ್ಬರು ತಾವು ಬೆಳೆದಿದ್ದ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ನಡೆದಿದೆ. ಮೂಲಂಗಿಯನ್ನೇ ಲಂಚವಾಗಿ ನೀಡುವುದಾಗಿ ಧ್ವನಿವರ್ಧಕದಲ್ಲಿ ಘೋಷಿಸಿದ್ದಾರೆ.

- Advertisement -

ಮಧುಗಿರಿ ತಾಲೂಕಿನ ಜಕ್ಕೇನಹಳ್ಳಿ ಗ್ರಾಮದ ನಿವಾಸಿ ಪ್ರಸನ್ನ ಕುಮಾರ್ ಅವರು ಅಧಿಕಾರಿಗೆ ಲಂಚವಾಗಿ ಮೂಲಂಗಿ ಕೊಡಲು ಮುಂದಾಗಿದ್ದಾರೆ. ಅವರು ತಮ್ಮ ಗ್ರಾಮದಲ್ಲಿ ತನ್ನ ಜಮೀನಿಂದ ಹೆದ್ದಾರಿವರೆಗೆ ಸಂಪರ್ಕ ರಸ್ತೆ ನಿರ್ಮಿಸಿ ಕೊಡುವಂತೆ ಮನವಿ ಮಾಡಿದ್ದರು. ಆದರೆ, ಅವರ ಮನವಿಯನ್ನು ಕಂದಾಯ ಅಧಿಕಾರಿ ತಿಸ್ಕರಿಸಿದ್ದರು ಎಂದು ಹೇಳಲಾಗಿದೆ. ಶಿವನಗೆರೆ ಗ್ರಾಮ ಲೆಕ್ಕಪತ್ರಗಾರರು ಹಣಕ್ಕಾಗಿ ತಮಗೆ ಕಿರುಕುಳ ನೀಡುತ್ತಿದ್ದರು. ನಾನು ಲಂಚ ಕೊಡದ ಕಾರಣಕ್ಕಾಗಿ ತಮ್ಮ ಮನವಿಯನ್ನು ತಿರಸ್ಕರಿಸಲಾಗಿದೆ ಎಂದು ರೈತ ಪ್ರಸನ್ನ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಮೂಲಂಗಿಯನ್ನು ತಾಲೂಕು ಕಚೇರಿಗೆ ತಂದ ರೈತ, “ಸಂಪರ್ಕ ರಸ್ತೆ ಕಾಮಗಾರಿ ಆರಂಭಿಸುವಂತೆ ಲೋಕಾಯುಕ್ತರು ಸೂಚನೆ ನೀಡಿದ್ದಾರೆ. ಆದರೂ, ಕಳೆದ ಎರಡು ವರ್ಷಗಳಿಂದ ಅಧಿಕಾರಿಗಳು ರಸ್ತೆ ಕಾಮಗಾರಿಯನ್ನು ವಿಳಂಬ ಮಾಡುತ್ತಿದ್ದಾರೆ. ಸಂಬಂಧಪಟ್ಟ ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಲೆಕ್ಕಿಗರಿಗೆ ಲಂಚ ನೀಡಲು ನನ್ನ ಬಳಿ ಹಣವಿಲ್ಲ. ಹೀಗಾಗಿ, ಮೂಲಂಗಿಯನ್ನೇ ಲಂಚವಾಗಿ ನೀಡುತ್ತೇನೆ” ಎಂದು ಹೇಳಿದ್ದಾರೆ.

“ಹೆದ್ದಾರಿಯಿಂದ ನಮ್ಮ ರಸ್ತೆಗೆ ಸಂಪರ್ಕ ಒದಗಿಸುವ ಈಗಿರುವ ರಸ್ತೆಯನ್ನು ಅತಿಕ್ರಮಣ ಮಾಡಲಾಗಿದೆ. ಆ ಅತಿಕ್ರಮಣವನ್ನು ತೆರವುಗೊಳಿಸಬೇಕು. ಪಕ್ಕಾ ರಸ್ತೆ ನಿರ್ಮಿಸಬೇಕು ಎಂಬ ನನ್ನ ಮನವಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ನಾನು ಲೋಕಾಯುಕ್ತ ನ್ಯಾಯಾಲಯವನ್ನು ಸಂಪರ್ಕಿಸಿದ್ದೆ. ಲೋಕಾಯುಕ್ತರು ರಸ್ತೆ ನಿರ್ಮಾಣ ಕಾಮಗಾರಿ ಆರಂಭಿಸುವಂತೆ ಸೂಚಿಸಿದ್ದಾರೆ. ಆದರೂ, ಕಾಮಗಾರಿ ಆರಂಭವಾಗಿಲ್ಲ” ಎಂದು ಪ್ರಸನ್ನ ಕುಮಾರ್ ಹೇಳಿದ್ದಾರೆ

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...