ತುಮಕೂರು | ಜೂನ್ 11 ರಿಂದ ಆರೆಂಜ್-ಯಲ್ಲೋ ಅಲರ್ಟ್ : ಎಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಮನವಿ

Date:

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜೂನ್ 11 ರಿಂದ 14ರವರೆಗೆ ಜಿಲ್ಲೆಯಲ್ಲಿ ಭಾರಿ ಪ್ರಮಾಣದ ಗುಡುಗು-ಸಿಡಿಲು ಸಹಿತ ಗಾಳಿ-ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಮತ್ತು ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಪ್ರತಿಕೂಲ ಹವಾಮಾನ ಸಮಯದಲ್ಲಿ ಹೆಚ್ಚಿನ ಮುಂಜಾಗ್ರತೆವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆ ಶುಭ ಕಲ್ಯಾಣ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

- Advertisement -
WhatsApp Image 2024 04 02 at 1.06.58 PM 1

ಸಿಡಿಲು ಸಹಿತ ಮಳೆಯಾಗುವುದರಿಂದ ಸಿಡಿಲು ಬಡಿಯುವ ಪ್ರದೇಶದ ಬಗ್ಗೆ ರಾಜ್ಯದಿಂದ ಮುಂಚಿತವಾಗಿ ಸಾರ್ವಜನಿಕರಿಗೆ ಎಸ್‌ಎಂಎಸ್ ಅಲರ್ಟ್ ರವಾನಿಸಲಾಗುವುದು. ತುರ್ತಾಗಿ ಸುರಕ್ಷಿತವಾದ ತಗ್ಗು ಪ್ರದೇಶಕ್ಕೆ ತೆರಳಬೇಕು. ಕೃಷಿ ಕೆಲಸ, ಜಾನುವಾರು ಮೇಯಿಸಲು ಹೋಗಬಾರದು. ಲೋಹದ ತಗಡು ಮನೆಗಳು, ಮರ, ವಿದ್ಯುತ್ ಉಪಕರಣ/ಸರಬರಾಜು, ಮಾರ್ಗ/ಕಂಬ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಜಲಕಾಯಗಳು ಸೇರಿದಂತೆ ಇತರೆ ಪ್ರತ್ಯೇಕ ವಸ್ತುಗಳಿಂದ ದೂರವಿರಬೇಕು. ಕಬ್ಬಿಣದ ಸರಳುಗಳ ಛತ್ರಿ/ಮೊಬೈಲ್ ಫೋನ್ ಬಳಸಬಾರದು. ಮಿಂಚು ಒಬ್ಬರಿಂದ ಒಬ್ಬರಿಗೆ ಸಂಚರಿಸದಂತೆ, ಜನ ಸಂದಣಿಯಾಗದಂತೆ ಅಂತರ ಕಾಪಾಡಬೇಕು. ತುರ್ತು ಚಿಕಿತ್ಸೆಗೆ ಹತ್ತಿರದ ಆರೋಗ್ಯ ಕೇಂದ್ರಗಳ ಮಾಹಿತಿಯನ್ನು ಹೊಂದಿರಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...
Malallale

 ನದಿ, ಹಳ್ಳ ಕೆರೆ ದಡಗಳಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನ-ಕರುಗಳನ್ನು ತೊಳೆಯುವುದು ಹಾಗೂ ಫೋಟೋ/ಸೆಲ್ಫಿಗಳನ್ನು ತೆಗೆಯುವುದು, ಅಪಾಯವಿರುವ ಸೇತುವೆಗಳ ಮೇಲೆ ಸಂಚರಿಸುವುದು ಮತ್ತು ಇತರೆ ಚಟುವಟಿಕೆ ನಡೆಸದಂತೆ ಎಚ್ಚರವಹಿಸಬೇಕು. ಪೋಷಕರು ತಮ್ಮ ಮಕ್ಕಳನ್ನು ಅಪಾಯಕಾರಿಯಾಗಿ ಹರಿಯುವ ನೀರು ಮತ್ತು ಕೆರೆ/ಕಟ್ಟೆಗಳಲ್ಲಿ ಈಜಲು ಬಿಡದಂತೆ ಜಾಗೃತಿವಹಿಸಬೇಕು. ದುರ್ಬಲ ಮಣ್ಣಿನ ಮನೆ/ಕಟ್ಟಡ, ಮರದ ಕೊಂಬೆ, ಜಲಕಾಯ, ವಿದ್ಯುತ್ ವಸ್ತುಗಳಿಂದ ದೂರವಿರಬೇಕು. ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿರಸಬೇಕು. ತೋಟಗಾರಿಕೆ ಬೆಳೆಗಳನ್ನು ಮಳೆಗೆ ಹಾನಿಯಾಗದಂತೆ ಸೂಕ್ತ ರೀತಿಯಲ್ಲಿ ಸಂರಕ್ಷಿಸಿಕೊಳ್ಳಬೇಕು.  

 ಕೆರೆ-ಕಟ್ಟೆಗಳ ಏರಿ/ಬಂಡ್/ಕೋಡಿಗಳಲ್ಲಿ ನೀರು ಸೋರಿಕೆ ಕಂಡು ಬಂದಲ್ಲಿ, ರಸ್ತೆಗಳ ಮೇಲೆ ಅಪಾಯಕಾರಿ ಮಟ್ಟದಲ್ಲಿ ನೀರು ಹರಿಯುತ್ತಿದ್ದಲ್ಲಿ/ನಿಂತಿದ್ದಲ್ಲಿ, ಮರ ಬಿದ್ದು ವಾಹನ ಸಂಚಾರ ಸ್ಥಗಿತವಾಗಿದ್ದಲ್ಲಿ, ವಿದ್ಯುತ್ ಲೈನ್/ ಕಂಬ ಬಿದ್ದಿದ್ದಲ್ಲಿ, ಮನೆಯೊಳಗಡೆ ನೀರು ನುಗ್ಗಿದಲ್ಲಿ, ಮನೆ ಗೋಡೆ/ಮೇಲ್ಛಾವಣಿ ಬಿದ್ದಿದ್ದಲ್ಲಿ, ಬೆಳೆ ನಷ್ಟ ಇತರೆ ತುರ್ತು ಪರಿಸ್ಥಿತಿಯಲ್ಲಿ ಸಹಾಯವಾಣಿ ಸಂಖ್ಯೆ: 7304975519 ಅಥವಾ ದೂರವಾಣಿ ಸಂಖ್ಯೆ : 0816-2213400, 155304; ಬೆಸ್ಕಾಂ: 1912/ 8277884019ನ್ನು ಸಂಪರ್ಕಿಸಬೇಕೆಂದು ಸಾರ್ವಜನಿಕರಲ್ಲಿ ಅವರು ಮನವಿ ಮಾಡಿದ್ದಾರೆ.

ಅಧಿಕಾರಿಗಳಿಗೆ ಸೂಚನೆ :  

 ಜಿಲ್ಲೆಯಲ್ಲಿ ಬಹುತೇಕ ಭಾಗಗಳಲ್ಲಿ 64.5 ರಿಂದ 204.5 ಮಿ.ಮೀ.ನಷ್ಟು ಭಾರಿ ಪ್ರಮಾಣದಲ್ಲಿ ಮಳೆ ಸಾಧ್ಯತೆಯಿರುವುದರಿಂದ, ಯಾವುದೇ ಜನ-ಜಾನುವಾರುಗಳ ಜೀವ ಹಾನಿಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

 ಭಾರಿ ಮಳೆ/ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಪ್ರತಿ ಗ್ರಾಮಗಳಲ್ಲಿ ಡಂಗೂರ ಸಾರುವುದು/ಮೈಕ್ ಮೂಲಕ ಜನರಿಗೆ ಜಾಗೃತಿ ಮೂಡಿಸಬೇಕು. ನಿರಂತರ ಮಳೆಯಿಂದ ದುರ್ಬಲ ಮಣ್ಣಿನ ಮನೆ/ಕಟ್ಟಡ, ಮರದ ಕೊಂಬೆ, ಜಲಕಾಯ, ವಿದ್ಯುತ್ ವಸ್ತುಗಳಿಂದ ದೂರವಿರುವ ಬಗ್ಗೆ ಎಚ್ಚರವಹಿಸಲು ವ್ಯಾಪಕ ಪ್ರಚಾರ ನೀಡಬೇಕು. ಶಾಲಾ/ಅಂಗನವಾಡಿ ಮೇಲ್ಛಾವಣಿ/ಗೋಡೆ ಹಾಗೂ ನದಿ/ಹಳ್ಳ/ಕೆರೆ/ಕಟ್ಟೆ/ರಸ್ತೆ/ಸೇತುವೆ/ವಿದ್ಯುತ್ ಸಂಪರ್ಕ ಇತ್ಯಾದಿ ಮೂಲಭೂತ ಸೌಕರ್ಯಗಳ ಸುಸ್ಥಿತಿ ಬಗ್ಗೆ ಪರಿಶೀಲಿಸಬೇಕು. ಹಠಾತ್ ಪ್ರವಾಹವಾಗುವ ತಗ್ಗು ಪ್ರದೇಶದ ವಾರ್ಡ್/ಅಂಡರ್ ಪಾಸ್/ರಸ್ತೆಗಳ ಕುರಿತು ಮುನ್ನೆಚ್ಚರಿಕೆ ವಹಿಸಬೇಕು ಹಾಗೂ ಅರ್ಹ ಪ್ರಕರಣಗಳಿಗೆ ನಿಯಮಾನುಸಾರ ಎನ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ತುರ್ತು ಪರಿಹಾರ ನೀಡಬೇಕೆಂದು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...