ತುಮಕೂರು | ನಾಟಕಗಳು ನಮ್ಮ ಸಂಸ್ಕೃತಿಯ ಕೊಂಡಿ: ರಂಗ ನಿರ್ದೇಶಕ ರಾಜಪ್ಪ ದಳವಾಯಿ

Date:

ನಾಟಕಗಳು ಸಂಸ್ಕೃತಿಯ ಕೊಂಡಿ. ಕನ್ನಡ ರಂಗಭೂಮಿಯ ಇತಿಹಾಸದಲ್ಲಿ ಗುಬ್ಬಿ ಕಂಪನಿಯ ಕೊಡುಗೆ ಅವಿಸ್ಮರಣೀಯ. ರಂಗ ದಿಗ್ಗಜರನ್ನು ತಯಾರು ಮಾಡುವ ವಿಶ್ವವಿದ್ಯಾಲಯ ಎಂದೆನಿಸಿದೆ. ಆದ್ದರಿಂದಲೇ ಇಂದಿಗೂ ಜನಮಾಸದಲ್ಲಿ ಉಳಿದುಕೊಳ್ಳಲು ಸಾಧ್ಯವಾಗಿದೆ ಎಂದು ಸಾಹಿತಿ, ಹಿರಿಯ ರಂಗನಿರ್ದೇಶಕ ಹಾಗೂ ಪ್ರಾಧ್ಯಾಪಕ ರಾಜಪ್ಪದಳವಾಯಿ ತಿಳಿಸಿದರು.

- Advertisement -

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಗುಬ್ಬಿ ವೀರಣ್ಣ ಟ್ರಸ್ಟ್‌ನ ದಶಮಾನೋತ್ಸವ ಅಂಗವಾಗಿ ನಡೆದ ಜೀವಿತ ನಾಟಕೋತ್ಸವ ಹಾಗೂ ಹಿರಿಯ ರಂಗಕರ್ಮಿ ಈ ಸಾಲಿನ ಗುಬ್ಬಿ ವೀರಣ್ಣ ಪ್ರಶಸ್ತಿ ಪುರಸ್ಕೃತ, ಲೇಖಕ, ರಂಗ ನಿರ್ದೇಶಕ ಗುಬ್ಬಿ ಚನ್ನಬಸಯ್ಯ ಅವರಿಗೆ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ವೀರಣ್ಣನವರಿಂದಾಗಿಯೇ ವಿಶ್ವ ರಂಗಭೂಮಿಯಲ್ಲಿ ಗುಬ್ಬಿಯು ಪ್ರಖ್ಯಾತಿಯನ್ನು ಗಳಿಸಲು ಸಾಧ್ಯವಾಗಿದೆ. ವೀರಣ್ಣನವರು ಕಂಪನಿಯನ್ನು ಕಟ್ಟಿ ಕೇವಲ ನಾಟಕ ಪ್ರದರ್ಶನಕ್ಕೆ ಸೀಮಿತರಾಗದೆ, ಶ್ರೇಷ್ಠ ಕಲಾವಿದರನ್ನು ಈ ನಾಡಿಗೆ ಪರಿಚಯಿಸಿದರು” ಎಂದರು.

“ಗುಬ್ಬಿ ಕಂಪನಿಯಲ್ಲಿ ಬಳಸುತ್ತಿದ್ದ ಪರಿಕರಗಳನ್ನು ಸಂಗ್ರಹಿಸಿ ವಸ್ತುಸಂಗ್ರಹಾಲಯವನ್ನಾಗಿಸಿದರೆ ಇಂದಿನ ಪೀಳಿಗೆಗೆ ಅನುಕೂಲವಾಗುವುದು. ರಂಗ ಚಟುವಟಿಕೆಗಳು ನಿರಂತರವಾಗಿದ್ದಾಗ ಮಾತ್ರ ಜನರಲ್ಲಿ ಆಸಕ್ತಿ ಮೂಡಿಸಲು ಸಾಧ್ಯವಾಗುತ್ತದೆ. ಆದ್ದರಿಂದ ಟ್ರಸ್ಟ್‌ನವರು
ವಾರಕ್ಕೊಮ್ಮೆಯಾದರೂ ನಾಟಕ ಪ್ರದರ್ಶನ ಆಯೋಜಿಸುವುದು ಉತ್ತಮ” ಎಂದು ಸಲಹೆ ನೀಡಿದರು.

ಟ್ರಸ್ಟಿ ಲಕ್ಷ್ಮಣದಾಸ್ ಮಾತನಾಡಿ, “ಕೋವಿಡ್ ಕಾರಣದಿಂದ ಹಿಂದಿನ ವರ್ಷಗಳಲ್ಲಿ ರಂಗ
ಚಟುವಟಿಕೆಗಳು ಹಿನ್ನಡೆಗೊಂಡಿದ್ದವು. ಇನ್ಮುಂದೆ ಟ್ರಸ್ಟ್ ವತಿಯಿಂದ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಹೊಸ ಯೋಜನೆಗಳನ್ನು ರೂಪಿಸುತ್ತಿದೆ. ಮುಂದಿನ ದಿನಗಳಲ್ಲಿ ನಿರಂತರವಾಗಿ ಕಾರ್ಯಕ್ರಮಗಳನ್ನು ಅಯೋಜನೆ ಮಾಡುವ ಮೂಲಕ ರಂಗಭೂಮಿಗೆ ಹೊಸ ಚೈತನ್ಯವನ್ನು ನೀಡುವ ಕೆಲಸ ಮಾಡುತ್ತೇವೆ” ಎಂದು ಹೇಳಿದರು.

ರಂಗಕರ್ಮಿ ಚನ್ನಬಸಯ್ಯ ಅಭಿನಂದನೆ ಸ್ವೀಕರಿಸಿ ಮಾತನಾಡಿ, “ಆಧುನಿಕತೆ ಬೆಳೆದಂತೆ ನಾಟಕಗಳ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿರುವುದು ದುರಾದೃಷ್ಟಕರ. ಈ ಹಿಂದೆ ನಾಟಕ ಕಂಪನಿಯವರೇ ಊರುಗಳಿಗೆ ತೆರಳಿ ಪ್ರದರ್ಶನ ನೀಡುತ್ತಿದ್ದು, ಜನರಿಂದ ಉತ್ತಮ ಸ್ಪಂದನೆ ದೊರೆಯುತ್ತಿತ್ತು. ಆದರೆ ಇಂದು ಅವೆಲ್ಲವೂ ಕೇವಲ ನೆನಪುಗಳಾಗಿವೆ. ಈ ನಿಟ್ಟಿನಲ್ಲಿ ರಂಗಕಲೆಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಎಲ್ಲರೂ ಒಗ್ಗೂಡಿ ಮಾಡಬೇಕಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಫೆ.26ರಿಂದ ಸಿದ್ಧಗಂಗಾ ಮಠದಲ್ಲಿ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ

ಕಾರ್ಯಕ್ರಮದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕ ಚಕ್ರಪಾಣಿ, ಕನ್ನಡ ಸಂಸ್ಕೃತಿ ಇಲಾಖೆಯ ನಿರ್ದೇಶಕ ರವಿಕುಮಾರ್, ಜೀವಿತ ನಾಟಕೋತ್ಸವದ ಸಂಚಾಲಕ ರಂಗಯ್ಯ, ಗುಬ್ಬಿ ವೀರಣ್ಣ ಟ್ರಸ್ಟ್‌ನ ಡಾ ರಾಜೇಶ್, ಗುಬ್ಬಿ ರಂಗಾಸಕ್ತರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...