ತುಮಕೂರು | ನಂದಿಹಳ್ಳಿ ರಾಷ್ಟ್ರೀಯ ಹೆದ್ದಾರಿ ಭೂಸ್ವಾಧೀನ ಪ್ರಕ್ರಿಯೆಗೆ ವಿರೋಧ : ಜಿಲ್ಲಾಧಿಕಾರಿ ಸ್ಥಳ ಪರಿಶೀಲನೆ

Date:

Advertisements

ತುಮಕೂರು ನಗರದ ಹೊರವಲಯದಲ್ಲಿರುವ ನಂದಿಹಳ್ಳಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಬೈರಸಂದ್ರ ಗ್ರಾಮದ ರೈತರು ಭೂಸ್ವಾಧೀನ ಪ್ರಕ್ರಿಯೆಗೆ ವಿರೋಧ ವ್ಯಕ್ತಪಡಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರೈತರ ಆತಂಕ, ಸಮಸ್ಯೆಗಳು ಹಾಗೂ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಎದುರಾಗುತ್ತಿರುವ ಅಡಚಣೆಗಳನ್ನು ಗಮನಿಸಿದ ಅವರು, ನ್ಯಾಯಸಮ್ಮತ ಹಾಗೂ ಕಾನೂನುಬದ್ಧ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ರೈತರಿಗೆ ಭರವಸೆ ನೀಡಿದರು.

ನಂತರ ಕೆಸರುಮಡು ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿದ ಅವರು ಪಡಿತರ ವಿತರಣೆಯಲ್ಲಿ ತೂಕವನ್ನು ಪರಿಶೀಲಿಸಿದರು. ಪಡಿತರ ವಿತರಕನು ಎಲ್ಲಾ ಗ್ರಾಹಕರ ಬೆರಳಚ್ಚನ್ನು  ಮುಂಚಿತವಾಗಿ ಪಡೆದು ಬಳಿಕ ಒಟ್ಟಾರೆ ಎಲ್ಲರಿಗೂ ಅಕ್ಕಿ ವಿತರಿಸುತ್ತಿರುವುದನ್ನು ಕಂಡು, ವಿತರಕನನ್ನು ತರಾಟೆಗೆ ತೆಗೆದುಕೊಂಡರು. ವಿತರಣೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಬೇಕು. ಪ್ರತಿ ಗ್ರಾಹಕನಿಗೂ ಅವರ ಹಕ್ಕಿನಂತೆ ಪ್ರತ್ಯೇಕವಾಗಿ ಪಡಿತರ ವಿತರಿಸಬೇಕು ಎಂದು ಸೂಚಿಸಿದರು.

1002071598

ವಿತರಕನು ಸರಿಯಾದ ಪ್ರಮಾಣದಲ್ಲಿ ಅಕ್ಕಿ ಮತ್ತು ಇತರ ಸಾಮಾಗ್ರಿಗಳನ್ನು ವಿತರಿಸುತ್ತಿದ್ದಾನೆಯೇ ಎಂಬುದರ ಬಗ್ಗೆ ಗ್ರಾಹಕರಿಂದ ಅಭಿಪ್ರಾಯಗಳನ್ನು ಪಡೆದುಕೊಂಡರು. ಅಂಗಡಿಯಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವುದು, ದಾಸ್ತಾನು ಬಿಲ್‌ಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವಂತೆ ಸೂಚನೆ ನೀಡಿದರು.

 ಇದೇ ಸಂದರ್ಭದಲ್ಲಿ ಭೂ ದಾಖಲೆಗಳ ಇಲಾಖೆ ಉಪನಿರ್ದೇಶಕ ಭಾವನಾ ಬಸವರಾಜು, ತಹಸೀಲ್ದಾರ್ ರಾಜೇಶ್ವರಿ, ವಿಶೇಷ ಭೂ ಸ್ವಾಧೀನ ಅಧಿಕಾರಿ ಧರ್ಮಪಾಲ್ ಸೇರಿದಂತೆ ರಾಷ್ಟ್ರೀಯ ಹೆದ್ದಾರಿ ಭೂ ಸ್ವಾಧೀನ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X