ತುಮಕೂರು | ಬುದ್ಧರ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಂಡಾಗ ನಮ್ಮ ಜೀವನ ಸಾರ್ಥಕ : ಗೃಹ ಸಚಿವ ಡಾ. ಜಿ. ಪರಮೇಶ್ವರ್

Date:

 ಭಗವಾನ್ ಬುದ್ಧರ ತತ್ವ ಸಿದ್ಧಾಂತಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಜೀವನವು ಸಾರ್ಥಕವಾಗುತ್ತದೆ ಎಂದು ರಾಜ್ಯದ ಗೃಹ ಸಚಿವ ಹಾಗೂ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಜಿ ಪರಮೇಶ್ವರ್ ತಿಳಿಸಿದರು. 

- Advertisement -

ತುಮಕೂರು ನಗರದ ಹೊರವಲಯದಲ್ಲಿರುವ ಸಿದ್ಧಾರ್ಥ ನಗರದಲ್ಲಿ ಶ್ರಿ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯವತಿಯಿAದ ಆಯೋಜಿಸಿದ್ಧಂತಹ ಬುದ್ಧ ಪೌರ್ಣಮಿಯ ಕಾರ್ಯಕ್ರಮದಲ್ಲಿ ಬುದ್ಧನ ವಿಗ್ರಹಕ್ಕೆ ಪುಷ್ಪಾರ್ಚನೆಯನ್ನು ಮಾಡಿ ಮಾತನಾಡಿದ ಅವರು,  ಭಗವಾನ್ ಬುದ್ಧರು ಮನುಷ್ಯ ಕುಲಕ್ಕೆ ನೀಡಿದ ವಿಚಾರಗಳು, ತತ್ವ ಸಿದ್ಧಾಂತಗಳು ಸಾವಿರಾರು ವರ್ಷಗಳು ಕಳೆದರೂ ಇನ್ನೂ ಜೀವಂತವಾಗಿದೆ ಹಾಗೂ ಮುಂದೆಯೂ ಇರುತ್ತದೆ ಎಂದರೆ ಅವರ ವಿಚಾರಗಳು ಎಷ್ಟು ಮಹತ್ವದ್ದು ಎಂದು ಯೋಚಿಸಬೇಕು. ಮನುಷ್ಯ ಪ್ರತಿನಿತ್ಯ ಅನುಭವಿಸುವ ದುಃಖ ದುಮ್ಮಾನಗಳಿಗೆ, ಕಷ್ಟಗಳಿಗೆ ಮುಕ್ತಿದೊರೆಯುವ ಮಾರ್ಗವನ್ನು ಮಾನವ ಕುಲಕ್ಕೆ ತೋರಿಸಿಕೊಟ್ಟವರು ಭಗವಾನ್ ಬುದ್ಧರು. ಭಗವಾನ್ ಬುದ್ಧ ಹಾಗೂ ಅವರ ವಿಚಾರಗಳು ಯಾವಕಾಲಕ್ಕೂ ಪ್ರಸ್ತುತವೆನಿಸುತ್ತದೆ. ಇಂತಹ ವಿಚಾರಗಳನ್ನು ತತ್ವ ಸಿದ್ಧಾಂತಗಳನ್ನು ಸಾಕಷ್ಟು ರಾಷ್ಟçಗಳು ಅಳವಡಿಸಿಕೊಂಡು ಮುಂದುವರೆಯುತ್ತಿದೆ ಎಂದು ಹೇಳಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

.ಸಿಬಿಐ ನ್ಯಾಯಲಯದ ನ್ಯಾಯಾಧೀಶರಾದ ಎಚ್ ಎ ಮೋಹನ್ ಮಾತನಾಡಿ ಮಾನವ ಕುಲಕ್ಕೆ ಶಾಂತಿಯನ್ನು ಭೋದಿಸಿದ ಮಾನವನ ಕಷ್ಟ ದುಃಖಗಳಿಗೆ ಸೂಕ್ತ ಮಾರ್ಗವನ್ನು ಸೂಚಿಸಿದವರು ಮಹಾನ್ ಚೇತನ ಗೌತಮ ಬುದ್ಧ. ಇವರ ತತ್ವಗಳನ್ನು ನಾವು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. 

ಸಾಹೇ ವಿವಿಯ ಉಪಕುಲಪತಿಗಳಾದ ಡಾ. ಕೆ.ಬಿ. ಲಿಂಗೇಗೌಡ ಮಾತನಾಡಿ ಭಗವಾನ್ ಬುದ್ಧರ ತತ್ವ ಸಿದ್ಧಾಂತಗಳನ್ನು ಅಂಬೇಡ್ಕರ್ ಅವರ ವಿಚಾರಗಳನ್ನು ಮೈಗೂಡಿಸಿಕೊಂಡಿದ್ದವರು ಡಾ.ಎಚ್.ಎಂ. ಗಂಗಾಧರಯ್ಯನವರು, ಹಾಗಾಗಿಯೇ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಸಾಕಷ್ಟು ಬಡ ವಿದ್ಯಾರ್ಥಿಗಳಿಗೆ ವಿದ್ಯಾದಾನವನ್ನು ಮಾಡಿದ್ದಾರೆ. ಇವರ ಹಾದಿಯಲ್ಲೇ ಡಾ. ಜಿ ಪರಮೇಶ್ವರ ರವರೂ ಕೂಡ ನಡೆಯುತ್ತಿದ್ದಾರೆ. ಈ ಸಂಸ್ಥೆ ಇನ್ನು ಎತ್ತರಕ್ಕೆ ಬೆಳೆಯಲಿ ಇದಕ್ಕೆ ನಮ್ಮೆಲ್ಲರ ಬೆಂಬಲ ಇದೆ ಎಂದು ಆಶಯ ವ್ಯಕ್ತಪಡಿಸಿದರು. 

ಇನ್ನು ಈ ಕಾರ್ಯಕ್ರಮದಲ್ಲಿ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ನಂಜುಂಡಪ್ಪ, ಬೀದರ್ ಬೌದ್ಧ ವಿಹಾರದ ಭಿಕ್ಷಷು ಪೂಜ್ಯ ಬಂತೇಜಿರವರು, ಸಾಹೇ ವಿವಿಯ ಕುಲಸಚಿವರಾದ ಡಾ. ಅಶೋಕ್ ಮೆಹತ, ಪರಿಕ್ಷಾಂಗ ನಿಯಂತ್ರಕ ಡಾ. ಗುರುಶಂಕರ್, ಶ್ರೀ ಸಿದ್ಧಾರ್ಥ ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ಪ್ರವೀಣ್ ಕುಡುವ, ಕುಲಪತಿಗಳ ಆಪ್ತ ಸಲಹೆಗಾರರಾದ ಡಾ. ವಿವೇಕ್ ವೀರಯ್ಯ, ವೈದ್ಯಕೀಯ ಅಧೀಕ್ಷಕರಾದ ಡಾ. ವೆಂಕಟೇಶ್, ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಂ.ಎಸ್ ರವಿಪ್ರಕಾಶ್ ಹಾಗೂ ಸಂಸ್ಥೆಯ ವಿವಿಧ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ತುಮಕೂರು ದಸರಾಕ್ಕೆ ತಾರಾ ಮೆರುಗು : 11 ದಿನ, ನೂರಾರು ಆಕರ್ಷಣೆ

ದೇವಿಯ ಆರಾಧನೆ, ತಾರೆಯರ ಕಲರವ, ಸಂಗೀತದ ರಸದೌತಣ, ನೃತ್ಯ ವೈಭವ, ಕ್ರೀಡಾ...