ತುಮಕೂರು | ವೈದ್ಯಕೀಯ ವೃತ್ತಿಪರರಿಂದ ಮಾತ್ರ ಕ್ಯಾನ್ಸರ್ ಪತ್ತೆ ಹಚ್ಚಿ ಸರಿಯಾದ ಚಿಕಿತ್ಸೆ ನಿರ್ಧರಿಸಲು ಸಾಧ್ಯ : ಡಾ.ಕೆ.ಬಿ.ಲಿಂಗೇಗೌಡ

Date:

ಬಾಯಿಯ ಕ್ಯಾನ್ಸರ್‌ನ ಆರಂಭಿಕ ಚಿಹ್ನೆಗಳು ಸಾಮಾನ್ಯವಾಗಿ ಅಸ್ಪಷ್ಟವಾಗಿರುತ್ತವೆ. ವಾಡಿಕೆಯ ಹಲ್ಲಿನ ಸಮಸ್ಯೆ ಅಥವಾ ನೆಗಡಿ ಎಂದು ತಪ್ಪಾಗಿ ಗ್ರಹಿಸಬಹುದು. ಒಂದೇ ರೀತಿಯ ರೋಗಲಕ್ಷಣಗಳನ್ನು ಉಂಟುಮಾಡುವ ಅನೇಕ ಕ್ಯಾನ್ಸರ್ ಪರಿಸ್ಥಿತಿಗಳನ್ನು ಜನಸಾಮಾನ್ಯರು ಎದುರಿಸುತ್ತಿದ್ದಾರೆ. ಆದರೆ ವೈದ್ಯಕೀಯ ವೃತ್ತಿಪರರು ಮಾತ್ರ ಕ್ಯಾನ್ಸರ್ ಪತ್ತೆ ಹಚ್ಚಿ ಸರಿಯಾದ ಚಿಕಿತ್ಸೆಯನ್ನು ನಿರ್ಧರಿಸಲು ಸಾಧ್ಯ ಎಂದು ಸಾಹೇ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಕೆ.ಬಿ.ಲಿಂಗೇಗೌಡ  ಅಭಿಪ್ರಾಯಪಟ್ಟರು.

- Advertisement -

ತುಮಕೂರು ನಗರ ಸಮೀಪದ ಅಗಳಕೋಟೆಯಲ್ಲಿರುವ ಶ್ರೀ ಸಿದ್ದಾರ್ಥ ದಂತ ಕಾಲೇಜಿನ ಓರಲ್ ಮತ್ತು ಮ್ಯಾಕ್ಸಿಲೊಫೇಶಿಯಲ್ ಸರ್ಜರಿ ವಿಭಾಗದಿಂದ ಅಂತರಾಷ್ಟ್ರೀಯ ಓರಲ್ ಮತ್ತು ಮ್ಯಾಕ್ಸಿಲೊಫೇಶಿಯಲ್ ಸರ್ಜರಿ ದಿನದಂದು ಹಮ್ಮಿಕೊಳ್ಳಲಾಗಿದ್ದ “ಬಾಯಿಯ ಕ್ಯಾನ್ಸರ್ ರೋಗದ ನಿರ್ಣಯ ಮತ್ತು ಶೀಘ್ರ ಪತ್ತೆ ಹಚ್ಚುವಿಕೆ ” ವಿಷಯ ಕುರಿತು ಮಾತನಾಡಿದ ಅವರು,  ಬಾಯಿಯ ಕ್ಯಾನ್ಸರ್ ವಿಶ್ವದ ಆರನೇ ಸಾಮಾನ್ಯ ಕ್ಯಾನ್ಸರ್ ಆಗಿದೆ. ಬಾಯಿಯ ಕ್ಯಾನ್ಸರ್ ಹರಡುವಿಕೆಯು ಮಹಿಳೆಯರಿಗಿಂತ ಪುರುಷರಲ್ಲಿ 3 ಪಟ್ಟು ಹೆಚ್ಚಾಗಿದೆ. ಮೌಖಿಕ ಹಾಗೂ ಗಂಟಲ ಕ್ಯಾನ್ಸರ್ ಬೇಹ ಪತ್ತೆಹಚ್ಚಲು ಈಗ ಆಧುನಿಕ ಚಿಕಿತ್ಸಾ ಕ್ರಮಗಳನ್ನು ಅನುಸರಿಸುತ್ತಿರುವುದರಿಂದ ಜನಸಾಮಾನ್ಯರು ಭಯಪಡಬೇಕಾಗಿಲ್ಲ. ರೋಗ ಲಕ್ಷಣ ಕಂಡು ಬಂದ ತಕ್ಷಣ ವೈದ್ಯರನ್ನು ಭೇಟಿ ಮಾಡಿ ಎಂದು ಡಾ.ಕೆ.ಬಿ.ಲಿಂಗೇಗೌಡ ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
1001076707

ಆಂಕೊಲಾಜಿ ವಿಭಾಗದ ಶಸ್ತ್ರಚಿಕಿತ್ಸಕರಾದ ಡಾ.ದಿವ್ಯಾ “ಬಾಯಿಯ ಕ್ಯಾನ್ಸರ್ ರೋಗದ ನಿರ್ಣಯ ಮತ್ತು ಶೀಘ್ರ ಪತ್ತೆ ಹಚ್ಚುವಿಕೆ ” ವಿಷಯ ಕುರಿತು ಉಪನ್ಯಾಸ ನೀಡಿ, ದೇಹದ ಯಾವುದೇ ಜೀವಕೋಶಕ್ಕೆ ಪದೇಪದೇ ರೋಗಕಾರಕಗಳಿಂದ ಪ್ರಚೋದನೆಯಾಗುವುದೇ ಕ್ಯಾನ್ಸರ್ ಬರಲು ಮೂಲ ಕಾರಣ. ಮಾನವನ ಜೀವನಶೈಲಿಯಲ್ಲಿನ ಏರುಪೇರುಗಳಿಂದಾಗಿ ಈ ಪ್ರಚೋದಕಾರಕಗಳು ದೇಹದ ಜೀವಕೋಶಗಳ ಮೇಲೆ ಪದೇ ಪದೇ ಆಕ್ರಮಣ ನಡೆಸಿ ಕ್ಯಾನ್ಸರ್ ಜೀವಕೋಶಗಳಾಗಿ ಪರಿವರ್ತಿಸುತ್ತವೆ ಎಂದರು.

ಸಾಹೇ ವಿವಿ ರಿಜಿಸ್ಟಾರ್  ಡಾ.ಅಶೋಕ ಮೆಹ್ತಾ, ಪರೀಕ್ಷಾ ನಿಯಂತ್ರಕ ಡಾ.ಗುರುಶಂಕರ್, ಶ್ರೀ ಸಿದ್ಧಾರ್ಥ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ.ಪ್ರವೀಣ್ ಬಿ ಕುಡ್ವ ,ಮೌಖಿಕ ಮತ್ತು ಮ್ಯಾಕ್ಸಿಲೋಫೇಶಿಯಲ್ ಸರ್ಜರಿ ವಿಭಾಗದ ಮುಖ್ಯಸ್ಥರಾದ ಡಾ. ಮಹೇಶ್ ಕುಮಾರ್ ಆರ್, ವಿಭಾಗದ ಡಾ.ವಿಷ್ಣುಪ್ರಿಯಾ, ಡಾ.ಚೇತನ, ಸ್ನಾತಕೋತ್ತರ ಪದವೀಧರರಾದ ಡಾ.ಶಿವಾನಿ, ಮಿಸ್ ಹರಿಪ್ರಿಯಾ ಅವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...