ತುಮಕೂರು | ಪೊಲೀಸರ ಮನೆಗೆ ಕನ್ನ; ಸಿಕ್ಕಿಬಿದ್ದ ಕಳ್ಳರು

Date:

ಪೊಲೀಸರ ಮನೆಗೆ ನುಗ್ಗಿ ಚಿನ್ನಾಭರಣ ದೋಚುವಾಗ ಕಳ್ಳರು ಸಿಕ್ಕಿಬಿದ್ದಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ವಿದ್ಯಾನಗರದಲ್ಲಿ ನಡೆದಿದೆ.

- Advertisement -

ಬಡವನಹಳ್ಳಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೆಬಲ್‌ ಮಹೇಶ್ ಅವರು ಕುಟುಂಬ ಸಹಿತ ಹೊರಗೆ ಹೋಗಿದ್ದರು. ಕುಟುಂಬಸ್ಥರು ಯಾರೂ ಇಲ್ಲದ್ದನ್ನು ಖಚಿತ ಪಡಿಸಿಕೊಂಡ ನಾಲ್ವರು ಕಳ್ಳರು ಕೈಗೆ ಗ್ಲೌಸ್‌ ಹಾಕಿಕೊಂಡು ಮಾರಕಾಸ್ತ್ರಗಳನ್ನು ಹಿಡಿದು ಬಾಗಿಲ ಬೀಗ ಮುರಿದಿದ್ದಾರೆ. ಮನೆಯೊಳಗೆ ಇಬ್ಬರು ಹೋದರೆ, ಮತ್ತಿಬ್ಬರು ತಂದಿದ್ದ ಕಾರಿನೊಳಗೆ ಕುಳಿತು ಸುತ್ತಲೂ ಪರಿಶೀಲಿಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಖದೀಮರ ಚಲನವಲನ ಗಮನಿಸಿದ ಅಕ್ಕ-ಪಕ್ಕದ ಮನೆಯವರು ಅನುಮಾನಗೊಂಡು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿದ್ದು, ಮನೆಯ ಹೊರಗೆ ಕಾರಿನಲ್ಲಿದ್ದ ಇಬ್ಬರು ಖದೀಮರು ಪರಾರಿಯಾಗಿದ್ದಾರೆ.

ಮನೆಯೊಳಗಿದ್ದ ಇನ್ನಿಬ್ಬರು ಖದೀಮರನ್ನು ಹಿಡಿಯಲು ಪೊಲೀಸರು ಮುಂದಾಗಿದ್ದಾರೆ. ಈ ವೇಳೆ ಪೊಲೀಸರ ಮೇಲೆಯೇ ಕಳ್ಳರು ಹಲ್ಲೆಗೆ ಯತ್ನಿಸಿದ್ದಾರೆ. ಆದರೂ, ಆ ಇಬ್ಬರನ್ನೂ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಾರ್ನಾಡ್ ರಂಗೋತ್ಸವ; ‘ರಂಗ ಚಿಂತನೆ’ ಪುಸ್ತಕ ಬಿಡುಗಡೆ

ಅವರಲ್ಲೊಬ್ಬ ಚಾಕುವಿನಿಂದ ತಾನೇ ಹೊಟ್ಟೆಗೆ ಚುಚ್ಚಿಕೊಂಡು ಹೈಡ್ರಾಮಾ ಮಾಡಿದ್ದಾನೆ. ಸ್ಥಳೀಯರ ಸಹಾಯದೊಂದಿಗೆ ಸೆರೆ ಸಿಕ್ಕ ಈ ಇಬ್ಬರು ಖದೀಮರನ್ನು ಹಗ್ಗದಿಂದ ಕಟ್ಟಿ ಹಾಕಿದ್ದಾರೆ. ಬಂಧಿತರು ರಿಯಾದ್ ಮತ್ತು ಖಾಲಿದ್ ಎಂದು ತಿಳಿದುಬಂದಿದೆ.

ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿ ಹಾಗೂ ಆರೋಪಿಯನ್ನು ಶಿರಾ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿರಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಾರಿಯಾಗಿರುವ ಮತ್ತಿಬ್ಬರು ಖದೀಮರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದು, ತನಿಖೆ ಮುಂದುವರೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಬ್ಬಿಗೆ ರೂ.5,500 ಬೆಂಬಲ ಬೆಲೆ ಆಗ್ರಹ: ಬಿರುಬಿಸಿಲಿಗೆ ಜಗ್ಗದೇ ಸಾಗಿದ ರೈತ ಹೋರಾಟ!

ಸೆಪ್ಟೆಂಬರ್ 29 ರಂದು ಹುಬ್ಬಳ್ಳಿಯಲ್ಲಿ ಲಕ್ಷಾಂತರ ರೈತರು ಪ್ರತಿಭಟನೆ ನಡೆಸಿದ್ದರು. ನಂತರ...

ಸಿಂಧನೂರು | ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ತಲೆಕೊಟ್ಟ ಅನಾಮಧೇಯ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ...

ರಾಯಚೂರು | ದೇವದುರ್ಗದಲ್ಲಿ ರಕ್ತನಿಧಿ ಕೇಂದ್ರ ಲೋಕಾರ್ಪಣೆ; 100ಕ್ಕೂ ಹೆಚ್ಚು ಜನರಿಂದ ಸ್ವಯಂಪ್ರೇರಿತ ರಕ್ತದಾನ

ಪಟ್ಟಣದಲ್ಲಿ ರಕ್ತನಿಧಿ ಕೇಂದ್ರವನ್ನು ಲೋಕಾರ್ಪಣೆ ಮಾಡಲಾಗಿದ್ದು, ಈ ಸಂದರ್ಭದಲ್ಲಿ 100ಕ್ಕೂ ಹೆಚ್ಚು...

ರಾಯಚೂರು | ಗಾಂಜಾ ಮಾರಾಟ ಪ್ರಕರಣ: ಮೂವರು ಆರೋಪಿಗಳಿಗೆ ತಲಾ 1 ವರ್ಷ ಜೈಲು, ₹25 ಸಾವಿರ ದಂಡ

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ...