ತುಮಕೂರು | ವೃದ್ಧೆಯ ತೆಂಗಿನ ತೋಟ ನಾಶ; ದುಷ್ಕರ್ಮಿಗಳ ಅಟ್ಟಹಾಸಕ್ಕೆ 42 ತೆಂಗಿನ ಮರಗಳು ಬಲಿ

Date:

ವೃದ್ಧೆಯ ತೆಂಗಿನ ತೋಟ ನಾಶವಾಗಿದ್ದು, ದುಷ್ಕರ್ಮಿಗಳ ದ್ವೇಷದ ಅಟ್ಟಹಾಸಕ್ಕೆ 42 ತೆಂಗಿನ ಮರಗಳು ಬಲಿಯಾಗಿರುವ ಘಟನೆ ತುಮಕೂರು‌ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಜಮೀನು ವಿವಾದದ ಹಿನ್ನೆಲೆಯಲ್ಲಿ ತುರುವೇಕೆರೆ ತಾಲೂಕಿನ ಅಪ್ಪಸಂದ್ರ ಗ್ರಾಮದ ವೃದ್ದೆ ಸಿದ್ದಗಂಗಮ್ಮ ಎಂಬುವರಿಗೆ ಸೇರಿದ 42 ತೆಂಗಿನ ಮರಗಳನ್ನು ಕಿಡಿಗೇಡಿಗಳು ಕಡಿದುರುಳಿಸಿದ್ದಾರೆ‌. ಸುಮಾರು 12 ವರ್ಷಗಳಿಂದ ಕಷ್ಟಪಟ್ಟು ಕಾಪಾಡಿಕೊಂಡು ಬಂದಿದ್ದ ತೆಂಗಿನ ತೋಟ ಫಲಬಿಡುವ ಹೊತ್ತಿನಲ್ಲಿ ದುಷ್ಕರ್ಮಿಗಳ ದ್ವೇಷದ ಅಟ್ಟಹಾಸಕ್ಕೆ‌ ಬಲಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ವೃದ್ದೆ ಸಿದ್ದಗಂಗಮ್ಮ ಅವರಿಗೆ ಅಪ್ಪಸಂದ್ರ ಗ್ರಾಮದ ಸರ್ವೆ ನಂ 120 ರಲ್ಲಿ 04 ಎಕರೆ 01 ಗುಂಟೆ ಪಿತ್ರಾರ್ಜಿತವಾಗಿ ಬಂದಿತ್ತು. ಕೆಲವು ವರ್ಷಗಳಿಂದ ಪಕ್ಕದ ಜಮೀನಿನ ಮಾಲಿಕ ಕಾಳೇಗೌಡರ ಮಕ್ಕಳಾದ ಉಮೇಶ, ರಾಜ ಎಂಬುವರಿಗೂ ವೃದ್ದೆ ಸಿದ್ದಗಂಗಮ್ಮ ನಡುವೆ ಜಮೀನು ವಿವಾದವಿತ್ತು ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಗುಡ್ಡ ಕುಸಿತ; ಚಾರ್ಮಾಡಿ ಘಾಟ್‌ ರಸ್ತೆಯೂ ಬಂದ್

“ಇತ್ತೀಚೆಗೆ ಸರ್ವೆ ಅಧಿಕಾರಿಗಳು ಇಬ್ಬರ ಜಮೀನನ್ನೂ ಸರ್ವೇ ಮಾಡಿ, ಇಬ್ಬರ ಜಮೀನಿಗೆ ಗಡಿ ಗುರುತು ಮಾಡಿದ್ದರು. ಇದೇ ಕಾರಣಕ್ಕೆ ಉಮೇಶ, ರಾಜ ಅತಿಕ್ರಮವಾಗಿ ಪ್ರವೇಶ ಮಾಡಿ ತೆಂಗಿನ ಮರಗಳನ್ನು ಕಡಿದು ಹಾಕಿದ್ದಾರೆ” ಎಂದು ವೃದ್ದೆ ಸಿದ್ದಗಂಗಮ್ಮ ಆರೋಪಿಸಿದ್ದಾರೆ.

ಈ ಕುರಿತು ವೃದ್ಧೆ ಸಿದ್ಧಗಂಗಮ್ಮ ದಂಡಿನಶಿವರ ಪೊಲೀಸರಿಗೆ ದೂರು ನೀಡಿದ್ದು, ಸೂಕ್ತ ರಕ್ಷಣೆ ಮತ್ತು ಪರಿಹಾರ ಕೊಡಿಸಿ ಎಂದು ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...